ಶಿರಾಡಿಯಲ್ಲಿ ಘನ ವಾಹನ ಸಂಚಾರಕ್ಕೆ ಆಗ್ರಹ


Team Udayavani, Sep 23, 2018, 10:05 AM IST

shiradi.jpg

ನೆಲ್ಯಾಡಿ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನ ಹೊರತುಪಡಿಸಿ ಘನ ವಾಹನ ಸಂಚಾರಕ್ಕೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯಬೇಕು ಕನಿಷ್ಠ ಬಸ್‌ ಮತ್ತು 6 ಚಕ್ರದ ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ಗುಂಡ್ಯ ಪೇಟೆಯಲ್ಲಿ ಶನಿವಾರ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಿತು.
ವೇದಿಕೆ ಆಶ್ರಯದಲ್ಲಿ ಸೇರಿದ ಪ್ರತಿಭಟನಕಾರರು ಕಳೆದ 9 ತಿಂಗಳಿನಿಂದ ನಾನಾ ಕಾರಣಗಳನ್ನು ಮುಂದಿಟ್ಟು ಶಿರಾಡಿ ಘಾಟಿ ರಸ್ತೆಯನ್ನು ಮುಚ್ಚಲಾಗಿದೆ. ಇದರಿಂದಾಗಿ ದ.ಕ. ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆಗೆ
ಧಕ್ಕೆ ಉಂಟಾಗಿದೆ. ಆದ ಕಾರಣ ತತ್‌ಕ್ಷಣದಿಂದಲೇ ರಸ್ತೆಯಲ್ಲಿ ಕನಿಷ್ಠ ಬಸ್‌ ಮತ್ತು 6 ಚಕ್ರದ ಲಾರಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ ಮಾತನಾಡಿ ಗುಡ್ಡ ಕುಸಿತ ನೆಪ ಒಡ್ಡಿ ಘನ ವಾಹನ ಸಂಚಾರಕ್ಕೆ ಅವಕಾಶ ನೀಡದೆ ನಿಷೇಧ ಹೇರಲಾಗಿದೆ. ಗುಡ್ಡ ಕುಸಿತ ಆಗಿರುವ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಸರಿಪಡಿಸಲಾಗಿದೆ, ಸಕಲೇಶಪುರ ವ್ಯಾಪ್ತಿಯಲ್ಲಿ ಬಾಕಿ ಇದ್ದು, ಅದನ್ನು ಸರಿಪಡಿಸದೆ ವಾಹನ ಸಾಗಲು ಬಿಡಲಾಗಿದೆ.  ಬಸ್‌ ಸಂಚಾರ ಮಾಡಬಹುದು ಎನ್ನುವ ಬಗ್ಗೆ ಹೆದ್ದಾರಿ ಇಲಾಖೆಯವರು ತಿಳಿಸಿರುತ್ತಾರೆ. ಇಲ್ಲಿ ಉದ್ದೇಶಪೂರ್ವಕವಾಗಿ ಬಂದ್‌ ಮಾಡಲಾಗಿದೆ. ತತ್‌ಕ್ಷಣ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಕ್ರಮಕೈಗೊಳ್ಳಬೇಕು ಎಂದರು.

ಪ್ರತಿಭಟನೆಯ ಕಾವು ಏರುತ್ತಿದ್ದಂತೆ ಪ್ರತಿಭಟನಕಾರರು ಹೆದ್ದಾರಿ ತಡೆಗೆ ಮುಂದಾದರು. ಆಗ ಪೊಲೀಸರು ಮಧ್ಯ ಪ್ರವೇಶಿಸಿ ರಸ್ತೆ ತಡೆ ಮಾಡದಂತೆ ಮನವೊಲಿಸಿದರು. ಹೆದ್ದಾರಿ ಇಲಾಖೆಯವರು ಇಲ್ಲಿಗೆ ಬಂದು ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುತ್ತಿಲ್ಲ ಯಾಕೆ ಎಂದು ತಿಳಿಸಬೇಕು ಎಂದು ಆಗ್ರಹಿಸಿದರು. ಉಪ್ಪಿನಂಗಡಿ ಎಸ್‌ಐ ನಂದಕುಮಾರ್‌ ಹೆದ್ದಾರಿ ಇಲಾಖೆಯವರನ್ನು ಸಂಪರ್ಕಿಸಿದ್ದು, ಸುಮಾರು 1 ತಾಸು ಬಳಿಕ ಅವರು ಸ್ಥಳಕ್ಕೆ ಆಗಮಿಸಿ ಮಾಹಿತಿ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಬಸ್‌ಗಳಿಗೆ ಅವಕಾಶ: ಇಲಾಖೆ ರಾ. ಹೆದ್ದಾರಿ ಇಲಾಖೆಯ ನಂಜಪ್ಪ ಪ್ರತಿಭಟನಕಾರರ ಬಳಿ ಆಗಮಿಸಿ ಈ ರಸ್ತೆಯಲ್ಲಿ ವೋಲ್ವೋ ಬಸ್‌ ಸಹಿತ 6 ಚಕ್ರ ತನಕದ ವಾಹನ ಸಂಚಾರಕ್ಕೆಅವಕಾಶ ನೀಡುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ ಸುರಕ್ಷತೆ ದೃಷ್ಟಿಯಿಂದ ಬಂದ್‌ ಮಾಡಲಾಗಿದೆ. ತಮ್ಮ ಬೇಡಿಕೆ ಬಗ್ಗೆ ಮತ್ತೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಅವರು ತಿಳಿಸಿದರು. ಇವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ ಸಿ.ವಿ. ರೆಡ್ಡಿ ಇದ್ದರು.ವೇದಿಕೆ ಸದಸ್ಯರಾದ ದಾಮೋದರ್‌ ಗುಂಡ್ಯ, ಸುಭಾಶ್‌ ಗುಂಡ್ಯ, ಯತೀಶ್‌ ಗುಂಡ್ಯ, ಸೂರ್ಯನಾರಾಯಣ ಶಿಶಿಲ, ಸುಧೀರ್‌ ಕುಮಾರ್‌ ಅರಸಿನಮಕ್ಕಿ, ಶರೀಫ್ ಬಿ.ಸಿ.ರೋಡು, ಮಹಮ್ಮದ್‌ ಅಲ್ತಾಫ್, ಅಶ್ರಫ್, ಮಹಮ್ಮದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.