Multiplex ಪ್ರಭಾತ್‌ ಥಿಯೇಟರ್‌: ನಾಳೆಯಿಂದ ಚಿತ್ರ ಪ್ರದರ್ಶನ

Team Udayavani, Aug 14, 2018, 4:05 AM IST

suchithra-14-8.jpg

ಮಂಗಳೂರು: ಮಂಗಳೂರಿನ ಕೆ.ಎಸ್‌. ರಾವ್‌ ರಸ್ತೆಯಲ್ಲಿರುವ ಪ್ರಭಾತ್‌ ಥಿಯೇಟರ್‌ ಇದೀಗ ಅತ್ಯಾಧುನಿಕ ಸೌಕರ್ಯದೊಂದಿಗೆ ಮಲ್ಟಿಪ್ಲೆಕ್ಸ್‌ ಮಾದರಿಯಲ್ಲಿ ಚಿತ್ರಪ್ರದರ್ಶನಕ್ಕೆ ತೆರೆದುಕೊಂಡಿದೆ. ಸುಮಾರು ಎಂಟು ತಿಂಗಳ ಹಿಂದೆ ನವೀಕರಣದ ನಿಮಿತ್ತ ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಪ್ರಭಾತ್‌ ಥಿಯೇಟರ್‌ ಮತ್ತೂಮ್ಮೆ ಹೊಸ ರೂಪದಲ್ಲಿ ಕರಾವಳಿಯ ಸಿನೆಮಾ ಪ್ರೇಮಿಗಳಿಗೆ ರಸದೌತಣವನ್ನು ಉಣಬಡಿಸಲಿದೆ.

ಉತ್ತಮ ಗುಣಮಟ್ಟದಲ್ಲಿ ಹಾಗೂ ಹವಾನಿಯಂತ್ರಣ ಸೌಲಭ್ಯದೊಂದಿಗೆ ಸಂಪೂರ್ಣ ಅಡ್ವಾನ್ಸ್‌ಡ್‌ ತಂತ್ರಜ್ಞಾನಗಳನ್ನು ಉಪಯೋಗಿಸಿ ನವೀಕರಣಗೊಂಡ ಪ್ರಭಾತ್‌ ಟಾಕೀಸ್‌ ಆ. 15ರಂದು ಆರಂಭಗೊಳ್ಳಲಿದೆ. ಚಿತ್ರಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್‌ ನಾರಾಯಣ್‌, ಮ್ಯಾನೇಜರ್‌ ಸುಬ್ರಾಯ ಪೈ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ. ನವೀಕೃತಗೊಂಡ ಪ್ರಭಾತ್‌ ಚಿತ್ರಮಂದಿರದಲ್ಲಿ ಮೊದಲ ದಿನ ಹಿಂದಿಯ ‘ಸತ್ಯಮೇವ ಜಯತೆ’, ‘ಗೋಲ್ಡ್‌’ ಹಾಗೂ ತೆಲುಗಿನ ‘ಗೀತಾ ಗೋವಿಂದ’ ಪ್ರದರ್ಶನವಾಗಲಿದೆ.

ಅರುವತ್ತರ ದಶಕದಲ್ಲಿ ಆರಂಭವಾದ ಪ್ರಭಾತ್‌ ಟಾಕೀಸ್‌ ಸಿನೆಮಾ ಪ್ರೇಮಿಗಳಿಗೆ ಪ್ರಾದೇಶಿಕ ಭಾಷೆಯ ಸಿನೆಮಾಗಳಿಂದ ಹಿಡಿದು ವಿಶ್ವದರ್ಜೆಯ ವೈವಿಧ್ಯಮಯ ಸಿನೆಮಾಗಳನ್ನು ಪ್ರದರ್ಶಿಸುತ್ತ ಬಂದಿದೆ. ಕಳೆದ ವರ್ಷದವರೆಗೆ ಸಾಮಾನ್ಯ ಸಿಂಗಲ್‌ ಸ್ಕ್ರೀನ್‌ ಸಿನೆಮಾ ಥಿಯೇಟರ್‌ ನಂತಿದ್ದ ಪ್ರಭಾತ್‌ ಟಾಕೀಸ್‌ನ ಲುಕ್‌ ಕೇವಲ ಎಂಟು ತಿಂಗಳಲ್ಲಿ ಸಂಪೂರ್ಣ ಬದಲಾಗಿ ನವೀಕೃತಗೊಂಡಿದೆ.

ಬಿ.ಕೆ. ವಾಸುದೇವ ರಾವ್‌ 1958ರಲ್ಲಿ ‘ಪ್ರಭಾತ್‌’ ಎಂಬ ಹೆಸರಿನ ಚಿತ್ರಮಂದಿರ ಸ್ಥಾಪಿಸಿದರು. ಹಿಂದಿ ಚಿತ್ರನಟ ದೇವಾನಂದರ ‘ಕಾಲಾಪಾನಿ’ ಎಂಬ ಹಿಂದಿ ಚಿತ್ರದ ಪ್ರಥಮ ಪ್ರದರ್ಶನದ ಮೂಲಕ ಈ ಚಿತ್ರ ಮಂದಿರ ಆರಂಭವಾಗಿತ್ತು. ಎಲ್ಲ ಭಾಷೆಯ ಚಲನಚಿತ್ರ ಪ್ರದರ್ಶನವಾಗುತ್ತಿದ್ದ ಈ ಚಿತ್ರಮಂದಿರದಲ್ಲಿ ‘ಆನಂದ’ ಎಂಬ ಹೆಸರಿನ ಶಿವರಾಜ್‌ ಕುಮಾರ್‌ ಅವರ ಪ್ರಥಮ ಕನ್ನಡ ಚಿತ್ರ 100 ದಿನಗಳ ಕಾಲ ಪ್ರದರ್ಶನವಾಗಿತ್ತು.

ಹವಾನಿಯಂತ್ರಿತ ಪ್ರಭಾತ್‌!
ನವೀಕೃತ ಪ್ರಭಾತ್‌ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರದಲ್ಲಿ ಸಿಗುವ ಎಲ್ಲ ಸೌಲಭ್ಯಗಳು ದೊರೆಯಲಿವೆ. ವಿಶೇಷವಾಗಿ ಜೈಜೀನ್‌ ಸಿಲ್ವರ್‌ ಸ್ಕ್ರೀನ್‌ನ್ನು ಉಪಯೋಗಿಸಲಾಗಿದ್ದು, 4ಕೆ ಡಿಜಿಟಲ್‌ ಪ್ರೊಜೆಕ್ಷನ್‌ ಹಾಗೂ ಡಾಲ್ಬಿ ಆಟ್ಮಾಸ್‌ 64 ಸ್ಪೀಕರ್‌ಗಳನ್ನು ಅಳವಡಿಸಲಾಗಿದೆ. ಪ್ರೇಕ್ಷಕರಿಗೆ ಲೈವ್‌ ಅನುಭವ ನೀಡಲಿದೆ. ಹವಾನಿಯಂತ್ರಿತ ಚಿತ್ರಮಂದಿರದ ಬಾಲ್ಕನಿಯಲ್ಲಿ 145 ಹಾಗೂ ಕೆಳಗಡೆ 391 ಸೀಟ್‌ ವ್ಯವಸ್ಥೆ ಇದೆ. ಎಲ್ಲ ಸೀಟ್‌ಗಳು ಪುಶ್‌ಬ್ಯಾಕ್‌ ಸೌಲಭ್ಯವನ್ನು ಹೊಂದಿದೆ. ಸುಸಜ್ಜಿತ ಕ್ಯಾಂಟೀನ್‌ ಜತೆಗೆ ಪಾರ್ಕಿಂಗ್‌ ವ್ಯವಸ್ಥೆಯು ಉತ್ತಮವಾಗಿದೆ ಎನ್ನುತ್ತಾರೆ ಎಂಜಿನಿಯರ್‌ ಸುಧೀಂದ್ರ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.