ನವರಾತ್ರಿ: ದೇಗುಲಗಳಲ್ಲಿ ಲಸಿಕೆ ಅಭಿಯಾನ
Team Udayavani, Oct 12, 2021, 5:10 AM IST
ಮಂಗಳೂರು/ ಉಡುಪಿ: ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನ ಗಳಿಗೆ ಬರುವ ಭಕ್ತರ ಅನುಕೂಲ ಕ್ಕಾಗಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾ ಗಿದ್ದು, ಮಂಗಳೂರಿನ ಕುದ್ರೋಳಿ, ಮಂಗಳಾದೇವಿ, ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ.
ನವರಾತ್ರಿಯ ಮೊದಲ ದಿನದಿಂದ ಮೊದಲ್ಗೊಂಡು ಈ ಅಭಿಯಾನ ನಡೆಯುತ್ತಿದ್ದು, ಪ್ರತೀ ದಿನ ಸರಾಸರಿ ಕುದ್ರೋಳಿ ಕ್ಷೇತ್ರದಲ್ಲಿ 100ರಿಂದ 150, ಮಂಗಳಾದೇವಿಯಲ್ಲಿ 60ರಿಂದ 70 ಹಾಗೂ ಕಟೀಲಿನಲ್ಲಿ 40ರಿಂದ 50 ಮಂದಿಗೆ ಲಸಿಕೆ ಹಾಕಲಾಗುತ್ತಿದೆ. ಬೆಳಗ್ಗೆ 10ರಿಂದ ರಾತ್ರಿ 9.30ರ ತನಕ ಲಸಿಕೆ ಹಾಕುವ ಕಾರ್ಯಕ್ರಮ ಇರುತ್ತದೆ ಎಂದು ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ| ಸುಜಯ್ ಭಂಡಾರಿ ಅವರು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನವರಾತ್ರಿ ವೇಳೆ ಲಸಿಕಾ ಅಭಿಯಾನ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಆಡಳಿತ ಮಂಡಳಿಯವರು ಸಮೀಪದ ಸರಕಾರಿ ಆಸ್ಪತ್ರೆಗಳಿಗೆ ತಿಳಿಸಿದರೆ ಅಂತಹ ದೇವಸ್ಥಾನಗಳ ವಠಾರದಲ್ಲಿ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾ ಲಸಿಕಾಧಿಕಾರಿ ಡಾ| ಎಂ.ಜಿ. ರಾಮ ತಿಳಿಸಿದ್ದಾರೆ.
ಇದನ್ನೂ ಓದಿ:ಆರ್‌ಸಿಬಿ ಮೇಲೆ ರೈಡ್ ಮಾಡಿದ ಕೆಕೆಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ