ಆಸ್ಪತ್ರೆಯಲ್ಲಿ ಮಹಿಳೆ ಸ್ನಾನದ ವೀಡಿಯೋ: ಬಂಧನ
Team Udayavani, Feb 13, 2021, 1:31 AM IST
ಉಳ್ಳಾಲ: ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ಮೊಬೈಲ್ ಮೂಲಕ ವೀಡಿಯೋ ನಡೆಸಿದ್ದ ಆರೋಪಿಯನ್ನು ಉಳ್ಳಾಲದ ಪೊಲೀಸರ ತಂಡ ಶುಕ್ರವಾರ ಬಂಧಿಸಿದೆ.
ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ. ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜತೆಗಿದ್ದ ಮಹಿಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ತನ್ನ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದ. ಇದನ್ನು ಗಮನಿಸಿದ ಮಹಿಳೆ ಕೂಡಲೇ ಹೊರಬಂದಾಗ, ಆರೋಪಿ ಮುನೀರ್ ಪರಾರಿಯಾಗಿದ್ದ. ಈ ಕುರಿತು ಮಹಿಳೆ ಜ. 20ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸಿಸಿ ಕೆಮರಾ ನೆರವು :
ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಆಸ್ಪತ್ರೆಯ ಸಿಸಿ ಟಿವಿ ಕೆಮರಾದಲ್ಲಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮುನೀರ್ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿತ್ತು. ಆದರೆ ಆರೋಪಿ ತಲೆಮರೆಸಿಕೊಂಡಿದ್ದು, ಶುಕ್ರವಾರ ಪೊಲೀಸರು ಆತನನ್ನು ಮನೆ ಸಮೀಪ ಬಂಧಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಹಾಗೂ ಎಸ್ಐ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ ರೇವಣ್ಣ ಸಿದ್ಧಯ್ಯ ಹಾಗೂ ಸಿಬಂದಿ ಪ್ರಶಾಂತ್ ಮತ್ತು ಅಕºರ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!