ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ; ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ
Team Udayavani, Sep 29, 2022, 12:44 PM IST
ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವ ವಿರುದ್ಧ ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಹರಿಹರ ಮುಖ್ಯ ಪೇಟೆಯಲ್ಲಿ ಸೆ.29ರ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಸ್ಥಳದಲ್ಲಿ ನೂರಾರು ಮಂದಿ, ಮಹಿಳೆಯರು, ನಾಗರಿಕರು ಸೇರಿದ್ದರು. ಪ್ರತಿಭಟನೆ ನಡೆಸುತಿದ್ದ ಸ್ಥಳದಲ್ಲಿ ಮದ್ಯದಂಗಡಿ ಪರವಾದ ಅಪರಿಚಿತ ವ್ಯಕ್ತಿಯೊಬ್ಬ ವೀಡಿಯೊ ಚಿತ್ರೀಕರಣ ಮಾಡುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದವರು ವ್ಯಕ್ತಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಮುಂಜಾಗ್ರತೆ ಅರಿತ ಸ್ಥಳದಲ್ಲಿದ್ದ ಸುಬ್ರಹ್ಮಣ್ಯ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು, ವಾಹನದಲ್ಲಿರಿಸಿಕೊಂಡರು. ಈ ವೇಳೆ ಆಕ್ರೋಶಗೊಂಡ ಮಹಿಳೆಯರು ವ್ಯಕ್ತಿಯನ್ನು ತಮಗೆ ನೀಡುವಂತೆ ಒತ್ತಾಯಿಸಿ ಪೊಲೀಸ್ ವಾಹನ ತಡೆದು ಬಿಗು ಪಟ್ಟು ಹಿಡಿದರು. ಪೊಲೀಸ್ ಜೀಪ್ಗೆ ಅಡ್ಡ ನಿಂತು ಪ್ರತಿಭಟನಾಕಾರರು ಪ್ರತಿಭಟಿಸಿ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ