ಹೊಸಂಗಡಿ-ನಾರಾವಿ ಗ್ರಾಮ: ಪವರ್‌ಕಟ್‌ ಇನ್ನಿಲ್ಲ?


Team Udayavani, Aug 1, 2017, 10:55 PM IST

Power-Cut-1-8.jpg

ಮಾದರಿ ವಿದ್ಯುತ್‌ಗ್ರಾಮ ಯೋಜನೆಗೆ ಆಯ್ಕೆ; ಪ್ರತೀ ಗ್ರಾಮಕ್ಕೆ 40 ಲಕ್ಷ ರೂ.

ವೇಣೂರು: ಮಳೆಗಾಲದಲ್ಲಿ ಗಾಳಿ, ಸಿಡಿಲಿಗೆ ವಿದ್ಯುತ್‌ ಸಮಸ್ಯೆ ಕಂಡುಬಂದರೆ ಬೇಸಗೆ ಕಾಲದಲ್ಲಿ ಜಲಾಶಯಗಳಲ್ಲಿ ನೀರಿನ ಅಭಾವದಿಂದ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯ ಸಾಮಾನ್ಯ. ಹೀಗೆ ಗ್ರಾಮೀಣ ಭಾಗಗಳಲ್ಲಿ ನಿತ್ಯವೂ ನಡೆಯುವ ಪವರ್‌ಕಟ್‌, ಲೈನ್‌ಫಾಲ್ಟ್ ಮೊದಲಾದ ವಿದ್ಯುತ್‌ ಸಮಸ್ಯೆಗೆ ಶಾಶ್ವತವಾಗಿ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರಕಾರ  ದಿನದ 24 ಗಂಟೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲು ನಿರ್ಧರಿಸಿದೆ. ಈ ಯೋಜನೆಯನ್ವಯ ಪ್ರತಿಗ್ರಾಮಕ್ಕೆ ಗರಿಷ್ಠ 40 ಲ.ರೂ. ವೆಚ್ಚದಲ್ಲಿ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಇರುವ ಎಲ್ಲ  ಕ್ರಮ  ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಮಾದರಿ ವಿದ್ಯುತ್‌ ಗ್ರಾಮಕ್ಕೆ ಯೋಜನೆ ರೂಪಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಮಾದರಿ ವಿದ್ಯುತ್‌ ಗ್ರಾಮ ಯೋಜನೆ ಅನುಷ್ಠಾನಕ್ಕೆ ಗುರಿ ಇರಿಸಲಾಗಿದೆ.

ವೇಣೂರು ಹೋಬಳಿಯಲ್ಲಿ ಎರಡು ಗ್ರಾಮ
ಮೊದಲ ಹಂತದಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ 5 ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮೂರು ಹೋಬಳಿಯ 5 ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ವೇಣೂರು ಹೋಬಳಿಯ ಹೊಸಂಗಡಿ ಹಾಗೂ ನಾರಾವಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಬೆಳ್ತಂಗಡಿ ಹೋಬಳಿಗೆ ಸಂಬಂಧಿಸಿ ಉಜಿರೆ, ಕೊಕ್ಕಡ ಹಾಗೂ ತಣ್ಣೀರುಪಂಥ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.

ಹೊಸಂಗಡಿ ಗ್ರಾಮ ಪಂಚಾಯತ್‌
ರಾಜ್ಯ ಹೆದ್ದಾರಿ 70ರ ವೇಣೂರಿನಿಂದ ಮೂಡಬಿದಿರೆಗೆ ಹಾದುಹೋಗುವ ವೇಣೂರಿನಿಂದ 8. ಕಿ.ಮೀ. ದೂರದಲ್ಲಿ ಹೊಸಂಗಡಿ ಗ್ರಾಮವಿದೆ. ಬೆಳ್ತಂಗಡಿ ತಾಲೂಕು ಕೇಂದ್ರದ ಕೊನೆಯ ಗ್ರಾಮ ಇದಾಗಿದೆ. ಇದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಗ್ರಾಮ. 2005ರಲ್ಲಿ ಗ್ರಾಮದಲ್ಲಿ ಆರಂಭವಾದ ಸಂಪೂರ್ಣ ಸ್ವಚ್ಛತಾ ಆಂದೋಲನ ಈ ಗ್ರಾಮದ ಯಶೋಗಾಥೆಗೆ ಪ್ರೇರಣೆಯಾಯಿತು. ಈ ಸ್ವಚ್ಛತಾ ಆಂದೋಲನವನ್ನು ಯಶಸ್ವಿಯಾಗಿ ನಡೆಸಿ 2007ರಲ್ಲಿ 10 ಲ.ರೂ. ಮೊತ್ತದ ಪ್ರಶಸ್ತಿಯೊಂದಿಗೆ ರಾಷ್ಟ್ರೀಯ ನಿರ್ಮಲ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಯಿತು.

ಬಳಿಕದ ದಿನಗಳಲ್ಲಿ ಅಂದರೆ 2009-10ರಲ್ಲಿ ರಾಜ್ಯ ನೈರ್ಮಲ್ಯ ರತ್ನ ಪ್ರಶಸ್ತಿ, 2010-11ರಲ್ಲಿ ವಿಭಾಗ ಮಟ್ಟದ ಸ್ವರ್ಣ ನೈರ್ಮಲ್ಯ ಪ್ರಶಸ್ತಿ, ರಜತ ನೈರ್ಮಲ್ಯ ಪ್ರಶಸ್ತಿಗಳಿಗೂ ಭಾಜನವಾಗಿತ್ತು. ಸರಕಾರದ ಗ್ರಾಮವಿಕಾಸ ಯೋಜನೆಯಲ್ಲಿ 75 ಲ.ರೂ. ಅನುದಾನವನ್ನು ಈ ಗ್ರಾ.ಪಂ. ಪಡೆದಿತ್ತು. ಅಲ್ಲದೆ ಸರಕಾರದ  ಗ್ರಾಮೀಣ ಬ್ಯಾಂಕಿಂಗ್‌ ಸೇವೆಯಡಿ ಪ್ರಾಯೋಗಿಕ ಎಟಿಎಂ ಸೌಲಭ್ಯಕ್ಕೆ ಈ ಪಂಚಾಯತ್‌ನನ್ನು ಆಯ್ಕೆ ಮಾಡಲಾಗಿದೆ. ಹೊಸಂಗಡಿಗೆ ಸಂಬಂಧಿಸಿ ವೇಣೂರಿನಲ್ಲಿ ಸುಸಜ್ಜಿತ ಮೆಸ್ಕಾಂ ಉಪಕೇಂದ್ರ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಗ್ರಾಮ ಪಂಚಾಯತ್‌ ಸುಮಾರು 1644 ಚದರ ಹೆಕ್ಟೇರ್‌ ವ್ಯಾಪ್ತಿಯನ್ನೊಳಗೊಂಡಿದೆ.

ನಾರಾವಿ ಗ್ರಾಮ ಪಂಚಾಯತ್‌ 
2007- 08ರಲ್ಲಿ ರಾಜ್ಯ ನಿರ್ಮಿಲ ಗ್ರಾಮ ಪುರಸ್ಕಾರ ಪ್ರಶಸ್ತಿ ಗಳಿಸಿದ ನಾರಾವಿ ಗ್ರಾ.ಪಂ. ತಾಲೂಕಿನಲ್ಲೇ ಮಾದರಿಯಾಗಿರುವ ಪಂಚಾಯತ್‌ ಕಟ್ಟಡವನ್ನು ಹೊಂದಿದೆ. ಮೆಸ್ಕಾಂ ಉಪಕೇಂದ್ರ ಇಲ್ಲಿಗೆ ಅನುಮೋದನೆಗೊಂಡಿದ್ದರೂ ಜಾಗದ ಕೊರತೆಯಿಂದ ಅದು ಕಾರ್ಯಗತವಾಗಿಲ್ಲ. ಈ ಗ್ರಾಮಗಳನ್ನು ಗುರುತಿಸುವುದು ಆಯಾ ಕ್ಷೇತ್ರದ ಶಾಸಕರು. ಅವರು ಕಳುಹಿಸಿದ ಪಟ್ಟಿಯಂತೆ ಮೆಸ್ಕಾಂ ಅಧಿಕಾರಿಗಳು ಅಂದಾಜುಪಟ್ಟಿ ತಯಾರಿಸುತ್ತಾರೆ. ಇದಕ್ಕೆ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡಲಿದೆ. 

ಮಾದರಿ ವಿದ್ಯುತ್‌ ಗ್ರಾಮದ ವಿಶೇಷತೆ 
ಪ್ರತೀ ಮಾದರಿ ವಿದ್ಯುತ್‌ ಗ್ರಾಮದಲ್ಲಿ ವಿದ್ಯುತ್‌ ವಿತರಣ ವ್ಯವಸ್ಥೆಯನ್ನು ಬಲವರ್ಧನೆ‌ಗೊಳಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತದೆ. ಇಲ್ಲಿ ಬೀದಿ ದೀಪಗಳಿಗೆ ಎಲ್‌ಇಡಿ, ಸೋಲಾರ್‌ ದೀಪಗಳನ್ನು ಹಾಗೂ ಟೈಮರ್‌ ಸ್ವಿಚ್‌ಗಳನ್ನು ಅಳವಡಿಸಲು ಸ್ಥಳೀಯ ಸಂಸ್ಥೆಯೊಂದಿಗೆ ಸಮನ್ವಯತೆ ಕಾಪಾಡಿಕೊಳ್ಳಲಾಗುತ್ತದೆ. ಮಾದರಿ ಗ್ರಾಮದ ವಿದ್ಯುತ್‌ ಹೊರೆಗೆ ಅನುಗುಣವಾಗಿ ವಿದ್ಯುತ್‌ ಪರಿವರ್ತಕ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಎಲ್ಲ ಸ್ಥಾವರಗಳಿಗೂ ಮಾಪಕ ಅಳವಡಿಸಿ, ವಿದ್ಯುತ್‌ ಬಳಕೆಯನ್ನು ನಿಖರವಾಗಿ ದಾಖಲಿಸುವಂತೆ ಖಾತ್ರಿಪಡಿಸಲಾಗುತ್ತದೆ. ಪ್ರತೀ ಮಾದರಿ ಗ್ರಾಮಗಳಲ್ಲಿ ವಿದ್ಯುತ್‌ ಪೋಲಾಗದಂತೆ ತಡೆಗಟ್ಟಲಾಗುತ್ತದೆ. ಎಲ್ಲ ಕಡೆಗಳಲ್ಲಿ ತ್ರಿಫೇಸ್‌ ವಿತರಣ ಮಾರ್ಗ ರಚಿಸಲಾಗುತ್ತದೆ. 24 ಗಂಟೆಗಳ ವಿದ್ಯುತ್ಛಕ್ತಿ ಲಭ್ಯತೆಗಾಗಿ ವಿಕೇಂದ್ರೀಕೃತ ವಿತರಣಾ ಉತ್ಪಾದನೆ (ಡಿಡಿಜಿ) ಮೂಲಕ ವಿದ್ಯುತ್‌ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸ್ಥಾವರಗಳ ವಿದುಚ್ಛಕ್ತಿ ಬಳಕೆಗೆ ಬಿಲ್‌ ನೀಡಿ ಶೇ. 100ರಷ್ಟು ಕಂದಾಯ ವಸೂಲಾತಿಗೆ ಮೊಬೈಲ್‌ವ್ಯಾನ್‌ ಅಥವಾ ಇತರ ವ್ಯವಸ್ಥೆಯಡಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಗ್ರಾಮಗಳಲ್ಲಿ ಯಾವುದೇ ರೀತಿಯ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್‌ ಮಾರ್ಗ, ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕ ಇತ್ಯಾದಿಗಳನ್ನು ಸರಿಪಡಿಸಿ ಅಪಘಾತರಹಿತ ಸುರಕ್ಷತಾ ಕ್ರಮಗಳನ್ನು ಕಲ್ಪಿಸಲಾಗುತ್ತದೆ. 

ಯೋಜನೆಗೆ ಪೂರ್ಣ ಸಹಕಾರ 
ಮಾದರಿ ವಿದ್ಯುತ್‌ ಗ್ರಾಮ ಯೋಜನೆಗೆ ಸರಕಾರ  ನಮ್ಮ ಗ್ರಾಮವನ್ನು ಆಯ್ಕೆ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ. ಈ ಯೋಜನೆ ಕಾರ್ಯಗತಗೊಳ್ಳಲು ಪಂಚಾಯತ್‌  ಪೂರ್ಣ ಸಹಕಾರ ನೀಡಲಿದೆ.
– ರವೀಂದ್ರ ಪೂಜಾರಿ ಬಾಂದೊಟ್ಟು, ಅಧ್ಯಕ್ಷರು, ನಾರಾವಿ ಗ್ರಾ.ಪಂ.

– ಪದ್ಮನಾಭ ಕುಲಾಲ್‌ ವೇಣೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.