ಗೆಲುವಿನ ಹಾದಿಯಲ್ಲಿ ನಳಿನ್‌ ವಿಜಯೋತ್ಸವ

ಧರ್ಮಸ್ಥಳ, ಕೊಕ್ಕಡ, ಕನ್ಯಾಡಿ, ಸೌತಡ್ಕ ಕ್ಷೇತ್ರ ದರ್ಶನ; ತಾಯಿಯಿಂದ ಆಶೀರ್ವಾದ

Team Udayavani, May 25, 2019, 6:00 AM IST

w-10

ನಳಿನ್‌ ಕುಮಾರ್‌ ಕಟೀಲು ಅವರು ಡಾ| ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬೆಳ್ತಂಗಡಿ: ಹ್ಯಾಟ್ರಿಕ್‌ ವಿಜಯ ವನ್ನು ಗುರುವಾರ ದಾಖಲಿಸಿದ ನಳಿನ್‌ ಕುಮಾರ್‌ ಕಟೀಲು ಶುಕ್ರವಾರ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಜತೆಗೆ ಪಾಲ್ತಾಡಿಯ ಮನೆಗೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.

ಮಧ್ಯಾಹ್ನ ಕೊಕ್ಕಡ ಶ್ರೀ ವೈದ್ಯನಾಥ ವಿಷ್ಣು ಮೂರ್ತಿ ದೇವಸ್ಥಾನದಿಂದ ವಿಜಯೋತ್ಸವ ಆರಂಭಗೊಂಡಿತು. ಕೊಕ್ಕಡ ಶ್ರೀ ಸೌತಡ್ಕ ಮಹಾ ಗಣಪತಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಡಾ| ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಿ ಶುಭಹಾರೈಸಿದರು. ಬಳಿಕ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಉಜಿರೆ ಮುಖೇನ ಬೆಳ್ತಂಗಡಿ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು.

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಕಾರ್ಯಕರ್ತರು ಮತ್ತು ಮುಖಂಡರು ಜಯಘೋಷ ಕೂಗಿದರು. ಗುರುವಾಯನಕೆರೆ ಯಾಗಿ ಮಡಂತ್ಯಾರು, ಪುಂಜಾಲಕಟ್ಟೆಯ ವರೆಗೆ ವಿಜಯ ಯಾತ್ರೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಸಂಸದರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌, ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್‌, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್‌ ಕುಮಾರ್‌, ಮಂಡಲದ ಪದಾಧಿಕಾರಿಗಳು, ಜಿ.ಪಂ., ತಾ.ಪಂ. ಸದಸ್ಯರು, ಸಂಘಟನೆಯ ಪ್ರಮುಖರು ಕಾರ್ಯಕರ್ತರು ಭಾಗವಹಿಸಿದರು.

ಕನ್ಯಾಡಿ ಕ್ಷೇತ್ರ ಭೇಟಿ
ಶುಕ್ರವಾರ ಸಂಜೆ ನಳಿನ್‌ ಅವರು ಧರ್ಮಸ್ಥಳ ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್‌, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸ್ವಾಮೀಜಿ ಕ್ಷೇತ್ರದ ವತಿಯಿಂದ ಸಂಸದರನ್ನು ಗೌರವಿಸಿದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.