ಜೀವನ ಶಿಕ್ಷಣದಿಂದ ವ್ಯಕ್ತಿ ಪರಿಪೂರ್ಣ: ಹೆಗ್ಗಡೆ

ಉಜಿರೆ ಸಿದ್ಧವನ ಗುರುಕುಲ: ವಿದ್ಯಾರ್ಥಿ ಸರಕಾರದ ಪ್ರತಿಜ್ಞೆ ಸ್ವೀಕಾರ

Team Udayavani, Jul 29, 2019, 5:56 AM IST

2807CH1-A

ಬೆಳ್ತಂಗಡಿ: ವಿದ್ಯಾರ್ಥಿಗಳ ಚಾರಿತ್ರ್ಯ ನಿರ್ಮಾಣ, ನೈತಿಕ ಶಿಕ್ಷಣ ಅಭ್ಯಸಿಸುವ ಅವಕಾಶವನ್ನು ಸಿದ್ಧವನ ಗುರುಕುಲದಲ್ಲಿ ಕಲ್ಪಿಸಿಕೊಡುತ್ತಿದ್ದೇವೆ. ಅವುಗಳ ಪರಿಪೂರ್ಣ ಮಾಹಿತಿ ಪಡೆದಲ್ಲಿ ಉತ್ತಮ ವ್ಯಕ್ತಿತ್ವ ರೂಪು ಗೊಳ್ಳಲು ಸಾಧ್ಯ.

ಸಿದ್ಧವನದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಒದಗಿಸಲಾಗುತ್ತಿದೆ. ಬದುಕಿನಲ್ಲಿ ಹೊಂದಾಣಿಕೆ ಅನುಸರಿಸಿ, ಅಳವಡಿಸಿಕೊಳ್ಳುವ ಮೂರಂಶದಲ್ಲಿ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡು ಯಶಸ್ವಿ ಯಾಗಬಹುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ, ಸಿದ್ಧವನ ಗುರುಕುಲದ ಗೌರವ ರಾಜ್ಯಪಾಲ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.

ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಶನಿವಾರ 2019- 2020ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭದಲ್ಲಿ ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿ. ಕಾಲೇಜು ಪ್ರಾಂಶುಪಾಲ ಡಾ| ಉದಯಕುಮಾರ್‌ ಇರ್ವತ್ತೂರು ಮಾತನಾಡಿ, ಬದುಕಿನಲ್ಲಿ ಕಲಿತದ್ದನ್ನು ಮರೆಯಲು ಸಾಧ್ಯವಿಲ್ಲ. ಕಲಿಕೆ ಜೀವನದಲ್ಲಿ ಅನುಭವ ಕೊಡುತ್ತದೆ ಎಂದರು.

ಸಚೇತಕ ಪ್ರೊ| ಎಸ್‌. ಪ್ರಭಾಕರ್‌ ಉಪಸ್ಥಿತರಿದ್ದರು. ಗುರುಕುಲದ ಮುಖ್ಯಮಂತ್ರಿ ಶ್ರೇಯಸ್‌ ಗೌಡ ವರದಿ ವಾಚಿಸಿದರು. ಗುರುಕುಲದ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ, ವಿಪಕ್ಷದ ನಾಯಕರು, ಸಭಾಪತಿ ಉಲ್ಲಾಸ್‌ ಗೌಡ ಉಪಸ್ಥಿತರಿದ್ದರು.

ಗುರುಕುಲದ ಪ್ರಧಾನ ಪಾಲಕ ಡಾ| ಬಿ. ಯಶೋವರ್ಮ ಸ್ವಾಗತಿಸಿ, ಪ್ರಸ್ತಾವಿಸಿದರು. ಡಾ| ಬಿ.ಎ. ಕುಮಾರ್‌ ಹೆಗ್ಡೆ ವಂದಿಸಿ, ಉಪನ್ಯಾಸಕ ಡಾ| ಬಿ.ಪಿ. ಸಂಪತ್‌ ಕುಮಾರ್‌ ನಿರೂಪಿಸಿದರು.

ಮಂಜಯ್ಯ ಹೆಗ್ಗಡೆ ಪುತ್ಥಳಿಗೆ ಮಾಲಾರ್ಪಣೆ
ಕೀರ್ತಿಶೇಷ ಮಂಜಯ್ಯ ಹೆಗ್ಗಡೆಯವರ ಪುತ್ಥಳಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾಲಾರ್ಪಣೆ ಮಾಡಿದರು. ವಿದ್ಯಾರ್ಥಿಗಳ ಭಿತ್ತಿಪತ್ರಿಕೆ ಸೌರಭ ಅನಾವರಣಗೊಳಿಸಿ, ಚುನಾಯಿತ ಪ್ರತಿನಿಧಿಗಳಿಗೆ ಗುರುತಿನ ಪತ್ರ ನೀಡಿ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸರಕಾರದ ಆಡಳಿತ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.