ಮಂಗಳೂರು : ಪ್ರಖ್ಯಾತ ಉದ್ಯಮಿ ಎಂ. ಅಣ್ಣಪ್ಪ ಪೈ ನಿಧನ
Team Udayavani, Jun 29, 2022, 10:08 PM IST
ಮಂಗಳೂರು : ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದ ಉದ್ಯಮಿ ಎಂ. ಅಣ್ಣಪ್ಪ ಪೈ (74) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ. 29ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರರಾದ ಡೆಲಿವರಿ ಸಂಸ್ಥೆಯ ನಿರ್ದೇಶಕರಾದ ಅಜಿತ್ ಪೈ ಹಾಗೂ ಅರವಿಂದ್ ಪೈ ಅವರನ್ನು ಅಗಲಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನಕ್ಕೆ ಸೇರಿದ ಅವರು ಏಸ್ ಫುಡ್ಸ್ ಹಾಗೂ ಮಾಡರ್ನ್ ಕಿಚನ್ ಉದ್ಯಮಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಆರ್‌ಆರ್ ಪೈ ಆ್ಯಂಡ್ ಕಂಪೆನಿಯ ಪಾಲುದಾರರಾಗಿದ್ದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ದಾನಿಯೂ, ಜನಾನುರಾಗಿಯಾಗಿದ್ದ ಅವರು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಜನಪರ ಕಾಳಜಿ ಹೊಂದಿದ್ದರು.
ಮಣ್ಣಗುಡ್ಡೆಯ ಅವರ ಸ್ವಗೃಹದಲ್ಲಿ ಜೂ.30ರಂದು ಮಧ್ಯಾಹ್ನ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್‌ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ
ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು
ತೊಕ್ಕೊಟ್ಟು: ಬೈಕ್ -ಕಾರು ಢಿಕ್ಕಿ; ಇಬ್ಬರಿಗೆ ಗಾಯ
ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ