ಪೂಜೆ ವೇಳೆ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ನವಿಲು

Team Udayavani, May 16, 2019, 6:00 AM IST

ದೇವಸ್ಥಾನದ ಒಳಗೆ ಬಂದಿರುವ ನವಿಲು.

ನೀರುಮಾರ್ಗ: ಇಲ್ಲಿನ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾನ ಪೂಜೆ ವೇಳೆ ದೇವಸ್ಥಾನಕ್ಕೆ ನವಿಲು ಆಗಮಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಇತ್ತೀಚೆಗೆ ದೇವಸ್ಥಾನಕ್ಕೆ ಅರ್ಪಿಸಿದ ಧ್ವಜಸ್ತಂಭಕ್ಕೆ ತೈಲ ವಾಸ ಪೂಜೆ ಅದ್ಧೂರಿ ಯಾಗಿ ನಡೆದಿತ್ತು. ಧ್ವಜಸ್ತಂಭ ಪೂಜೆ ವೇಳೆ ದೇವಾಲಯದಲ್ಲಿ ನವಿಲಿನ ಜೋರಾದ ಧ್ವನಿ ಕೇಳಿಸಿತ್ತು. ಇದರಿಂದ ಅಚ್ಚರಿಯಾಗಿ ಭಕ್ತರೆಲ್ಲ ಬಂದು ನೋಡಿದಾಗ, ಸುಬ್ರಹ್ಮಣ್ಯ ದೇವರಿಗೆ ಗರ್ಭಗುಡಿಯಲ್ಲಿ ಪೂಜೆ ನಡೆಯುತ್ತಿದ್ದರೆ, ಗರ್ಭಗುಡಿ ಮುಂಭಾಗವೇ ನವಿಲು ನಿಂತಿತ್ತು

ಸಾಮಾನ್ಯವಾಗಿ ಪ್ರಾಣಿ ಪಕ್ಷಿಗಳು ಅಕಸ್ಮಾತ್‌ ಆಗಿ ಜನಜಂಗುಳಿ ನಡುವೆ ಬಂದಾಗ ಹೆದರಿ ಅಲ್ಲಿಂದ ಓಡಲು ಪ್ರಯತ್ನಿಸುತ್ತವೆ. ಆದರೆ ಈ ನವಿಲು ಮಾತ್ರ ದೇವರ ಪ್ರತಿ ಪೂಜಾ ಕಾರ್ಯದಲ್ಲೂ ಭಾಗಿಯಾಗಿ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ್ದಾಗಿ ತಿಳಿದುಬಂದಿದೆ. ಈ ರೀತಿ ನವಿಲು ದೇಗುಲದಲ್ಲಿ ಪ್ರದಕ್ಷಿಣೆ ಮಾಡಿರುವುದು ಭಕ್ತರಲ್ಲಿ ಆಚ್ಚರಿ ಮೂಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಶಿರಸಿ: ಕರ್ನಾಟಕದ ತಿರುಪತಿ ಎಂದೇ ಕರೆಯಲಾಗುವ ಮಂಜುಗುಣಿ ವೆಂಕಟರಮಣ ದೇವಾಲಯದ ಪಾರ್ಶ್ವದಲ್ಲೇ ಇರುವ ಕೋನಾರಿ ತೀರ್ಥ ಕೆರೆಗೆ ಕಾಯಕಲ್ಪದ ಭಾಗ್ಯ ಸಿಕ್ಕಿದೆ....

  • ಸೊಲ್ಲಾಪುರ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಸುಶೀಲಕುಮಾರ ಶಿಂಧೆ ಸತತ ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದು...

  • ಸುಳ್ಯ : ಅರ್ಧ ಶತಮಾನಕ್ಕೂ ಅಧಿಕ ಕಾಲದಿಂದ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಯಾವುದೇ ಸೂಚನೆ ನೀಡದೆ ಏಕಾಏಕಿ...

  • ಹೊನ್ನಾವರ: ಈ ವರ್ಷವೂ ಮೇ ತಿಂಗಳಲ್ಲಿ ಕುಮಟಾ, ಹೊನ್ನಾವರ ನೀರಿಗೆ ಪರದಾಡುತ್ತಿದೆ. ನಗರಸಭೆ, ಪಟ್ಟಣ ಪಂಚಾಯತ ಪೂರೈಸುವ ನೀರನ್ನು ಅವಲಂಬಿಸಿರುವ ಉಭಯ ನಗರಗಳ 50 ಸಾವಿರ...

  • ಸುಳ್ಯ : ನ.ಪಂ. ಚುನಾವಣೆಯ ಮತದಾನಕ್ಕೆ ಇನ್ನೆರಡು ದಿನ (ಮೇ 29) ಬಾಕಿ ಇದ್ದು, 20 ವಾರ್ಡ್‌ಗಳಲ್ಲಿ ಪ್ರಚಾರದ ಭರಾಟೆ ಬಿರುಸು ಪಡೆದಿದೆ. ಪಕ್ಷ ಮತ್ತು ಪಕ್ಷೇತರರಾಗಿ ಸ್ಪರ್ಧಿಸಿರುವ...

  • ಹುಮನಾಬಾದ: ಪಟ್ಟಣದ ಪುರಸಭೆ 27 ವಾರ್ಡ್‌ ಪೈಕಿ ಈಗಾಗಲೇ 5 ವಾರ್ಡ್‌ಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದ ಬೆನ್ನಲ್ಲೇ ಇನ್ನುಳಿದ 22 ವಾರ್ಡ್‌ಗಳಲ್ಲಿ ವಿವಿಧ ಪಕ್ಷ...