ಸರಕಾರಿ ಕಚೇರಿ, ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ನೀರು ಬಾಟಲಿ ಬಳಕೆ ನಿಷೇಧ


Team Udayavani, Nov 3, 2018, 10:04 AM IST

ban.jpg

ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆಯುವ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ವಿವಿಧ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಇನ್ನುಮುಂದೆ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ ಇರದು.
ಮಂಡಳಿ, ನಿಗಮ, ವಿವಿಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳು ಆಯೋಜಿಸುವ ಸಭೆ, ಸಮಾರಂಭ, ಕಾರ್ಯಾಗಾರ, ಸೆಮಿನಾರ್‌ ಮತ್ತು ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಹಾಗೂ ಸರಬರಾಜು ನಿಷೇಧಿಸುವ ಬಗ್ಗೆ ತಾಲೂಕು ಮಟ್ಟದ ಎಲ್ಲ ಇಲಾಖೆ ಹಾಗೂ ಜಿಲ್ಲೆಯ 230 ಗ್ರಾ.ಪಂ.ಗಳಿಗೆ ಜಿಲ್ಲಾ ಪಂಚಾಯತ್‌ನ ಜಿಲ್ಲಾ ನೆರವು ಘಟಕ ಅಧಿಸೂಚನೆ ಹೊರಡಿಸಿದೆ.

ಪ್ಲಾಸ್ಟಿಕ್‌ ತ್ಯಾಜ್ಯ ಮನುಷ್ಯರ ಸಹಿತ ಎಲ್ಲ ಜೀವಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆಯಲ್ಲದೆ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಜತೆಗೆ ಸರಕಾರಿ ಸಹಿತ ಎಲ್ಲ ಸಮಾರಂಭಗಳಲ್ಲಿ ಬಳಕೆಯಾಗುವ ನೀರಿನ ಪ್ರಮಾಣ ಕಡಿಮೆ, ಉಳಿಕೆಯಾಗಿ ವ್ಯರ್ಥವಾಗುವ ಬಾಟಲಿಗಳೇ ಹೆಚ್ಚು. ಇದು ಬೊಕ್ಕಸಕ್ಕೂ ದುಬಾರಿಯಾಗುತ್ತದೆ. 

ಈ ಹಿನ್ನೆಲೆಯಲ್ಲಿ ಈಗಾಗಲೇ ಸರಕಾರದ ಅಧಿಸೂಚನೆ ಉಲ್ಲೇಖ 11-03-2016 ಅಪಜೀ17ಇಪಿಸಿ 2012ರಂತೆ ಸರಕಾರದಿಂದ ಆಯೋ ಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ  ಮತ್ತು  ಸರಕಾರಿ ಕಚೇರಿಗಳಲ್ಲಿ  ಒಂದು ಬಾರಿ ಬಳಸುವ ಪ್ಲಾಸ್ಟಿಕ್‌ ನೀರಿನ ಬಾಟಲಿಗಳ ಬಳಕೆ, ಸರಬರಾಜನ್ನು ನಿಷೇಧಿಸುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಪರ್ಯಾಯವಾಗಿ ಕುಡಿಯುವ ನೀರನ್ನು ಸಂದರ್ಭಾನುಸಾರ ಗಾಜು, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು, ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣೆ ವ್ಯವಸ್ಥೆಯನ್ನು ಏರ್ಪಡಿಸಬೇಕು ಎಂದು ಅಧಿಸೂಚನೆ ಹೇಳಿದೆ. 

ಗ್ರಾಮ, ತಾಲೂಕು, ಜಿ.ಪಂ. ಹಂತದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆಯ ವತಿಯಿಂದ ಏರ್ಪಡಿಸಲಾಗುವ ಸಭೆ ಸಮಾ ರಂಭಗಳಲ್ಲಿ ಕುಡಿಯುವ ನೀರನ್ನು 20 ಲೀ.ಗಳ ಕ್ಯಾನ್‌ಗಳನ್ನು ಖರೀದಿಸಿ, ಲೋಟ ಗಳ ಮೂಲಕ ಒದಗಿಸುವಂತೆ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪತ್ರದಲ್ಲಿ  ಸೂಚಿಸಿದ್ದಾರೆ.  ಎಲ್ಲ 230 ಗ್ರಾ.ಪಂ. ಮತ್ತು ತಾಲೂಕು ಮಟ್ಟದ ಇಲಾಖೆ ಗಳಿಗೆ ಅಧಿಸೂಚನೆ ನೀಡಿದ್ದಾರೆ.

ಬಜಪೆ ಗ್ರಾ.ಪಂ.ನಲ್ಲಿ  ಈಗಾಗಲೇ ಜಾರಿ
ಬಜಪೆ ಗ್ರಾ.ಪಂ. ಸಭೆಗಳಲ್ಲಿ ಸ್ಟೀಲ್‌ ಜಗ್‌ ಮತ್ತು ಲೋಟ ಒಂದು ತಿಂಗಳ ಹಿಂದಿನಿಂದಲೇ ಬಳಕೆಯಾಗುತ್ತಿದೆ. ಮುಂದೆ ಉಳಿದ ಸಭೆಗಳಿಗೂ ಅನ್ವಯಿಸಲಿದೆ.  ಒಂದು ಬಾರಿ ಬಳಸುವ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ನಿಷೇಧ ಮತ್ತು ಅದರಿಂದಾಗುವ ಹಾನಿಗಳ ಅರಿವು ಮೂಡಿಸುವ ಪ್ರಯತ್ನ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನಡೆದರೆ ಇನ್ನೂ ಪರಿಣಾಮಕಾರಿಯಾಗಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.