ಪ್ರಧಾನಿ ಮೋದಿಯವರ ಮಂಗಳೂರು ಭೇಟಿ : ಭರದ ಸಿದ್ಧತೆ, 2ಲಕ್ಷ ಮಂದಿ ಸಾಮರ್ಥ್ಯದ ಚಪ್ಪರ ನಿರ್ಮಾಣ

ಜಿಲ್ಲಾಡಳಿತದಿಂದ ನಿರಂತರ ಸಭೆ

Team Udayavani, Aug 27, 2022, 8:40 AM IST

ಪ್ರಧಾನಿ ಮೋದಿಯವರ ಮಂಗಳೂರು ಭೇಟಿ : ಭರದ ಸಿದ್ಧತೆ, 2ಲಕ್ಷ ಮಂದಿ ಸಾಮರ್ಥ್ಯದ ಚಪ್ಪರ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ.

ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‌ಗಳನ್ನು ಅಳವಡಿಸಿ ಬೃಹತ್‌ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ ಸಿದ್ಧಗೊಳಿಸಲಾಗುತ್ತಿದೆ. ಮಳೆ ಬಂದರೆ ನೀರು ಸಭಾಂಗಣದೊಳಗೆ ಬಾರದಂತೆ ಸುತ್ತಲೂ ತಾತ್ಕಾಲಿಕ ಚರಂಡಿ ನಿರ್ಮಿಸಲಾಗುತ್ತಿದೆ. ಪಾರ್ಕಿಂಗ್‌ ವ್ಯವಸ್ಥೆಗೆ ತಾಣಗಳನ್ನು ಗುರುತಿಸಲಾಗುತ್ತಿದೆ. ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ.

ನವಮಂಗಳೂರು ಬಂದರಿನಲ್ಲಿ ನಿಗದಿ ಯಾಗಿರುವ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಲೋಕಾರ್ಪಣೆ ಮಾಡುವ ಬಗ್ಗೆಯೂ ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ. ಒಂದು ಮೂಲಗಳ ಪ್ರಕಾರ ಪ್ರಧಾನಿಯವರು ನವಮಂಗ ಳೂರು ಬಂದರಿಗೆ ತೆರಳಿ ಅಲ್ಲಿ ನಿಗದಿ ಕಾರ್ಯಕ್ರಮಗಳನ್ನು ಪೂರೈಸಿ ಬಳಿಕ ಗೋಲ್ಡ್‌ಫಿಂಚ್‌ ಸಿಟಿಗೆ ಆಗಮಿಸುತ್ತಾರೆ. ಇನ್ನೊಂದು ಮೂಲಗಳ ಪ್ರಕಾರ ಗೋಲ್ಡ್‌ಫಿಂಚ್‌ ಸಿಟಿಯಲ್ಲೇ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುತ್ತಾರೆ. ಪ್ರಧಾನಿಯವರ ಅಧಿಕೃತ ಪ್ರವಾಸ ವೇಳಾಪಟ್ಟಿ ಬಳಿಕ ಇದು ಸ್ಪಷ್ಟವಾಗಲಿದೆ.

ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ| ಭರತ್‌ ಶೆಟ್ಟಿ ವೈ., ವೇದವ್ಯಾಸ ಕಾಮತ್‌ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್‌ ಹೆಗ್ಡೆ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಡಿಸಿಪಿ ದಿನೇಶ್‌ ಕುಮಾರ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು, ಟ್ರಾಫಿಕ್‌ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ಅವರು ಶನಿವಾರ ಮಂಗಳೂರಿಗೆ ಆಗಮಿಸಲಿದ್ದು ಪ್ರಧಾನಿ ಭೇಟಿ ವೇಳೆ ಇಲಾಖೆಯಿಂದ ಆಗಬೇಕಾದ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ. ಒಂದೊಮ್ಮೆ ಪ್ರಧಾನಿಯವರು ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಆಗಮಿಸಿದರೆ ಯಾವುದೇ ಅಡಚಣೆಯಾಗದಂತೆ ಸುಗಮ ಸಂಚಾರಕ್ಕೆ ರಸ್ತೆಯನ್ನು ಸಿದ್ದಗೊಳಿಸಲಾಗುತ್ತಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಕುಳೂರುವರೆಗಿನ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ನಡೆಯುತ್ತಿದೆ.

ಉಪಾಹಾರ, ಊಟದ ವ್ಯವಸ್ಥೆ
ಪ್ರಧಾನಿಯವರು ಸಂಜೆ ಮಂಗಳೂರಿಗೆ ಆಗಮಿಸುವ ವೇಳೆ ಸಂಜೆಯ ಉಪಾಹಾರ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ವತಿಯಿಂದ ಮಾಡಲಾಗುತ್ತಿದೆ. ಕಳೆದ ಬಾರಿ ಬೆಳಗಿನ ಉಪಾ ಹಾರದ ವ್ಯವಸ್ಥೆಯನ್ನು ನಗರದ ಖಾಸಗಿ ಹೊಟೇಲ್‌ನಿಂದ ಮಾಡಲಾಗಿತ್ತು. ಈ ಬಾರಿಯೂ ಇದೇ ಹೊಟೇಲ್‌ನಿಂದ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ.

ಚುನಾವಣ ಆಯಾಮ
ಪ್ರಧಾನಿಯವರ ಮಂಗಳೂರು ಭೇಟಿ ಕರಾವಳಿ ಭಾಗದಲ್ಲಿ ಬಿಜೆಪಿ ಕಾರ್ಯ ಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ.

ಪ್ರಧಾನಿಯವರ 2017ರ ಭೇಟಿ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿ ಸುತ್ತಿರುವ ಸಂದರ್ಭದಲ್ಲೇ ನಡೆದಿತ್ತು. 2018ರ ವಿಧಾನಸಭಾ ಚುನಾವಣೆ ಮೇ 12ರಂದು ನಡೆದಿತ್ತು. ಪ್ರಧಾನಿಯವರು ಕೇರಳದ ಕೊಚ್ಚಿ ವಿಮಾನ ನಿಲ್ದಾಣದ ಮೂಲಕ ಲಕ್ಷದ್ವೀಪಕ್ಕೆ ತೆರಳಲು ಅವಕಾಶ ವಿದ್ದರೂ ಅವರು ಮಂಗಳೂರು ಮಾರ್ಗ ವನ್ನೇ ಆರಿಸಿಕೊಂಡಿದ್ದರು ಹಾಗೂ ಮಂಗಳೂರಿನಲ್ಲಿ ವಾಸ್ತವ್ಯ ಮಾಡಿದ್ದಕ್ಕೆ ಚುನಾವಣೆಗೆ ತಳುಕು ಹಾಕಲಾಗಿತ್ತು. ಈ ಬಾರಿಯೂ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

ಮೋದಿಯವರ ವಾಸ್ತವ್ಯ ಸಾಧ್ಯತೆ
ಪ್ರಧಾನಿಯವರು ಮಂಗಳೂರಿನಲ್ಲಿ ಆ. 2ರಂದು ವಾಸ್ತವ್ಯ ಹೂಡುವ ಸಂಭಾವ್ಯ ಸಾಧ್ಯತೆಗಳನ್ನು ಪರಿಗಣಿಸಿ ಅದಕ್ಕೆ ಪೂರಕವಾಗಿ ಕೂಡ ಸಿದ್ಧತೆಗಳು ಮಾಡಲಾಗುತ್ತಿದೆ. ಸಾಮಾನ್ಯವಾಗಿ ಪ್ರಧಾನಿ, ರಾಷ್ಟ್ರಪತಿ ಮುಂತಾದ ಅತೀ ಗಣ್ಯರು ಬರುವ ಸಂದರ್ಭ ಶಿಷ್ಟಾಚಾರದಂತೆ ಅವರ ವಾಸ್ತವ್ಯಕ್ಕೆ ಎರಡು ತಾಣಗಳನ್ನು ಸಿದ್ಧಗೊಳಿಸಿ ಇಡಲಾಗುತ್ತಿದೆ. ಇದರಂತೆ ನಗರದ ಸರ್ಕ್ನೂಟ್‌ ಹೌಸ್‌, ಎನ್‌ಎಂಪಿಟಿ ಗೆಸ್ಟ್‌ ಹೌಸ್‌ಗಳ ಪರಿಶೀಲನೆ ನಡೆದಿದೆ. ಪ್ರಧಾನಿಯವರು ಮಂಗಳೂರಿನಲ್ಲಿ ವಾಸ್ತವ¤ದ ಸಾಧ್ಯತೆಗಳೂ ಇವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮೋದಿಯವರು ಒಖೀ ಚಂಡಮಾರುತದಿಂದ ಸಂಭವಿಸಿದ ಹಾನಿಯನ್ನು ವೀಕ್ಷಿಸಲು ಲಕ್ಷದ್ವೀಪಕ್ಕೆ ತೆರಳುವ ಹಾದಿಯಲ್ಲಿ 2017ರ ಡಿ.18ರಂದು ಮಂಗಳೂರು ಸರ್ಕ್ನೂಟ್‌ ಹೌಸ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು. ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ರಾತ್ರಿ 11.45ರ ವೇಳೆಗೆ ಮಂಗಳೂರು ತಲುಪಿದ್ದರು. ಮರುದಿನ ಬೆಳಗ್ಗಿನ ಉಪಾಹಾರ ಸೇವಿಸಿ ಲಕ್ಷದ್ವೀಪಕ್ಕೆ ಪ್ರವಾಸ ಮುಂದುವರಿಸಿದ್ದರು.

ಜಿಲ್ಲಾಡಳಿತದಿಂದ ನಿರಂತರ ಸಭೆ
ಪ್ರಧಾನಿಯವರ ಭೇಟಿ ಸಂದರ್ಭ ಸೂಕ್ತ ವ್ಯವಸ್ಥೆಗಳನ್ನು ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ವಿವಿಧ ಇಲಾಖೆಗಳ ಪ್ರಮುಖರ ಸಭೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಜರಗಿತು. ಪ್ರಧಾನಿ ಭೇಟಿ ವೇಳೆ ಪಾಲಿಸಬೇಕಾದ ಶಿಷ್ಟಾಚಾರಗಳು, ಭದ್ರತಾ ವ್ಯವಸ್ಥೆ, ಮಂಗಳೂರಿನಲ್ಲಿ ಅವರ ಕಾರ್ಯಕ್ರಮಗಳ ವೇಳೆ ಅವಶ್ಯ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುವಂತೆ ನಿಗಾ ಮುಂತಾದ ವಿಚಾರಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಸಭೆಯಲ್ಲಿ ಪೊಲೀಸ್‌ ಇಲಾಖೆ, ವಿವಿಧ ಇಲಾಖೆಗಳ ಮುಖ್ಯಸ್ಥರು. ವಿಮಾನ ನಿಲ್ದಾಣದ ಅಧಿಕಾರಿಗಳು, ನವಮಂಗಳೂರು ಬಂದರು ಅಧಿಕಾರಿಗಳು, ಎಂಆರ್‌ಪಿಎಲ್‌ ಪ್ರಮುಖರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.