ಹಳೆ ವಿದ್ಯಾರ್ಥಿಯಿಂದ ಸರಕಾರಿ ಶಾಲೆಗೆ 1.25 ಕೋ.ರೂ.ಕಟ್ಟಡ

Team Udayavani, Feb 23, 2018, 2:58 PM IST

2558963.jpg

ವಿಟ್ಲ:ವಿಟ್ಲ ದ.ಕ.ಜಿ.ಪಂ.ಮಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಉದ್ಯಮಿ, ಸುಪ್ರಜಿತ್‌ ಫೌಂಡೇಶನ್‌ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಅವರು ಕೊಡುಗೆಯಾಗಿ ನೀಡಿದ 1.25 ಕೋ. ರೂ. ವೆಚ್ಚದ ಶ್ರೀಮತಿ ಮತ್ತು ಡಾ| ಕೆ. ಮಂಜುನಾಥ ರೈ ವಿದ್ಯಾ ಸೌಧದ ಉದ್ಘಾಟನ ಸಮಾರಂಭ ಗುರುವಾರ ನಡೆಯಿತು.

ಬೆಂಗಳೂರು ಸುಪ್ರಜಿತ್‌ ಫೌಂಡೇಶನ್‌ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಅವರು ಕಟ್ಟಡವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು. 1971ರಲ್ಲಿ ಇದೇ ಶಾಲೆಯಲ್ಲಿ 7ನೇ ತರಗತಿ ಓದಿರುವ ತಾನು ಆರಂಭಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಪೂರೈಸಿದ್ದೇನೆ. ಗುರಿ ಇರಿಸಿಕೊಂಡು ಮುನ್ನುಗ್ಗಬೇಕು, ಆಗ ಸಾಧನೆ ಮಾಡಲು ಸಾಧ್ಯ. ಕಲಿತ ಶಾಲೆಯನ್ನು ಸ್ಮರಣೆಯಲ್ಲಿ ಇರಿಸಿಕೊಳ್ಳುವುದರ ಜತೆಗೆ ತಾನು ಕಲಿತಿರುವುದು ಏನನ್ನು ಎಂಬ ಅರಿವು ಹೊಂದಿರುವುದು ಮುಖ್ಯ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇಂಗ್ಲೆಂಡಿನ ಇಯನ್‌ ವಿಲಿಯಮ್ಸನ್‌ ಅವರು ನೂತನ ಕಟ್ಟಡಕ್ಕೆ ಅವಶ್ಯವಿರುವ 17.50 ಲಕ್ಷ ರೂ. ವೆಚ್ಚದ ಪೀಠೊಪಕರಣಗಳನ್ನು ನೀಡಿ ಮಾತನಾಡಿದರು. ಇಂತಹ ಶಾಲೆಯಲ್ಲೇ ತಾನೂ ಶಿಕ್ಷಣ ಪಡೆದಿದ್ದೇನೆ, ಭಾರತ ದೇಶದಲ್ಲಿ ಸುತ್ತಾಡಿದ್ದೇನೆ, ಅತ್ಯಂತ ಸಂತೋಷದ ವಾತಾವರಣ ಇಲ್ಲಿದೆ ಎಂದರು.

ವಿದ್ಯಾಂಗ ಉಪನಿರ್ದೇಶಕ ವೈ. ಶಿವರಾಮಯ್ಯ ಅವರು ಅಜಿತ್‌ ಕುಮಾರ್‌ ರೈ ಅವರಿಂದ ಕಟ್ಟಡ ಕೀಲಿಕೈ ಪಡೆದು, ಮಾತನಾಡಿ ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ ಅವರ ಅಪೇಕ್ಷೆಯಂತೆ ಇದೇ ಶಾಲೆಯನ್ನು ಪ್ರೌಢಶಾಲೆಯನ್ನಾಗಿಸುವ ಪ್ರಯತ್ನ ಮಾಡಲಾಗುವುದು. ಸರಕಾರಿ ಶಾಲೆಯಲ್ಲಿ ಎಲ್ಲ ಸೌಲಭ್ಯಗಳನ್ನು ನೀಡಿದರೂ ಏನೋ ಕೊರತೆಯಿದೆ ಎಂದು ಜನ ಭಾವಿಸುತ್ತಾರೆ. ಆದರೆ ನಾಗರಿಕರ, ಪೋಷಕರ, ಹಳೆ ವಿದ್ಯಾರ್ಥಿಗಳ ಸಹಕಾರವಿದ್ದಾಗ ಅದನ್ನೆಲ್ಲ ನೀಗಿಸಲು ಸಾಧ್ಯ. ವಿಟ್ಲ ಶಾಲೆಯು ಎಲ್ಲ ಶಾಲೆಗಳಿಗೆ ಮಾದರಿಯಾಗಿದೆ ಎಂದರು.

ಅರುಣ ಕುಮಾರ್‌ ರೈ, ತುಮಕೂರು ಯೂನಿಯನ್‌ ಕ್ರಿಶ್ಚನ್‌ ಕಾಲೇಜು ಉಪನ್ಯಾಸಕಿ ಡಾ| ಆರತಿ ಜೆ. ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಎನ್‌. ಅವರು ಭಾಗವಹಿಸಿದ್ದರು. ಇದೇ ಸಂದರ್ಭ ಎಂಜಿನಿಯರ್‌ ರಾಘವೇಂದ್ರ ಪೈ ಅವರನ್ನು ಗೌರವಿಸಲಾಯಿತು. ಶೈಕ್ಷಣಿಕ ಸಲಹೆಗಾರ ಎಂ. ಅನಂತಕೃಷ್ಣ ಹೆಬ್ಟಾರ್‌ ಅವರು ಪ್ರಸ್ತಾವನೆಗೈದರು. ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ ಸ್ವಾಗತಿಸಿದರು. ಶಿಕ್ಷಕಿ ರಮಾ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯೋಪಾಧ್ಯಾಯ ವಿಶ್ವನಾಥ ಗೌಡ ಬಿ. ವಂದಿಸಿದರು.

ಟಾಪ್ ನ್ಯೂಸ್

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.