
ಅಂಚೆ ಇಲಾಖೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ
Team Udayavani, Jan 31, 2023, 6:30 AM IST

ಮಂಗಳೂರು: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅರ್ಜಿಗಳನ್ನು https://india postgdsonline.gov.in ಮೂಲಕ ಫೆ. 16ರ ಮೊದಲು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 05.06.2022ಕ್ಕೆ ಅನ್ವಯವಾಗುವಂತೆ 18ರಿಂದ 40 ವರ್ಷದ ವಯೋ ಮಿತಿಯೊಳಗಿರಬೇಕು. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ, ಒಬಿಸಿ ಅಂದರೆ ಇತರ ಹಿಂದುಳಿದ ವರ್ಗದವರಿಗೆ 3 ವರ್ಷದ ವಿನಾಯಿತಿ ಅನ್ವಯಿಸುತ್ತದೆ. ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸಂಬಂಧ ಪಟ್ಟ ಅಂಗವಿಕಲರಿಗೆ ಒಟ್ಟು 13 ವರ್ಷ ಹಾಗೂ ಪರಿಶಿಷ್ಟ ಜಾತಿ / ವರ್ಗಗಳಿಗೆ ಸಂಬಂಧಪಟ್ಟ ಅಂಗವಿಕಲರಿಗೆ 15 ವರ್ಷಗಳ ಸಡಿಲಿಕೆ ಇರುತ್ತದೆ.
ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10ನೇ ತರಗತಿಯಲ್ಲಿ ಅಧ್ಯಯನ ಮಾಡಿರಬೇಕು. ಕಾಸರ ಗೋಡು ಜಿಲ್ಲೆಯಲ್ಲಿ ಕನ್ನಡ ಒಂದು ವಿಷಯ ವಾಗಿ ಅಧ್ಯಯನ ನಡೆಸಿ ದವರೂ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳು https://indiapost.gov.in ಅಥವಾ https://indiapostgdsonline.gov.in ನಲ್ಲಿ ಲಭ್ಯವಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಆಡಳಿತ ಯಂತ್ರವಿನ್ನು ಚುನಾವಣ ಕಾರ್ಯದಲ್ಲಿ ವ್ಯಸ್ತ: ನಾಗರಿಕ ಸೇವೆಯಲ್ಲಿ ವ್ಯತ್ಯಯ ಸಂಭವ

ಕರಾವಳಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ನೀತಿ ಸಂಹಿತೆಯ ಬಿಸಿ; ಪೊಲೀಸ್ ಕಣ್ಗಾವಲು
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!