ಉರಿ ಬಿಸಿಲಿನ ಬೇಗೆಗೆ ಪಿಲಿಕುಳದ ಪ್ರಾಣಿಗಳೂ ಸುಸ್ತು!


Team Udayavani, Mar 20, 2019, 4:47 AM IST

20-march-2.jpg

ಮಹಾನಗರ:  ದಿನದಿಂದ ದಿನಕ್ಕೆ ಬಿಸಿಲ ಬೇಗೆ ಏರುತ್ತಿದ್ದು, ನಗರದಲ್ಲಿ ವಿಪರೀತ ಸೆಕೆಯಿಂದ ಜನ ಸುಸ್ತಾಗಿದ್ದಾರೆ. ಮಧ್ಯಾಹ್ನದ ಬಿರು ಬಿಸಿಲಿಗೆ ನಗರದಲ್ಲಿ ಸುತ್ತಾಡುವುದೇ ಬಹುದೊಡ್ಡ ಸವಾಲು ಎಂಬಂತಾಗಿದೆ. ಬಿಸಿಲ ಬೇಗೆ ಪ್ರಾಣಿಗಳಿಗೂ ಈಗ ಹೊರತಾಗಿಲ್ಲ. ಪಿಲಿಕುಳದಲ್ಲಿರುವ ಪ್ರಾಣಿಗಳು ಕೂಡ ವಿಪರೀತ ಸೆಕೆಗೆ ತುತ್ತಾಗಿದ್ದು, ಇದಕ್ಕಾಗಿ ಪ್ರಾಣಿಗಳನ್ನು ತಂಪಾಗಿರಿಸಲು ವಿಶೇಷ ಆದ್ಯತೆ ನೀಡಲಾಗಿದೆ.

ಪ್ರಾಣಿಗಳನ್ನು ತಂಪಾಗಿಡುವ ಕಾರಣದಿಂದ ಪಿಲಿಕುಳದಲ್ಲಿ ಈ ಬಾರಿಯೂ ಹೆಚ್ಚುವರಿ ಫ್ಯಾನ್‌ ಹಾಗೂ ಪ್ರಾಣಿಗಳಿಗೆ ನಿಗದಿತವಾಗಿ ನೀರು ಚಿಮ್ಮಿಸುವ ಕಾರ್ಯ ನಡೆಯುತ್ತಿದೆ. ವಿಶೇಷವಾಗಿ ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ದೊಡ್ಡ ಪ್ರಾಣಿಗಳು ಸೆಕೆಯಿಂದ ಸಾಮಾನ್ಯವಾಗಿ ಸಮಸ್ಯೆ ಎದುರಿಸುತ್ತದೆ. ಹೀಗಾಗಿ ಅವುಗಳಿಗೆ ವಿಶೇಷ ನೆಲೆಯಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. ಕುಡಿಯಲು ನೀರು ಸಮರ್ಪಕವಾಗಿ ಸಿಗುವ ಜತೆಗೆ, ಪ್ರಾಣಿಗಳು ಸುತ್ತಾಡುವ ಪ್ರದೇಶದಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. ಅದರಲ್ಲಿಯೂ ಪ್ರಾಣಿಗಳನ್ನು ಇರಿಸಲಾಗಿರುವ ಗೂಡಿನ ಹೊರಭಾಗದಲ್ಲಿ ಫ್ಯಾನ್‌ ಸೌಕರ್ಯವನ್ನು ಮಾಡಿಸಲಾಗಿದೆ. ಈ ಹಿಂದೆ ಫ್ಯಾನ್‌ ಸೌಕರ್ಯ ಮಾಡಲಾಗಿತ್ತಾದರೂ, ಮಾರ್ಚ್‌, ಎಪ್ರಿಲ್‌, ಮೇ ನ ಸೆಕೆಗೆ ಹೆಚ್ಚುವರಿಯಾಗಿ ಸುಮಾರು 10ರಷ್ಟು ಫ್ಯಾನ್‌ಗಳನ್ನು ಪ್ರಾಣಿಗಳ ಗೂಡಿನ ಬಳಿಯಲ್ಲಿ ಅಳವಡಿಸಲಾಗಿದೆ. ಸೆಕೆ ಹೆಚ್ಚಿರುವ ಸಮಯದಲ್ಲಿ ಪೈಪ್‌ ಗಳ ಮೂಲಕ ಪ್ರಾಣಿಗಳ ಮೈಮೇಲೆ ನೀರು ಚಿಮ್ಮಿಸಲಾಗುತ್ತಿದೆ. ಮಧ್ಯಾಹ್ನ ಸುಮಾರು 2-3 ಬಾರಿ ಇದನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಆರಂಭದಲ್ಲಿ ಪ್ರಾಣಿಗಳು ಇದಕ್ಕೆ ಹೆದರಿಕೊಂಡು ಪ್ರತಿರೋಧ ವ್ಯಕ್ತಪಡಿಸಿದರೂ ಬಳಿಕ ತಂಪಾಗಿ ನೀರಿಗೆ ಮೈಯೊಡ್ಡುತ್ತವೆ. ವಿಶೇಷವೆಂದರೆ, ಉದ್ಯಾನ ವನದಲ್ಲಿ ಪ್ರಾಣಿಗಳು ಓಡಾಡುವ ಸ್ಥಳದ ಮೇಲ್ಭಾಗದಲ್ಲಿ ನೀರಿಗಾಗಿ ಸ್ಪ್ರಿಂಕ್ಲ ರ್‌ಗಳನ್ನು ಅಳವಡಿಸಲಾಗಿದೆ. 

ಮೇಲಿಂದ ನೀರು ಬೀಳುವ ಸಂದರ್ಭದಲ್ಲಿ ಪ್ರಾಣಿಗಳು ಅದಕ್ಕೂ ಮೈಯೊಡ್ಡಿ ನಿಲ್ಲುತ್ತವೆ. ಪಕ್ಕಿಗಳಿಗೂ ಕೂಡ ನೀರು ಚಿಮ್ಮಿಸುವ ಪ್ರಕ್ರಿಯೆ ನಡೆಯುತ್ತದೆ. ಜತೆಗೆ, ಜಿಂಕೆ, ಕಡವೆಗಳು ಓಡಾಡುವ ಜಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕೆಲವೊಂದು ಪ್ರಾಣಿಗಳ ಗೂಡಿನ ಮೇಲ್ಛಾವಣಿಯ ಮೇಲೆ ಬಿಳಿ ಬಣ್ಣದ ಪೈಂಟ್‌ಗಳನ್ನು ಬಳಿಯಲಾಗಿದೆ. ಯಾಕೆಂದರೆ, ಬಿಳಿ ಬಣ್ಣವು ಬಿಸಿಲನ್ನು ಹೀರಿ ತಂಪು ನೀಡುತ್ತವೆ. ಜತೆಗೆ ಕೆಲವೊಂದೆಡೆ ಮೇಲ್ಛಾವಣಿಗೆ ಸೋಗೆಗಳನ್ನೂ ಹಾಕಲಾಗಿದೆ. ಹಾವುಗಳಿರುವ ಪ್ರದೇಶದಲ್ಲೂ ಹೆಚ್ಚುವರಿ ನೀರಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಹೀಗಾಗಿ ಉರಗಳಿಗೂ ಇಲ್ಲಿ ಕೂಲ್‌ ಕೂಲ್‌ ವಾತಾವರಣ ಕಲ್ಪಿಸಲಾಗಿದೆ. ಉರಗಗಳು ಇರುವ ಸ್ಥಳದಲ್ಲಿ ಮೇಲಿನಿಂದ ನೀರನ್ನು ಸ್ಪಿಂಕ್ಲರ್‌ ಮೂಲಕ ಚಿಮಿಕಿಸಲಾಗುತ್ತಿದೆ. 

ಪಿಲಿಕುಳ; ನೀರಿಗೆ ಸಮಸ್ಯೆ ಇಲ್ಲ
ಪಿಲಿಕುಳ ಮೃಗಾಲಯದ ಪರಿಸರದಲ್ಲಿ ಹೇರಳವಾಗಿ ಗಿಡ- ಮರಗಳಿದ್ದರೂ ಬಿಸಿಲಿನ ತಾಪ ಕಡಿಮೆ ಇಲ್ಲ. ಹಾಗಾಗಿ ಹೆಚ್ಚಿನ ಪ್ರಮಾಣದ ಕುಡಿಯುವ ನೀರು ಪ್ರಾಣಿಗಳಿಗೆ ಅಗತ್ಯವಿದೆ. ಸುಮಾರು 150 ಎಕ್ರೆಯಲ್ಲಿ ಹರಡಿಕೊಂಡ ಉದ್ಯಾನವನದಲ್ಲಿ 98 ಪ್ರಭೇದಗಳ ಸಾವಿರಕ್ಕೂ ಅಧಿಕ ಪ್ರಾಣಿ- ಪಕ್ಷಿಗಳಿವೆ. ಅತಿ ಹೆಚ್ಚಿನ ಹುಲಿಗಳನ್ನು ಹೊಂದಿರುವ ಮೃಗಾಲಯ ಎಂಬ ಮಾನ್ಯತೆಯೂ ಪಿಲಿಕುಳಕ್ಕಿದೆ. ಸದ್ಯ ಪಿಲಿಕುಳಕ್ಕೆ ಫಲ್ಗುಣಿ ನದಿಯಿಂದ 25 ಎಚ್‌ಪಿ ಪಂಪ್‌ಸೆಟ್‌ ಮೂಲಕ ನೀರೆತ್ತಲಾಗುತ್ತದೆ. ಅದನ್ನು ಪಿಲಿಕುಳದ 4 ಓವರ್‌ಲೋಡ್‌ ಟ್ಯಾಂಕ್‌ ಗೆ ತುಂಬಿಸಿ ಅಲ್ಲಿಂದ ಪಿಲಿಕುಳಕ್ಕೆ ಸರಬರಾಜು ಮಾಡಲಾಗುತ್ತಿದೆ. ಜತೆಗೆ ಪಿಲಿಕುಳದಲ್ಲಿ 5 ಬೋರ್‌ವೆಲ್‌ನಿಂದ ನೀರೆತ್ತಲಾಗುತ್ತದೆ. 

ಪ್ರಾಣಿಗಳನ್ನು ತಂಪಾಗಿಸಲು ಕ್ರಮ
ವಿಪರೀತ ಸೆಕೆಯಿಂದ ಪ್ರಾಣಿ- ಪಕ್ಷಿಗಳ ಸೆಕೆ ನಿಯಂತ್ರಣಕ್ಕೆ ಪಿಲಿಕುಳದಲ್ಲಿ ಕ್ರಮಕೈಗೊಳ್ಳಲಾಗಿದೆ. ಫ್ಯಾನ್‌, ನೀರು ಚಿಮ್ಮಿಸುವ ಮೂಲಕ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಲಾಗುತ್ತಿದೆ. ಜತೆಗೆ, ಅಲ್ಲಲ್ಲಿ ನೀರಿನ ಕೊಳ, ಟ್ಯಾಂಕ್‌ ಗಳನ್ನೂ ಅಳವಡಿಸಲಾಗಿದೆ.
– ಎಚ್‌. ಜಯಪ್ರಕಾಶ್‌ ಭಂಡಾರಿ, ನಿರ್ದೇಶಕರು,
ಪಿಲಿಕುಳ ಜೈವಿಕ ಉದ್ಯಾನವನ.

ದಿನೇಶ್‌ ಇರಾ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.