ಸಿದ್ಧಗೊಂಡಿದೆ ಮಂಗಳೂರಿನ ಸ್ವಚ್ಛತಾ ಟೀಂ

Team Udayavani, Aug 22, 2018, 11:55 AM IST

22-agust-5.jpg

ಮಹಾನಗರ: ಮಹಾಮಳೆಗೆ ತತ್ತರಿಸಿರುವ ಕೊಡಗು ಜನತೆ ತಮ್ಮ ಅಸ್ತಿತ್ವನ್ನೇ ಕಳೆದುಕೊಂಡು ಅಕ್ಷರಶಃ ಸಂಕಟ ಪಡುತ್ತಿದ್ದಾರೆ. ನೆರೆ ತಗ್ಗಿದ್ದರೂ ಈಗ ನೀರು ನುಗ್ಗಿದ್ದ ತಮ್ಮ ಮನೆಗಳ ಸ್ವಚ್ಛತೆಯೇ ಅಲ್ಲಿನ ಜನರಿಗೆ ಬಹುದೊಡ್ಡ ಸವಾಲಾಗಿದೆ. ಹೀಗಿರುವಾಗ, ಮಂಗಳೂರಿನ ಸ್ವಚ್ಛತೆಯ ತಂಡವೊಂದು ನೆರೆ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛತೆ ಕೈಗೊಳ್ಳುವುದಕ್ಕೆ ಮಡಿಕೇರಿಗೆ ತೆರಳಲು ಸಿದ್ಧಗೊಂಡಿದೆ.

ಮಂಗಳೂರು ನಗರವನ್ನು ಸ್ವಚ್ಛತೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಲ್ಲಿ ಕೈಜೋಡಿಸಿರುವ ರಾಮಕೃಷ್ಣ ಮಿಷನ್‌ ಸಂಸ್ಥೆ ಜತೆ ಗುರುತಿಸಿಕೊಂಡಿರುವ ‘ಸ್ವಚ್ಛ ಮಂಗಳೂರು’ ಮತ್ತು ‘ಹಿಂದೂ ವಾರಿಯರ್’ ತಂಡದ ಸುಮಾರು 50 ಮಂದಿ ಸದಸ್ಯರು ಕೊಡಗು ಜಿಲ್ಲೆಗೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ. ಈ ತಂಡಗಳ ಸದಸ್ಯರು ಈಗಾಗಲೇ ಸಭೆ ಸೇರಿದ್ದು, ಮುಂದಿನ ಕಾರ್ಯ ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಎರಡು ಮಂದಿಯ ತಂಡ ಸರ್ವೇ ನಡೆಸಲು ಮಡಿಕೇರಿಗೆ ತೆರಳಿದ್ದು, ಅಲ್ಲಿಯ ಮಂದಿಯ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅದೇ ರೀತಿ ಮಂಗಳೂರಿನಲ್ಲಿರುವ ಮಡಿಕೇರಿ ಪರಿಸರದವರು ಕೂಡ ಈ ತಂಡದ ಜತೆ ಕೈ ಜೋಡಿಸಲು ಮುಂದಾಗಿದ್ದಾರೆ.

ಮೊದಲ ತಂಡ ರವಿವಾರ ತೆರಳಲಿದೆ
ಅಂದಹಾಗೆ, ಮಡಿಕೇರಿ ಸುತ್ತ- ಮುತ್ತಲಿನ ಮನೆಗಳನ್ನು ಸ್ವಚ್ಛಗೊಳಿಸಿ ವಾಸಿಸಲು ಯೋಗ್ಯವಾಗುವಂತೆ ಮಾಡಿ ಕೊಡುವುದೊಂದೇ ಈ ತಂಡದ ಯೋಚನೆಯಲ್ಲ. ಅದರ ಜತೆಗೆ ಆಯಾ ಮನೆಗಳಿಗೆ ತತ್‌ಕ್ಷಣಕ್ಕೆ ಅಗತ್ಯವಿರುವ ವಸ್ತುಗಳನ್ನು ಪೂರೈಕೆ ಮಾಡುವುದಕ್ಕೂ ಹೆಚ್ಚಿನ ಗಮನಹರಿಸಲಿದೆ. ರವಿವಾರ ಮೊದಲನೇ ತಂಡ ಮಡಿಕೇರಿಯತ್ತ ಪ್ರಯಾಣ ಬೆಳೆಸಲಿದ್ದು, ಇದಾದ ಒಂದೆರಡು ದಿನಗಳ ಬಳಿಕ ಮತ್ತೊಂದು ತಂಡವನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ.

ಸ್ವಚ್ಛತೆ ಕಾರ್ಯಕ್ಕಾಗಿ ಗುದ್ದಲಿ, ಪಿಕ್ಕಾಸು, ಹಾರೆ, ಕತ್ತಿ, ಬಟ್ಟಿ ಸಹಿತ ಮತ್ತಿತರ ವಸ್ತುಗಳ ಅಗತ್ಯವಿದ್ದು, ಅವುಗಳನ್ನು ರಾಮಕೃಷ್ಣ ಮಠದಿಂದ ಕೊಂಡೊಯ್ಯಲಿದ್ದಾರೆ. ಅದರ ಜತೆಗೆ ಒಂದು ಟ್ರಕ್‌ನಲ್ಲಿ ಅಲ್ಲಿನ ಮನೆಗೆ ತತ್‌ಕ್ಷಣಕ್ಕೆ ಬೇಕಾಗುವಂತಹ ಅಗತ್ಯ ವಸ್ತುಗಳಾದ ತಟ್ಟೆ, ಚಮಚ, ಲೋಟ ಸಹಿತ ಮತ್ತಿತರ ಪರಿಕರಗಳನ್ನು ತೆಗೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.

ಧೈರ್ಯ ತುಂಬುವ ಕೆಲಸ ಮಾಡುತ್ತೇವೆ
ಕೊಡಗು ಜಿಲ್ಲೆಯ ಮಂದಿಗೆ ನಮ್ಮ ತಂಡ ಧೈರ್ಯ ತುಂಬುವ ಕೆಲಸ ಮಾಡಲಿದ್ದೇವೆ. ಮಡಿಕೇರಿಯ ಮನೆಗಳಿಗೆ ಸಂಪರ್ಕಿಸಲು ಅಗತ್ಯವಿರುವ ರಸ್ತೆ ಕೆಲಸದಲ್ಲಿಯೂ ನಮ್ಮ ತಂಡದ ಸದಸ್ಯರು ತೊಡಗಲಿದ್ದಾರೆ. ರಾಮಕೃಷ್ಣ ಮಿಶನ್‌ನ ಮೈಸೂರು ಮತ್ತು ಪೊನ್ನಂಪೇಟೆ ತಂಡ ಕೂಡ ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದು, ಅವರ ಜತೆಗೂ ನಾವು ಕೈಜೋಡಿಸಲಿದ್ದೇವೆ. 
 - ಸೌರಜ್‌, ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.