ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದಿರಿ: ರಮಾನಾಥ ರೈ

Team Udayavani, May 31, 2019, 6:10 AM IST

ramanath-rai

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಅವರಿಗೆ ಬಂದಿರುವ ಹಲ್ಲೆ ಮತ್ತು ಹತ್ಯೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳ ಕೃತ್ಯ ಖಂಡನೀಯ. ಅವರ ಪರವಾಗಿ ಚುನಾಯಿತ ಪ್ರತಿನಿಧಿಗಳಿಂದ ಒತ್ತಡ ಬಂದಿರುವುದಾಗಿ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಯಾವುದೇ ಒತ್ತಡಕ್ಕೆ ಮಣಿಯದೆ ಪೊಲೀಸರು ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಮನವಿ ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದಾರೆ.

ಕೊಲೆ ಬೆದರಿಕೆ ಒಡ್ಡಿರುವ ಕಾರ್ತಿಕ್‌ ಕುಂಬ್ಳೆ ರಾಜಕೀಯವಾಗಿ ಗಡಿ ಜಿಲ್ಲೆಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ 1ನೇ ಆರೋಪಿ, ಬಂಟ್ವಾಳ ಆಸುಪಾಸಿನಲ್ಲಿ ಸುತ್ತಾಡುತ್ತಿದ್ದಾನೆ. ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಹಿಂದೆ ನಡೆದ ಶರತ್‌, ಜಲೀಲ್‌ ಕರೋಪಾಡಿ, ಹರೀಶ್‌, ಅಶ್ರಫ್‌, ನಝೀರ್‌
ಹತ್ಯೆಗಳ ಆರೋಪಿಗಳು ಯಾರು ಎಂದು ಗಮನಿಸಿ ದರೆ ಅದರಲ್ಲಿ ಎರಡು ಮತೀಯ ಸಂಘಟನೆಗಳಿಗೆ ಸೇರಿದವರಿದ್ದಾರೆ. ಇಂತಹ ಕಾರ್ಯಕರ್ತರ ಪರ ನ್ಯಾಯವಾದಿಗಳು ಕೂಡ ಪಕ್ಷ ನೇಮಿಸಿದವರೇ ಆಗಿ ರುತ್ತಾರೆ. ಕಾಂಗ್ರೆಸ್‌ನ ಯಾರೊಬ್ಬ ಕಾರ್ಯಕರ್ತನೂ ಕೊಲೆ, ಹಲ್ಲೆ ಪ್ರಕರಣದಲ್ಲಿ ಇಲ್ಲ ಎಂದು ಹೇಳಿದರು.

ದೇವರ ದುಡ್ಡು ಉಳಿಸಿದ್ದೇನೆ
ಶಾಲೆಗೆ ಅಕ್ಕಿಯನ್ನು ನಿಲ್ಲಿಸಿದ್ದೇನೆ ಎಂದು ಅಪಪ್ರಚಾರ ಮಾಡಲಾಗಿದೆ. ನಾನು ಅಕ್ಕಿಯನ್ನು ನಿಲ್ಲಿಸಿಲ್ಲ. ಕೊಲ್ಲೂರು ದೇವಸ್ಥಾನದಿಂದ ವರ್ಷಕ್ಕೆ 4 ಕೋಟಿ ರೂ. ಸಲ್ಲಿಕೆಯಾಗುತ್ತಿದ್ದ ದೇವರ ದುಡ್ಡನ್ನು ಉಳಿಸಿದ್ದೇನೆ. ಅದಕ್ಕೆ ಕೊಲ್ಲೂರು ದೇವಿಯ ಆಶೀರ್ವಾದವು ನನ್ನ ಮೇಲಿದೆ ಎಂದರು.

ಲೋಕಸಭಾ ಅಭ್ಯರ್ಥಿಯ ಗೆಲುವು ಸಂಭ್ರಮಾಚರಣೆ ಮೆರವಣಿಗೆಯಲ್ಲಿದ್ದ ತಂಡವು ಬಡಕಬೈಲು ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ ಮನೆಗೆ ಹೋಗಿ ಪುರುಷರು ಮನೆಯಲ್ಲಿ ಇಲ್ಲದ ಸಂದರ್ಭ ಅಂಗಳದಲ್ಲಿ ಪಟಾಕಿ ಸಿಡಿಸಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದೆ. ಇಂಥ ವರ್ತನೆಯನ್ನು ಖಂಡಿಸುತ್ತೇನೆ ಎಂದು ತಿಳಿಸಿದರು.

ಇಡೀ ಪ್ರಕರಣವನ್ನು ಮುಚ್ಚುವಂತೆ ಪೊಲೀಸರ ಮೇಲೆ ಒತ್ತಡ ಹಾಕುತ್ತಿರುವ ಬಗ್ಗೆ ಬಂಟ್ವಾಳ ಉಪ ವಿಭಾಗ ಎಎಸ್‌ಪಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದರು.

ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀರ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ರಮಾನಾಥ ರೈ ಅಧಿಕಾರದಲ್ಲಿ ಇದ್ದಾಗ ಗಲಾಟೆ ಆಗುತ್ತಿತ್ತು, ಈಗ ಇಲ್ಲ ಎನ್ನುವವರು, ಆಗ ಗಲಾಟೆ ಮಾಡಿದವರು ಯಾರು ಎಂಬುದನ್ನು ಗಮನಿಸಬೇಕು. ಎರಡು ಮತೀಯ ಸಂಘಟನೆಗಳವರು. ಅದರಲ್ಲಿ ಒಂದು ದೇಶದ ರಾಷ್ಟ್ರೀಯ ಪಕ್ಷದ ಅಂಗಸಂಸ್ಥೆ ಎಂದು ತಿಳಿಯಬೇಕು.
-ಬಿ. ರಮಾನಾಥ ರೈ

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.