ಜನರೇ ನನ್ನ ಹೈಕಮಾಂಡ್‌: ಶ್ರೀಕರ ಪ್ರಭು

Team Udayavani, May 5, 2018, 9:05 AM IST

Srikara-Prabhu-4-5.jpg

ಮಂಗಳೂರು: ನಗರದ ಮಹಾ ಜನತೆಯೇ ಮುಂದಿನ ದಿನಗಳಲ್ಲಿ ನನ್ನ ಹೈಕಮಾಂಡ್‌. ಅವರ ಎಲ್ಲ ಸೂಕ್ತ ಬೇಡಿಕೆ- ಆಶೋತ್ತರಗಳನ್ನು ಆದ್ಯತೆಯಲ್ಲಿ ಪೂರೈಸುವುದಕ್ಕಾಗಿ ಶಾಸಕನಾಗಿ ನಾನು ಸದಾಕಾಲ ಬದ್ಧ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮರ್ಥ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಘೋಷಿಸಿದ್ದಾರೆ.

ಅವರು ರಥಬೀದಿ ವೆಂಕಟರಮಣ ದೇವಸ್ಥಾನದ ಎದುರು ಜರಗಿದ ಚುನಾವಣಾ ಸಭೆಯಲ್ಲಿ ನೆರೆದ ಬೃಹತ್‌ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಿ ತನ್ನ ಅದ್ದೂರಿ ಪ್ರಚಾರಕ್ಕೆ ಚಾಲನೆ ನೀಡಿದರು. ಕಳೆದ 33 ವರ್ಷಗಳಿಂದ ನಿರಂತರ ಜನ ಸೇವೆಯಲ್ಲಿ ಕ್ರಿಯಾಶೀಲನಾಗಿರುವ ತನಗೆ ಮಂಗಳೂರು ನಗರದ ಜನರ ಬವಣೆಗಳು ತಿಳಿದಿದ್ದು, ಅವುಗಳಿಗೆ ಸೂಕ್ತ ಪರಿಹಾರೋಪಾಯಗಳು ತನ್ನ ಪ್ರಣಾಳಿಕೆಯಲ್ಲಿ ಅಡಕವಾಗಿವೆ. ಅವುಗಳ ಅನುಷ್ಠಾನಕ್ಕೆ ನಿಮ್ಮ ಬೆಂಬಲ ತನಗೆ ದೊರೆಯುವ ಬಗ್ಗೆ ತನಗೆ ಸಂಪೂರ್ಣ ವಿಶ್ವಾಸ ಇರುವುದಾಗಿ ಶ್ರೀಕರ ಪ್ರಭು ಅವರು ಈ ಸಂದರ್ಭದಲ್ಲಿ  ತಿಳಿಸಿದರು.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದ್ದು, ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮನೆ ಮನೆ ಭೇಟಿಯ ಬಳಿಕ ಐದನೇ ಹಂತದಲ್ಲಿ ರೋಡ್‌ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತು ಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್‌ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ.

ತಮ್ಮ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾದ ಮಾದರಿಯನ್ನು ರಿಕ್ಷಾ ಚಾಲಕರಿಗೆ ನೀಡುವ ಮೂಲಕ ಶ್ರೀಕರ ಪ್ರಭು ತಮ್ಮ ಮತಬೇಟೆಯ ಅಭಿಯಾನವನ್ನು ಅದ್ದೂರಿಯಾಗಿ ಆರಂಭಿಸಿದ್ದಾರೆ. ಇನ್ನು 5 ದಿನಗಳ ಕಾಲ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ಅವರು ರೋಡ್‌ ಶೋ ನಡೆಸುವ ಮೂಲಕ ಎಲ್ಲರ ಗಮನ ಸೆಳೆಯಲಿದ್ದಾರೆ. ‘ಆಟೋ ರಿಕ್ಷಾ’ ಚಿಹ್ನೆ ಸಿಕ್ಕಿದ್ದು ನನ್ನ ಸೌಭಾಗ್ಯ. ವರ್ಷದ 365 ದಿನವೂ ಸೇವೆಯಲ್ಲಿ ತೊಡಗಿರುವ ಆಟೋರಿಕ್ಷಾ ವ್ಯವಸ್ಥೆಯಂತೆ ನಿಮ್ಮೆಲ್ಲರ ಸದಾ ಕಾಲದ ಸೇವೆಗೆ ಲಭ್ಯವಾಗಲಿದ್ದು, ಬಹುಮತದಿಂದ ಆರಿಸುವಂತೆ ಶ್ರೀಕರ ಪ್ರಭು ಮನವಿ ಮಾಡಿಕೊಂಡರು.

ಶ್ರೀಕರ ಪ್ರಭು ಅಭಿಮಾನಿ ಬಳಗದ ಅಧ್ಯಕ್ಷ ಕೆ.ಪಿ. ಶೆಟ್ಟಿ ಬೇಡೆಮಾರ್‌, ಪ್ರೇಮ್‌ ಚಂದ್ರ, ಉಸ್ತುವಾರಿ ಸುರೇಶ ಶೆಟ್ಟಿ, ಅವಿನಾಶ್‌ ಶೆಟ್ಟಿ, ಮಾಧ್ಯಮ ಮುಖ್ಯಸ್ಥ ಮಹೇಶ್‌ ಆರ್‌. ನಾಯಕ್‌, ಚಿತ್ರಕಲಾ ಪ್ರಭು, ಸೀಮಾ ಪ್ರಭು, ಶ್ರೀಲತಾ ಗೋಪಾಲಕೃಷ್ಣ, ಐಶ್ವರ್ಯ ನಾಯಕ್‌, ಮಾಯಾ ನಾಯಕ್‌, ಶರತ್‌ ಅಮೀನ್‌, ನಿತಿನ್‌ ಸುವರ್ಣ, ಅಶ್ವಿ‌ತ್‌ ಕುಮಾರ್‌, ವಸಂತ್‌ ಪ್ರಭು, ಭಾಸ್ಕರ್‌ ಗಟ್ಟಿ, ಅನಿಲ್‌ ಕುಮಾರ್‌, ಆನಂದ ಶೆಟ್ಟಿ, ವೆಂಕಟರಮಣ ಮಲ್ಯ, ಜೈರಾಮ್‌ ಕಾಮತ್‌, ರಾಮ್‌ ಮೋಹನ್‌, ಮಹೇಶ್‌ ಭಟ್‌, ಸೂರಜ್‌ ಪ್ರಭು, ರಘುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.