ತೋಟಬೆಂಗ್ರೆಯಲ್ಲಿ ನಾಡದೋಣಿಗಳಿಗೆ ಹೊಸ ತಂಗುದಾಣ

Team Udayavani, Sep 1, 2021, 3:40 AM IST

Untitled-1

ಮಹಾನಗರ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮಂಗಳೂರಿನ ಮೀನುಗಾರಿಕೆ ದಕ್ಕೆಯ ಮೂರನೇ ಹಂತದ ವಿಸ್ತರಣೆಗೆ ಅನುಮೋದನೆ ದೊರಕಿ ಕಾಮಗಾರಿ ಆರಂಭವಾಗುವ ಆಶಾಭಾವ ಮೂಡಿರುವಾಗಲೇ, ನಗರದ ತೋಟಬೆಂಗ್ರೆಯ ಬದಿಯಲ್ಲಿ ನಾಡದೋಣಿಗಳ ತಂಗುವಿಕೆಗೆ ಪ್ರತ್ಯೇಕ ಜೆಟ್ಟಿ ನಿರ್ಮಾಣ ಯೋಜನೆಯೂ ಕೆಲವೇ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ.

ಮೀನುಗಾರಿಕೆ ಇಲಾಖೆಯ ನಬಾರ್ಡ್‌ 24ರ ಯೋಜನೆಯಡಿಯಲ್ಲಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯು ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ. 3.37 ಕೋ.ರೂ.ಗಳ ಈ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತು, ತಾಂತ್ರಿಕ ಮಂಜೂರಾತಿಯನ್ನೂ ಪಡೆಯಲಾಗಿದೆ. ಮಳೆ ಮುಗಿದ ಬಳಿಕ ಇಲ್ಲಿನ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದೆ.

ಬೆಂಗ್ರೆ ಭಾಗದಲ್ಲಿ ನಡೆಯುತ್ತಿರುವ ಮೂರನೇ ಮೀನುಗಾರಿಕೆ ಜೆಟ್ಟಿಯ ಪಕ್ಕಕ್ಕೆ ಹೊಂದಿಕೊಂಡ ಭಾಗದಲ್ಲಿ ಹೊಸ ನಾಡದೋಣಿಗಳ ನಿಲುಗಡೆಯ ಜೆಟ್ಟಿಗೆ ಉದ್ದೇಶಿಸಲಾಗಿದೆ. ನಾಡದೋಣಿಗಳ ನಿಲುಗಡೆಗೆ ಮಂಗಳೂರು ಬಂದರು ವ್ಯಾಪ್ತಿಯಲ್ಲಿ ಸೂಕ್ತ ವ್ಯವಸ್ಥೆಗಳು ಇಲ್ಲ ಎಂಬ ನೆಲೆಯಲ್ಲಿ ಬೆಂಗ್ರೆ ಪರಿಸರದ ನಾಡದೋಣಿ ಮೀನುಗಾರರು ಹಲವು ವರ್ಷಗಳಿಂದ ಮುಖಂಡರ ನೇತೃತ್ವದಲ್ಲಿ ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದರು. ಈಗ ನಾಡದೋಣಿಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಬಹುದಾದ ಹೊಸ ಜೆಟ್ಟಿ ನಿರ್ಮಾಣಕ್ಕೆ ಇಲಾಖೆ ಮುಂದಾಗಿರುವುದು ಮೀನುಗಾರರಲ್ಲಿ ಹರ್ಷ ತಂದಿದೆ.  ಸದ್ಯ ಬೆಂಗ್ರೆ ವ್ಯಾಪ್ತಿಯಲ್ಲಿ ಸುಮಾರು 150 ರಷ್ಟು ನಾಡದೋಣಿಗಳಿವೆ. ಮಳೆಗಾಲದಲ್ಲಿ ಮೀನುಗಾರಿಕೆಗೆ ರಜೆ ಇರುವ ಸಮಯದಲ್ಲಿ ರಾಣಿ ಬಲೆ ಹಾಕಿ ಮೀನುಗಾರಿಕೆ ನಡೆಸಲಾಗುತ್ತದೆ. ಸಮುದ್ರದಲ್ಲಿ ಸುಮಾರು 20 ಕಿ.ಮೀ. ನ ಒಳಗಡೆಯಲ್ಲಿ ನಾಡದೋಣಿ ಮೀನುಗಾರಿಕೆ ನಡೆಯುತ್ತದೆ. ಉಳಿದ ಸಮಯದಲ್ಲಿ ಗಿಲ್‌ನೆಟ್‌ ಮೂಲಕ ಮೀನುಗಾರಿಕೆ ನಡೆಸುತ್ತಾರೆ. ಜತೆಗೆ ನದಿಯಲ್ಲಿಯೂ ಮೀನುಗಾರಿಕೆ ನಡೆಸುತ್ತಾರೆ. ಇಂತಹ ದೋಣಿಗಳು ನಿಲುಗಡೆ ಮಾಡಲು ಮಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿಯಿದೆ. ಬೆಂಗ್ರೆ ಫೆರಿ ಜೆಟ್ಟಿಯ ಬಳಿಯಲ್ಲಿ ನಾಡದೋಣಿಗಳನ್ನು ನಿಲ್ಲಿಸಲಾಗುತ್ತದೆ. ಈ ದೋಣಿಗಳನ್ನು ನೀರಿನಿಂದ ಮೇಲೆ ಎಳೆದು ಹಗ್ಗದ ಸಹಾಯದಿಂದ ಕಟ್ಟಿ ಹಾಕಲಾಗುತ್ತದೆ.

800 ಮೀ. ಅಗಲದ ಹೊಸ ಜೆಟ್ಟಿ  :

ಸುಮಾರು 80 ಮೀ. ಅಗಲ, 100 ಮೀ. ಉದ್ದದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗಲಿದೆ. ನಾಡದೋಣಿಗಳನ್ನು ಸುಲಲಿತ ರೀತಿಯಲ್ಲಿ ನಿಲುಗಡೆಗೆ ಇಲ್ಲಿ ಅವಕಾಶವಿರಲಿದೆ. ಗೋಲ ಮಾದರಿಯಲ್ಲಿ ಡ್ರೆಜ್ಜಿಂಗ್‌ ಮಾಡಿ ಇಲ್ಲಿ ನಾಡದೋಣಿ ನಿಲುಗಡೆಗೆ ಆದ್ಯತೆ ನೀಡಲಾಗುತ್ತದೆ. ಸುಮಾರು 150ರಷ್ಟು ನಾಡದೋಣಿಗಳಿಗೆ ಇಲ್ಲಿ ನಿಲುಗಡೆಗೆ ಅವಕಾಶ ಸಿಗುವ ನಿರೀಕ್ಷೆಯಿದೆ.

ತೋಟಬೆಂಗ್ರೆಯಲ್ಲಿ ನಾಡದೋಣಿಗಳಿಗೆ ಬೇಕಾಗುವ ತಂಗುದಾಣ ನಿರ್ಮಾಣ ಯೋಜನೆಗೆ ಈಗಾಗಲೇ ಮಂಜೂರಾತಿ ದೊರಕಿದೆ. ಮಳೆಗಾಲ ಮುಗಿದ ಬಳಿಕ ಇದರ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಈ ಮೂಲಕ ನಾಡದೋಣಿಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ದೊರೆಯಲಿದೆ.ಸುಜನ್ ಚಂದ್ರ ರಾವ್, ಸಹಾಯಕ ಕಾ.ನಿ.ಎಂಜಿನಿಯರ್ಬಂದರು ಹಾಗೂ ಮೀನುಗಾರಿಕಾ ಇಲಾಖೆಮಂಗಳೂರು.

-ದಿನೇಶ್ ಇರಾ

ಟಾಪ್ ನ್ಯೂಸ್

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.