ದ.ಕ.: ಲಕ್ಷ್ಮೀಪ್ರಸಾದ್‌ ನೂತನ ಎಸ್‌ಪಿ

Team Udayavani, Jan 1, 2019, 4:13 AM IST

laxmi-prasad.jpg

ಮಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ಈ ಹಿಂದೆ ಮರಳು ಮಾಫಿಯಾ ಪ್ರಕರಣವೊಂದರಲ್ಲಿ ಆರೋಪಿಯನ್ನು ಸುಮಾರು 6 ಕಿ.ಮೀ. ದೂರ ಬೆನ್ನಟ್ಟಿ ಹಿಡಿದು ಬಂಧಿಸಿದ್ದ ಯುವ ಐಪಿಎಸ್‌ ಪೊಲೀಸ್‌ ಅಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್‌ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಡಾ| ಬಿ.ಆರ್‌. ರವಿಕಾಂತೇ ಗೌಡ ಭಡ್ತಿ ಹೊಂದಿದ್ದು, ಬೆಂಗಳೂರಿನ ಅಗ್ನಿಶಾಮಕ ಸೇವೆಯ ಐಜಿಪಿಯಾಗಿ ನೇಮಿಸಲಾಗಿದೆ. 2018ರ ವರ್ಷಾಂತ್ಯದ ದಿನ 10 ಜನ ಹಿರಿಯ ಅಧಿಕಾರಿಗಳಿಗೆ ಭಡ್ತಿಯೂ ಸೇರಿದಂತೆ ಒಟ್ಟು 21 ಮಂದಿ ಐಪಿಎಸ್‌ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಅವರ ವರ್ಗಾವಣೆ ಮತ್ತು ಅವರಿಂದ ತೆರವಾದ ಸ್ಥಾನಕ್ಕೆ ಹೊಸ ಅಧಿಕಾರಿಯ ನೇಮಕವೂ ಇದರಲ್ಲಿ ಸೇರಿದೆ. 

2014ರಲ್ಲಿ ಐಪಿಎಸ್‌
ಬಿ.ಎಂ. ಲಕ್ಷ್ಮೀಪ್ರಸಾದ್‌ 2014ನೇ ಸಾಲಿನ ಐಪಿಎಸ್‌ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದಲ್ಲಿ ಎಸ್‌ಪಿ (ಭಯೋತ್ಪಾದನಾ ನಿಗ್ರಹ ಕೇಂದ್ರ- ಸಿಸಿಟಿ) ಆಗಿದ್ದರು.  ಬೆಂಗಳೂರಿನ ಕಸ್ತೂರಿನಗರ ನಿವಾಸಿಯಾಗಿರುವ ಅವರು ಎಂಜಿನಿಯರಿಂಗ್‌ ಪದವೀಧರರಾಗಿದ್ದು, ಆರ್‌.ವಿ. ಎಂಜಿನಿಯರಿಂಗ್‌ ಕಾಲೇಜಿನ ಹಳೆ ವಿದ್ಯಾರ್ಥಿ. ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ  ಅವರು ಎಚ್‌ಪಿ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದವರು. ಆದರೆ  ಐಎಎಸ್‌ / ಐಪಿಎಸ್‌ ಅಧಿಕಾರಿಯಾಗಬೇಕೆಂಬ ಮಹದಾಸೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪಾಸಾಗಿದ್ದರು. ಕೈತುಂಬ ಸಂಬಳ ಬರುತ್ತಿದ್ದ ಐಟಿ ಕಂಪೆನಿ ಉದ್ಯೋಗ ತೊರೆದು 2014ರಲ್ಲಿ ಐಪಿಎಸ್‌ ಅಧಿಕಾರಿಯಾಗಿ ಸೇರಿದ್ದು ಇವರ ವಿಶೇಷ. 

ಆರು ಕಿ. ಮೀ. ಬೆನ್ನಟ್ಟಿ  ಬಂಧನ
2017ರ ಜನವರಿಯಲ್ಲಿ ಬಾಗಲಕೋಟೆ ಎಎಸ್‌ಪಿ ಆಗಿದ್ದಾಗ ಮರಳು  ಮಾಫಿಯಾ ವಿರುದ್ಧ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು 6 ಕಿ.ಮೀ. ಬೆನ್ನಟ್ಟಿ ಓರ್ವನನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. 45 ನಿಮಿಷ ಕಾಲ ಬೆನ್ನಟ್ಟಿದ್ದು, ಈ ಕಾರ್ಯಾಚರಣೆ ಮನ್ನಣೆಗೆ ಪಾತ್ರವಾಗಿತ್ತು. ಬಳಿಕ ವಿಜಯಪುರ ಎಸ್‌ಪಿಯಾಗಿ, ಎಎನ್‌ಎಫ್ ಎಸ್‌ಪಿಯಾಗಿದ್ದರು. ವರ್ಷದಿಂದ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸುತ್ತಿದ್ದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.