ನಿರ್ವಹಣೆ ಇಲ್ಲದೆ ಸೊರಗಿದ ಸೊರಕೆ ಕಿಂಡಿ ಅಣೆಕಟ್ಟು

Team Udayavani, Feb 7, 2019, 5:25 AM IST

february-4.jpg

ನರಿಮೊಗರು : ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಂತರ್ಜಲ ವೃದ್ಧಿಗೆ ಪೂರಕವಾದ ಯೋಜನೆಯೊಂದು ಹಳ್ಳ ಹಿಡಿದಿದೆ. ಮುಂಡೂರು ಗ್ರಾ.ಪಂ. ವ್ಯಾಪ್ತಿಯ ಸರ್ವೆ ಗ್ರಾಮದ ಸೊರಕೆಯಲ್ಲಿ 20 ವರ್ಷಗಳ ಹಿಂದೆ 20 ಲಕ್ಷ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟು ಸದ್ಯ ಉಪಯೋಗ ಶೂನ್ಯವಾಗಿದೆ.

ಸುಮಾರು 35 ಮೀ. ಅಗಲ ಮತ್ತು 2 ಮೀಟರ್‌ ಎತ್ತರವಿರುವ ಈ ಅಣೆಕಟ್ಟು ಪ್ರಸ್ತುತ 2 ಕೋಟಿ ರೂ. ಮೌಲ್ಯದ ಯೋಜನೆಯಾಗಿದೆ. ನಿರ್ಮಾಣಗೊಂಡ 3 ವರ್ಷಗಳ ಕಾಲ ಹಲಗೆ ಹಾಕಲು ಆಸಕ್ತಿ ತೋರಿದ್ದ ಇಲಾಖೆ ನಿರ್ವಹಣೆಯ ವೆಚ್ಚ ಭರಿಸಿತ್ತು. ಅನಂತರ 17 ವರ್ಷಗಳ ಕಾಲ ಅಣೆಕಟ್ಟನ್ನು ನಿರ್ವಹಿಸುವ ಗೋಜಿಗೆ ಹೋಗಿಲ್ಲ. ಈ ನಡುವೆ ಅಣೆಕಟ್ಟೆಯ ಒಂದು ಬದಿಯ ತಡೆಗೋಡೆ ಕುಸಿದು ಹೋಗಿದೆ. ಹಲಗೆಗಳು ಶಿಥಿಲಗೊಂಡಿವೆ.

ಸ್ಥಳೀಯರ ಮುತುವರ್ಜಿ
ಮೂರು ವರ್ಷಗಳಿಂದ ಕಿಂಡಿ ಅಣೆೆಕಟ್ಟಿನ ಫಲಾನುಭವಿಗಳಲ್ಲಿ ಓರ್ವರಾದ ಜಿ.ಪಂ. ಮಾಜಿ ಸದಸ್ಯ ಸುರೇಶ್‌ ಕುಮಾರ್‌ ಸೊರಕೆ ಅವರು ವರ್ಷಕ್ಕೆ 25 ಸಾವಿರ ರೂ.ಗಳನ್ನು ವ್ಯಯಿಸಿ ಶಿಥಿಲಗೊಂಡಿರುವ ಹಲಗೆಗೆ ಟಾರ್ಪಾಲ್‌ ಹೊದಿಸಿ ಹಲಗೆ ಅಳವಡಿಸುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಹಲಗೆಗಳು ಶಿಥಿಲಗೊಂಡಿರುವ ಕಾರಣ ಹಾಗೂ ಹೊಳೆಯ ಒಂದು ಬದಿಯಲ್ಲಿ ತಡೆಗೋಡೆ ಇಲ್ಲದೆ ಗರಿಷ್ಠ ಸಾಮರ್ಥ್ಯದ ತನಕ ನೀರು ಶೇಖರಣೆಯಾಗುತ್ತಿಲ್ಲ.

ಈ ಕುರಿತು ಹಲವು ವರ್ಷಗಳಿಂದ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡುತ್ತಿರುವ ಸುರೇಶ್‌ ಕುಮಾರ್‌ ಸೊರಕೆ, ಹೊಸ ಮಾದರಿಯ ಹಲಗೆಗಳನ್ನು ನೀಡುವಂತೆಯೂ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಹಾಗೂ ಇತರ ದುರಸ್ತಿ ಕಾರ್ಯ ಮಾಡುವಂತೆಯೂ ಇಲಾಖೆಗೆ ಮನವಿ ಮಾಡಿದ್ದರು.

ಟೆಂಡರ್‌ ಆಗಿದ್ದರೂ ನಡೆದಿಲ್ಲ ಕಾಮಗಾರಿ!
ತಡೆಗೋಡೆ ನಿರ್ಮಾಣಕ್ಕೆ 2017ರಲ್ಲಿ ಟೆಂಡರ್‌ನಲ್ಲಿ ಕಾಮಗಾರಿಯ ಗುತ್ತಿಗೆ ಪಡೆದುಕೊಂಡವರು ಈವರೆಗೂ ಕಾಮಗಾರಿಯನ್ನು ಪ್ರಾರಂಭಿಸಿಲ್ಲ. ಕೇವಲ ನೋಟಿಸ್‌ಗಳನ್ನು ಜಾರಿ ಮಾಡಿ ಸುಮ್ಮನಾಗಿರುವ ಇಲಾಖೆ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕಿಂಡಿ ಅಣೆಕಟ್ಟಿನಲ್ಲಿ ಗರಿಷ್ಠ ಸಾಮರ್ಥ್ಯದ ವರೆಗೆ ನೀರು ನಿಂತರೆ ಒಲೆಮುಂಡೋವು ತನಕ 2 ಕಿ.ಮೀ. ಉದ್ದಕ್ಕೆ ನೀರು ಸಂಗ್ರಹಿಸುವ ಅವಕಾಶ ಇದೆ. ಸರ್ವೆ ಹಾಗೂ ಪುಣ್ಚಪ್ಪಾಡಿ ಗ್ರಾಮಗಳ ಅಂತರ್ಜಲ ಮಟ್ಟ ಸುಧಾರಣೆ ಆಗುವುದರಲ್ಲಿ ಸಂದೇಹವಿಲ್ಲ. 70 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಸರ್ವೆಯ ವೆಂಕಟರಮಣ ಭಟ್ ಅವರು ತಾತ್ಕಾಲಿಕ ಕಟ್ಟೆ ನಿರ್ಮಾಣ ಮಾಡಿ ಸರ್ವೆಗೆ ಸೊರಕೆಯಿಂದ ನೀರನ್ನು ತಮ್ಮ ಕೃಷಿಗಾಗಿ ಸರಬರಾಜು ಮಾಡುತ್ತಿದ್ದರು.

ನಿರ್ಲಕ್ಷ್ಯದಿಂದ ಬೇಸರ
ಸರ್ವೆ, ಪುಣ್ಚಪ್ಪಾಡಿ ಗ್ರಾಮಗಳ ಅಂತರ್ಜಲ ವೃದ್ಧಿಗಾಗಿ ನಾನು ಜಿ.ಪಂ. ಸದಸ್ಯನಾಗಿದ್ದಾಗ ಅನುಷ್ಠಾನಗೊಂಡ ಈ ಯೋಜನೆಯನ್ನು ಉಳಿಸಿಕೊಳ್ಳಬೇಕೆನ್ನುವ ಆಸಕ್ತಿಯಿಂದ ಅಣೆಕಟ್ಟೆಯ ನಿರ್ವಹಣೆ ಮಾಡುತ್ತಿದ್ದೇನೆ. ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯ  ಭಾರಿ ಬೇಸರ ತಂದಿದೆ. 
– ಸುರೇಶ್‌ ಕುಮಾರ್‌ ಸೊರಕೆ,
ಜಿ.ಪಂ. ಮಾಜಿ ಸದಸ್ಯ

ಕಾಮಗಾರಿ ಆರಂಭಿಸಿಲ್ಲ
ಸುರೇಶ್‌ ಕುಮಾರ್‌ ಸೊರಕೆ ಅವರಿಗೆ 3 ವರ್ಷಗಳ ನಿರ್ವಹಣ ವೆಚ್ಚ ಪಾವತಿ ಮಾಡಿಲ್ಲ. ಪಾವತಿಸಲು ಕ್ರಮವನ್ನು ಕೈಗೊಳ್ಳಲಾಗುವುದು. ತಡೆ ಗೋಡೆ ಕಾಮಗಾರಿಗೆ 2 ವರ್ಷಗಳ ಹಿಂದೆ ಟೆಂಡರ್‌ ಆಗಿದೆ.
-ಆನಂದ ಭಂಜನ್‌,
ಎಂಜಿನಿಯರ್‌, ನೀರಾವರಿ ಇಲಾಖೆ

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.