ಹಣ ಕೊಟ್ಟು ನವೀಕರಿಸಿ, ಇಲ್ಲವೇ ಭೂಮಿ ಬಿಡಿ

ಕಿದು ತೆಂಗು ಅಭಿವೃದ್ಧಿ ಸಂಸ್ಥೆಗೆ ಅರಣ್ಯ ಇಲಾಖೆ ನೋಟಿಸ್‌

Team Udayavani, Jun 27, 2019, 5:45 AM IST

2606SUB4

ಸುಬ್ರಹ್ಮಣ್ಯ: ಕಿದುವಿನ ಅಂತಾ ರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಸ್ಥೆಯ ಭವಿಷ್ಯಮತ್ತೆ ತೂಗುಯ್ನಾಲೆಯಲ್ಲಿದೆ. ಕಿದು ಸುರಕ್ಷಿತಾ ರಣ್ಯದಲ್ಲಿ ಸಂಶೋಧನಾ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ಪಡೆದಿದ್ದ ಪ್ರದೇಶವನ್ನು ಹಣ ಪಾವತಿಸಿ ನವೀಕರಿಸುವಂತೆ ಅರಣ್ಯ ಇಲಾಖೆ ಬುಧವಾರ ನೋಟಿಸ್‌ ನೀಡಿದ್ದು, ಇಲ್ಲದಿದ್ದಲ್ಲಿ ಅರಣ್ಯ ಭೂಮಿಯನ್ನು ಹಿಂಪಡೆಯುವುದಾಗಿ ತಿಳಿಸಿದೆ.

ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳು ಜೂ. 26ರಂದು ಹೊರಡಿಸಿರುವ ಸೂಚನೆಯಲ್ಲಿ ಕಿದು ಸುರಕ್ಷಿತಾರಣ್ಯದಲ್ಲಿ ಸಂಶೋಧನ ಉದ್ದೇಶಕ್ಕಾಗಿ ಗೇಣಿ ನೆಲೆಯಲ್ಲಿ ನೀಡಿದ 121.41 ಹೆ. ಭೂಮಿಯನ್ನು ಅರಣ್ಯ ಸಂರಕ್ಷಣ ಕಾಯ್ದೆ 1980ರನ್ವಯ ನವೀಕರಿಸಿ ಮಂಜೂರು ಮಾಡಲಾಗಿದೆ. ಅದರಂತೆ ಸಂಸ್ಥೆ ಯವರು ಎನ್‌ಪಿವಿ ಮತ್ತು ಸಿಎ ಮೊತ್ತವನ್ನು ಪಾವತಿಸಬೇಕಿದೆ. ಇದುವರೆಗೆ ಯಾವುದೇ ಮೊತ್ತ ಪಾವತಿಸಿಲ್ಲ. ಸಂಸ್ಥೆಯು ಎನ್‌ಪಿವಿ ಮೊತ್ತ 12,66,30,630 ರೂ. ಮತ್ತು ಸಿಎ ಮೊತ್ತ 6,60,47,040 ರೂ. ಸೇರಿದಂತೆ ಒಟ್ಟು 19,26,77,670 ರೂ.ಗಳನ್ನು ಮುಂದಿನ 10 ದಿನಗಳೊಳಗೆ ಪಾವತಿಸಬೇಕು. ಇಲ್ಲದಿದ್ದಲ್ಲಿ ಅರಣ್ಯ ಭೂಮಿಯನ್ನು ಹಿಂಪಡೆಯಲಾಗುವುದು ಎಂದಿದೆ.

1972ರಲ್ಲಿ ಸ್ಥಾಪನೆ
1972ರಲ್ಲಿ ಪುತ್ತೂರು ತಾಲೂಕಿನ ಬಿಳಿನೆಲೆ ಗ್ರಾಮದ ಕಿದು ರಕ್ಷಿತಾರಣ್ಯದಲ್ಲಿ 300 ಎಕರೆ ಭೂಮಿಯನ್ನು ಅರಣ್ಯ ಇಲಾಖೆಯಿಂದ 30 ವರ್ಷಗಳ ಅವಧಿಗೆ ಲೀಸಿಗೆ ಪಡೆದು ಅಡಿಕೆ, ತೆಂಗು ಮತ್ತು ಕೊಕ್ಕೊ ಗಿಡಗಳನ್ನು ಬೆಳೆಸಿ ಸಂಶೋಧನ ಉಪಕೇಂದ್ರವನ್ನು ಸ್ಥಾಪಿಸಲಾಗಿತ್ತು. ಇದರ ಅವಧಿ 2000ನೇ ಇಸವಿಗೆ ಮುಗಿದಿದೆ. ಅರಣ್ಯ ಇಲಾಖೆ ಲೀಸಿಗೆ ನೀಡಿದ ಭೂಮಿಯನ್ನು ಮರಳಿ ಪಡೆಯಬೇಕು ಎಂಬ ಸುಪ್ರೀಂ ಕೋರ್ಟಿನ ಆದೇಶದಂತೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದ್ದು, ಜಾಗ ಮರಳಿ ನೀಡುವುದು ಅಥವಾ ಬದಲಾಗಿ 300 ಎಕರೆ ಖಾಲಿ ಜಾಗದಲ್ಲಿ ಅರಣ್ಯ ಬೆಳೆಸಲು ತಗಲುವ 12 ಕೋಟಿ ರೂ. ಭರಿಸಿ ಮತ್ತೆ 30 ವರ್ಷಗಳ ಅವಧಿಗೆ ಲೀಸ್‌ ಮುಂದುವರಿಸಲು ಅವಕಾಶ ಕಲ್ಪಿಸಿತ್ತು.

ಸಿಪಿಸಿಆರ್‌ಐ ಆಡಳಿತವೂ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗೆ ನವೀಕರಣ ಕೋರಿ ಅರ್ಜಿ ಸಲ್ಲಿಸಿತ್ತು. ಅಷ್ಟರಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಸುಪ್ರೀಂ ಕೋರ್ಟ್‌ ಅರಣ್ಯ ಸಂರಕ್ಷಣೆ ವಿಚಾರವಾಗಿ ನೀಡಿದ್ದ ಆದೇಶವನ್ನು ಮುಂದಿರಿಸಿ ನವೀಕರಣಕ್ಕೆ ನಿರಾಕರಿಸಿತ್ತು. ಬದಲಿ ಜಾಗ ಗುರುತಿಸಿ ಅರಣ್ಯ ಅಭಿವೃದ್ಧಿಗೆ 12 ಕೋಟಿ ರೂ. ಭರಿಸುವಂತೆ ಹೇಳಿತ್ತು. ಇಲ್ಲಿ ಪರಿಸರಕ್ಕೆ ಪೂರಕ ಹಸಿರು ವಾತಾವರಣ ನಿರ್ಮಿಸುವ ಬೆಳೆ ಬೆಳೆಯಲಾಗುತ್ತಿದೆ. ಆದ್ದರಿಂದ ವಿನಾಯಿತಿ ನೀಡಬೇಕು ಎಂದು ಕೇಳಿಕೊಂಡಿತ್ತು. ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಸೂಚಿಸಿದ ವಿನಾಯಿತಿ ಪಟ್ಟಿಯಲ್ಲಿ ನಿಮ್ಮ ಸಂಶೋಧನಾ ಕೇಂದ್ರ ಸೇರದೆ ಇರುವುದರಿಂದ ವಿನಾಯಿತಿ ಸಾಧ್ಯವಿಲ್ಲ ಎಂದು ಪರಿಸರ ಇಲಾಖೆ ಸ್ಪಷ್ಟಪಡಿಸಿತ್ತು.

ಅನಂತರ ಕೇಂದ್ರದ ಉನ್ನತ ಅಧಿಕಾರಿಗಳು ನಿರಾಸಕ್ತಿತೋರಿದ್ದರು. ಸಂಶೋಧನ ಕೇಂದ್ರ ರಾಜ್ಯದ ಕೈತಪ್ಪುವಸಾಧ್ಯತೆ ಬಗ್ಗೆ ಆತಂಕಗೊಂಡ ಈ ಭಾಗದ ಪ್ರಮುಖರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ಗಮನಕ್ಕೆ ತಂದಿದ್ದರು. ಆವರು ಕೇಂದ್ರ ಕೃಷಿ ಸಚಿವರ ಮೇಲೆ ಒತ್ತಡ ತಂದು ತಾತ್ಕಾಲಿಕವಾಗಿ ತಡೆ ತಂದಿದ್ದರು.

ಲೀಸ್‌ ಅವಧಿ ಮುಗಿದ ಬಳಿಕವೂ ನವೀಕರಿಸದ ಸಂಸ್ಥೆಗಳಿಗೆ ನೋಟಿಸ್‌ನೀಡುತ್ತಿದ್ದೇವೆ. ಅದರಂತೆ ಕಿದು ಪ್ಲಾಂಟೇಶನ್‌ಗೂ ಜಾರಿಗೊಳಿಸಿದ್ದೇವೆ. ಲೀಸಿಗೆ ಪಡೆದ ಭೂಮಿಯನ್ನು ಕಾಲಕಾಲಕ್ಕೆ ನವೀಕರಿಸುವುದು ಅವರ ಜವಾಬ್ದಾರಿ. ಇಲ್ಲವಾದಲ್ಲಿ ಅರಣ್ಯ ಕಾಯ್ದೆಯಂತೆ ಭೂಮಿಯನ್ನು ವಾಪಸ್‌ ಪಡೆಯಲಾಗುತ್ತದೆ.
– ಕರಿಕಾಲನ್‌,ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.