3 ವರ್ಷದಿಂದ ಹಾಸಿಗೆ ಹಿಡಿದಿರುವ ಯುವಕನಿಗೆ ಬೇಕಿದೆ ನೆರವು

Team Udayavani, Oct 5, 2019, 6:23 AM IST

z-21

ನಗರ: ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದರೂ ಪರಿಶ್ರಮದಿಂದ ದುಡಿದು ಜೀವನ ನಡೆಸುತ್ತಿದ್ದ ಯುವನೋರ್ವನಿಗೆ ಏಕಾಏಕಿ ಎದುರಾದ ಸಂಕಷ್ಟ ಪ್ರತಿದಿನ ಕಣ್ಣೀರಿನೊಂದಿಗೆ ಕಳೆಯುವಂತೆ ಮಾಡಿದೆ.

ತಾಲೂಕಿನ ಕುರಿಯ ಗ್ರಾಮದ ಬೊಳಂತಿಮಾರ್‌ ನಿವಾಸಿ ನಾರಾಯಣ ಪೂಜಾರಿ ಮತ್ತು ಚಂದ್ರಾವತಿ ಅವರ ಪುತ್ರ ಸತೀಶ್‌ ಪೂಜಾರಿ (31) ಈಗ ದುಡಿಯುವುದಿರಲಿ, ಹಾಸಿಗೆಯಿಂದ ಎದ್ದು ಕೂರುವುದಕ್ಕೂ ಆಗದ ಸ್ಥಿತಿಯಲ್ಲಿದ್ದಾರೆ. 2016 ರ ನ. 11ರಂದು ಬೆಳಗ್ಗೆ ದುಡಿಯಲು ತೆರಳಿ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಮೇಲಿನಿಂದ ಬಿದ್ದು ಗಾಯಗೊಂಡು ಅಂದಿನಿಂದ ಹಾಸಿಗೆ ಹಿಡಿದವರು ಅದೇ ಸ್ಥಿತಿಯಲ್ಲಿದ್ದಾರೆ.

ಅವರ ಸ್ಥಿತಿಗೆ ಇಡೀ ಕುಟುಂಬ ಇದ್ದಬದ್ದ ಹಣವನ್ನೆಲ್ಲ ಒಟ್ಟು ಮಾಡಿ ಚಿಕಿತ್ಸೆ ನೀಡುತ್ತಲೇ ಇದೆ. ದಾನಿಗಳು ಅಪಾರ ಪ್ರಮಾಣದಲ್ಲಿ ನೆರವು ನೀಡಿದ್ದಾರೆ. ಆದರೆ ಸತೀಶ್‌ ಪೂಜಾರಿ ಪೂರ್ಣ ಪ್ರಮಾಣದಲ್ಲಿ ಎದ್ದು ನಿಂತು ಎಲ್ಲರಂತಾಗಬೇಕಾದರೆ ಇನ್ನೂ ಹಲವು ಲಕ್ಷ ರೂ. ಬೇಕಾಗಿದೆ. ನಿರಂತರ ಚಿಕಿತ್ಸೆಯೂ ಬೇಕಾಗಿದೆ. ದಾನಿಗಳು, ಸಂಘ ಸಂಸ್ಥೆಗಳು ಮನಪೂರ್ವಕವಾಗಿ ಈ ಯುವಕನ ಸಂಕಷ್ಟಕ್ಕೆ ನೆರವಾದರೆ ಅವರು ಮತ್ತೆ ಆರೋಗ್ಯವಂತರಾಗಿ ಹಿಂದಿನ ಆರೋಗ್ಯವಂತ ಸ್ಥಿತಿಗೆ ಬರಲಿದ್ದಾರೆ.

ಬೆನ್ನುಹುರಿ ಮುರಿತದ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಸತೀಶ್‌ಗೆ 3 ವರ್ಷದಿಂದ ಶಸ್ತ್ರಚಿಕಿತ್ಸೆ, ಚಿಕಿತ್ಸೆ ಮಾಡಲಾಗುತ್ತಿದೆ. ಗೆಳೆಯರು ಹಣ ಹೊಂದಿಸಿ ನೀಡಿದ್ದಾರೆ. ಪ್ರತೀ ತಿಂಗಳು 8 ಸಾವಿರದಷ್ಟು ಹಣ ಔಷಧಿಗೆಂದೇ ಖರ್ಚಾ ಗುತ್ತಿದೆ. ಅಪಾರ ಭರವಸೆಯೊಂದಿಗೆ ತಿಂಗಳ ಹಿಂದೆ ತಮಿಳುನಾಡಿನ ವೆಲ್ಲೂರಿ ನಲ್ಲಿರುವ ಸಿಎಂಸಿ ಆಸ್ಪತ್ರೆಗೆ ದಾಖಲಾದ ಸತೀಶ್‌, ನಿರ್ಣಾಯಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇಲ್ಲೂ 10 ಲಕ್ಷ ರೂ. ಅಧಿಕ ವೆಚ್ಚವಾಗಿದೆ.

ಈ ನಿಟ್ಟಿನಲ್ಲಿ ಸಹೃದಯಿ ದಾನಿಗಳು ನೆರವು ನೀಡಬೇಕೆಂದು ಸತೀಶ್‌ ಪೂಜಾರಿ ಮತ್ತು ಅವರ ಹೆತ್ತವರು ವಿನಂತಿಸಿದ್ದಾರೆ. ಬ್ಯಾಂಕ್‌ ಖಾತೆ: ಸತೀಶ್‌ ಬಿ., ವಿಜಯ ಬ್ಯಾಂಕ್‌, ಕುಂಬ್ರ ಶಾಖೆ, ಖಾತೆ ಸಂಖ್ಯೆ- 124201012000 104 (ಐಎಫ್‌ಎಸ್‌ಸಿ ವಿಐಜೆಬಿ – 0001242). ಇದಕ್ಕೆ ಹಣ ಜಮೆ ಮಾಡಬಹುದು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.