ತರಗತಿಗೆ ಹಳೆ ಕಟ್ಟಡ, ಗುಜರಿ ದಾಸ್ತಾನಿಗೆ ಹೊಸ ಕೊಠಡಿ!

Team Udayavani, Jun 26, 2018, 2:10 AM IST

karaya-school-25-6.jpg

ಕರಾಯ: ಹೊಸ ಕಟ್ಟಡ ವಿದ್ದರೂ ಈ ಶಾಲೆಯಲ್ಲಿ ಅದನ್ನು ಬಳಸದೆ ಬಾಗಿಲು ಹಾಕಿದ್ದು, ಅವ್ಯವಸ್ಥೆ ಸೃಷ್ಟಿಯಾಗಿದೆ. ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕರಾಯ ಸರಕಾರಿ ಪ್ರೌಢಶಾಲೆಯ ದುಸ್ಥಿತಿ ಇದು. ಎರಡು ವರ್ಷಗಳ ಹಿಂದೆ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾಗಿದ್ದು, ಅದನ್ನು ಬಳಸಬೇಕಾದ ಶಿಕ್ಷಕ ವೃಂದ, ಅದಕ್ಕೆ ಬೀಗ ಹಾಕಿಟ್ಟಿದೆ. ಹಳೆಯ ಕಟ್ಟಡದಲ್ಲೇ ಪಾಠ- ಪ್ರವಚನ ನೀಡಲಾಗುತ್ತಿದ್ದು, ನೂತನ ಕಟ್ಟಡವನ್ನು ನಿರುಪಯುಕ್ತ ಸ್ಥಿತಿಯಲ್ಲಿ ಇರಿಸಲಾಗಿದೆ.

ಕರಾಯ ಸರಕಾರಿ ಪ್ರೌಢಶಾಲೆಗೆ 2013-14ರಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ 43 ಲಕ್ಷ ರೂ. ಮಂಜೂರು ಆಗಿದ್ದು, 4 ಕೊಠಡಿಗಳನ್ನು ಒಳಗೊಂಡಿರುವ ಕಟ್ಟಡವನ್ನು ನಿರ್ಮಿಸಲಾಗಿದೆ. 2016ರಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡವನ್ನು ಬಳಕೆಗಾಗಿ ಶಾಲೆಗೆ ಹಸ್ತಾಂತರಿಸಲಾಗಿದೆ. ಅದಾಗಿ ಎರಡು ವರ್ಷಗಳೇ ಕಳೆದರೂ ತರಗತಿ ನಡೆಸಲು ಅದನ್ನು ಬಳಸಿಕೊಂಡಿಲ್ಲ. ಹಳೆಯ ಕಟ್ಟಡದಲ್ಲೇ ಮಕ್ಕಳನ್ನು ಕೂರಿಸಿ ತರಗತಿ ನಡೆಸುತ್ತಿದ್ದು, ಹೊಸ ಕಟ್ಟಡವೂ ಶಿಥಿಲಗೊಳ್ಳುತ್ತಿದೆ ಎಂದು ಮಕ್ಕಳ ಹೆತ್ತವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಲ್ಕು ಕೊಠಡಿ

ಶಾಲಾ ಕಟ್ಟಡದಲ್ಲಿ ಒಟ್ಟು ನಾಲ್ಕು ಕೊಠಡಿಗಳಿವೆ. ಇವುಗಳ ಪೈಕಿ ಒಂದರಲ್ಲಿ ಶಾಲೆಯ ಹಳೆಯ ಗುಜರಿ ಸಾಮಗ್ರಿಗಳನ್ನು ದಾಸ್ತಾನು ಇಡಲಾಗಿದೆ. ಇನ್ನೆರಡು ಕೊಠಡಿಗಳಲ್ಲಿ ಶಾಲೆಯ ಹಳೆಯ ಬೆಂಚು- ಡೆಸ್ಕ್ ಗಳನ್ನು ಇಡಲಾಗಿದೆ. ಇನ್ನೊಂದು ಕೊಠಡಿ ಸಭಾಂಗಣ ರೀತಿಯಲ್ಲಿ ಇದ್ದು, ಇದರಲ್ಲಿ ಒಂದು ಸಭೆ ನಡೆಸಿರುವ ಕುರುಹು ಕಂಡು ಬರುತ್ತಿದೆ. ಮತ್ತೂಂದು ಕೊಠಡಿ ಖಾಲಿಯಾಗಿಯೇ ಇದೆ. ಎಲ್ಲ ಕೊಠಡಿಗಳ ಬಾಗಿಲು ಮುಚ್ಚಿ, ಬೀಗ ಹಾಕಲಾಗಿದೆ. ಬಹಳಷ್ಟು ಶಾಲೆಗಳಲ್ಲಿ ಇಂತಹ ಸೌಲಭ್ಯ ಇರುವುದಿಲ್ಲ. ಹೊಸ ಕಟ್ಟಡವಿದ್ದರೂ ಬಳಸಿಕೊಳ್ಳಲು ಇಚ್ಛಾಶಕ್ತಿ ಇಲ್ಲದಂತಾಗಿದೆ. ಹೊಸ ಕಟ್ಟಡವನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಹೆತ್ತವರು, ಗ್ರಾಮಸ್ಥರು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ.

ತರಗತಿ ನಡೆಸುತ್ತಿದ್ದೇವೆ

ಶಾಲಾ ಮುಖ್ಯ ಶಿಕ್ಷಕ ಶಿವಬಾಳು ಪ್ರತಿಕ್ರಿಯಿಸಿ, ತರಗತಿ ನಡೆಸುತ್ತೇವೆ. ಒಂದರಲ್ಲಿ ಲೈಬ್ರೆರಿ, ಇನ್ನೊಂದರಲ್ಲಿ ವಿಜ್ಞಾನ ಪರಿಕರ ಇಟ್ಟಿದ್ದೇವೆ. ಶೀಘ್ರದಲ್ಲೇ ಹಳೆ ಕಟ್ಟಡದಲ್ಲಿರುವ ತರಗತಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಳಪೆ ಕಾಮಗಾರಿ
ಕಟ್ಟಡ ನಿರ್ಮಿಸಿದ ಗುತ್ತಿಗೆದಾರರು ಕಳಪೆ ಮಟ್ಟದ ಕಾಮಗಾರಿ ನಿರ್ವಹಿಸದ ಹಿನ್ನೆಲೆಯಲ್ಲಿ ಈ ಹಿಂದಿನ ಶಾಸಕರು ಉದ್ಘಾಟನೆ ಮಾಡಲು ಒಪ್ಪಿರಲಿಲ್ಲ.
– ಜಯವಿಕ್ರಮ್‌ ಕಲಾಪು, ಅಧ್ಯಕ್ಷರು, ತಣ್ಣೀರುಪಂಥ ಗ್ರಾ.ಪಂ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.