100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡ: ಸಚಿವ ಆರಗ

Team Udayavani, Nov 9, 2021, 6:14 AM IST

100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡ: ಸಚಿವ ಆರಗ

ಸುಬ್ರಹ್ಮಣ್ಯ: ಪೊಲೀಸ್‌ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಅವರು ಸೋಮವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.”ಪೊಲೀಸರಿಗೆ ಗೃಹ 20-25′ ಯೋಜನೆಯಲ್ಲಿ 2025ರ ಹೊತ್ತಿಗೆ 10 ಸಾವಿರ ಮನೆ ನಿರ್ಮಾಣ ವಾಗಲಿದ್ದು, ವಸತಿ ಸಮಸ್ಯೆ ನಿವಾರಣೆಯಾಗಲಿದೆ. ಇಲಾಖೆಯಲ್ಲಿ ವಾರ್ಷಿಕ 4 ಸಾವಿರ ನೇಮಕಾತಿ ನಡೆಸಲಾಗುತ್ತಿದೆ. ಈಗ ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ ಎಂದರು.

ಗೋಹತ್ಯೆ ನಿಷೇಧ ಕಾಯಿದೆ ಈಗಾಗಲೇ ಜಾರಿಯಲ್ಲಿದ್ದು, ಹೊಸ ಕಾಯಿದೆಯಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರೂ ಸಹಕರಿಸಬೇಕು. ಉಪ್ಪಿನಂಗಡಿಯ ಇಳಂತಿಲದಲ್ಲಿ ಪತ್ತೆಯಾದ ಗ್ರೆನೇಡ್‌ ಪ್ರಕರಣದ ತನಿಖೆ ಎಲ್ಲ ರೀತಿಯಲ್ಲೂ ನಡೆಯುತ್ತಿದೆ ಎಂದರು.
ಈ ಮೊದಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:2025ರ ವೇಳೆಗೆ 10 ಲಕ್ಷ ಉದ್ಯೋಗ ಸೃಷ್ಟಿ ಗುರಿ: ಡಾ| ಸಿ.ಎನ್‌.ಅಶ್ವತ್ಥನಾರಾಯಣ

ಸುಬ್ರಹ್ಮಣ್ಯ ಶ್ರೀ ಭೇಟಿ
ಅರಗ ಜ್ಞಾನೇಂದ್ರ ಅವರು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.