ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಸೆರೆ
Team Udayavani, Jul 29, 2021, 7:25 AM IST
ಮಂಗಳೂರು: ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆ ಪೊಲೀಸ್ ಸಿಬಂದಿಯನ್ನು ಬಂಧಿಸಲಾಗಿದೆ.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಪೋಷಕರ ಜತೆ ಬಾಲಕಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದು, ಈ ಸಂದರ್ಭ ಬಾಲಕಿಯ ಮೊಬೈಲ್ ಸಂಖ್ಯೆ ಪಡೆದ ಠಾಣೆಯ ಹೆಡ್ಕಾನ್ಸ್ಟೆೆಬಲ್ ದರ್ಜೆ ಸಿಬಂದಿ, ಬಳಿಕ ಆಕೆಗೆ ಕರೆ ಮಾಡಿ ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅನುಚಿತ ವರ್ತನೆ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿರುವ ಹಿನ್ನೆಲೆಯಲ್ಲಿ ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಿ, ಮಂಗಳವಾರ ಬಂಧಿಸಲಾಗಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ