ಮಂಗಳೂರು: ಮಾದಕ ವಸ್ತು ಪ್ರಕರಣಗಳ ಆರೋಪಿಗಳ ಪರೇಡ್‌

Team Udayavani, Jul 23, 2019, 8:54 AM IST

ಮಂಗಳೂರು: ಮಾದಕ ವಸ್ತುಗಳ ವಿರುದ್ಧ ನಗರ ಪೊಲೀಸರು ಕಠಿನ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ವಿವಿಧ ಮಾದಕ ವಸ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದ 94 ಮಂದಿ ಹಳೆ ಆರೋಪಿಗಳ ಪರೇಡ್‌ ಮಾಡಿಸಿದರು.

ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಮತ್ತು ಇತರ ಅಧಿಕಾರಿಗಳು ಆರೋಪಿಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರಿಗೆ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿದರು.

ಈ ಹಿಂದೆ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಳೆ ರೌಡಿಗಳನ್ನು ಕರೆಸಿ ಪರೇಡ್‌ ಮಾಡಿ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈಗ ಅದೇ ರೀತಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳ ಹಳೆ ಆರೋಪಿಗಳ ಪರೇಡ್‌ ನಡೆಸಿ ಡ್ರಗ್ಸ್‌ ಮಾಫಿಯಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಹಿಂದಿನ ಮೂರು ವರ್ಷಗಳಲ್ಲಿ ವಿವಿಧ ಡ್ರಗ್ಸ್‌ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪರೇಡ್‌ ಮಾಡಿ ವಿಚಾರಣೆ ನಡೆಸಲಾಗಿದೆ. ಈ ಸಂದರ್ಭ ಅವರಿಂದ ಸಾಕಷ್ಟು ಮಾಹಿತಿ ಲಭಿಸಿವೆ ಎಂದು ಆಯುಕ್ತರು ತಿಳಿಸಿದ್ದಾರೆ.

ನಾಲ್ಕು ತಿಂಗಳಲ್ಲಿ 50ರಿಂದ 60 ಪ್ರಕರಣ
ಸಂದೀಪ್‌ ಪಾಟೀಲ್‌ ನಗರದ ಪೊಲೀಸ್‌ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಮಿಷನರೆಟ್‌ ವ್ಯಾಪ್ತಿಯಲ್ಲಿ 50ರಿಂದ 60ರಷ್ಟು ಮಾದಕ ವಸ್ತು ಪ್ರಕರಣಗಳು ಪತ್ತೆ ಯಾಗಿವೆ. ಅದರಲ್ಲಿ ಗಾಂಜಾ, ಎಂಡಿ ಎಂಎ- (ಮಿಥೈಲೆನೆಡಿಯಾಕ್ಷಿ ಮೆಥಾಂ ಫೆಟಮೈನ್‌), ಕೊಕೇನ್‌ ಮತ್ತಿತರ ಮಾದಕ ವಸ್ತುಗಳು ಸೇರಿವೆ. ಮಾದಕ ವಸ್ತು ಪೂರೈಕೆ ಮಾಡು ತ್ತಿರುವವರು, ಸೇವಿಸು ವ ವರು ಮತ್ತು ಮಾರಾಟಗಾರ ರನ್ನು ಬಂಧಿಸಲಾಗಿದೆ.

ಜನರ ಸಹಕಾರ ಅಗತ್ಯ
ಮಾದಕ ವಸ್ತುಗಳ ಹಾವಳಿ ನಿಯಂತ್ರಿಸಲು ಪೊಲೀಸರು ಆದ್ಯತೆ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು, ಶಿಕ್ಷಕರು, ರಕ್ಷಕರು ಸಹಿತ ನಾಗರಿಕರ ಸಂಪೂರ್ಣ ಸಹಕಾರ ಸಿಕ್ಕಿದರೆ ಈ ಪಿಡುಗನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾದೀತು ಎಂದು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ