ಮಳೆ ನಡುವೆಯೂ ಖರೀದಿ ಬಿರುಸು


Team Udayavani, Aug 15, 2018, 10:01 AM IST

15-agust-1.jpg

ಮಹಾನಗರ: ಬುಧವಾರ ನಡೆಯುವ ನಾಗರಪಂಚಮಿ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳಿಗೆ ಸಿದ್ಧತೆ ಆರಂಭವಾಗಿದೆ. ದೇಗುಲ, ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗತಂಬಿಲ, ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕಗಳಿಗಾಗಿ ಮಂಗಳವಾರ ತಯಾರಿ ನಡೆಯಿತು. ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪೂಜಾ ಪರಿಕರ, ಹೂ ಹಣ್ಣುಗಳ ವ್ಯಾಪಾರ ವಹಿವಾಟು ನಡೆಸುವವರಿಗೆ ವ್ಯಾಪಾರಕ್ಕೆ ಸ್ವಲ್ಪ ಹಿನ್ನಡೆಯಾಗಿದೆ.

ನಗರದ ಐತಿಹಾಸಿಕ ನಾಗದೇವಸ್ಥಾನವಾದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಗೆಂದೇ ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ನಸುಕಿನ ವೇಳೆ 5.30ರಿಂದಲೇ ಇಲ್ಲಿನ ನಾಗಬನದಲ್ಲಿರುವ ಅಸಂಖ್ಯ ನಾಗಬಿಂಬಗಳಿಗೆ ವಿಶೇಷ ಪೂಜೆ, ಸೀಯಾಳ ಅಭಿಷೇಕ, ಕ್ಷೀರಾಭಿಷೇಕ ಹಾಗೂ ನಿರಂತರವಾಗಿ ನಾಗತಂಬಿಲ ಸೇವೆಗಳು ಜರಗಲಿವೆ. ಮಧ್ಯಾಹ್ನ 12ಕ್ಕೆ ಗರ್ಭ ಗುಡಿಯಲ್ಲಿರುವ ಶ್ರೀ ಅನಂತ ಪದ್ಮನಾಭ ದೇವರಿಗೆ ನಾಗರಪಂಚಮಿಯ ವಿಶೇಷ ಮಹಾಪೂಜೆ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಶ್ರೀ ಶರವು ಮಹಾಗಣಪತಿ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ನಾಗರಪಂಚಮಿ ಆಚರಣೆಗೆ ತಯಾರಿ ನಡೆಯುತ್ತಿದೆ.

ಮೂಲಬನಗಳಲ್ಲಿ ನಾಗಾರಾಧನೆ
ಕೇವಲ ದೇಗುಲಗಳಲ್ಲಿ ಮಾತ್ರವಲ್ಲದೆ, ವಿವಿಧ ಕುಟುಂಬ ಗಳ ಮೂಲಬನಗಳಲ್ಲಿಯೂ ನಾಗದೇವರಿಗೆ ತಂಬಿಲ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ಮುಂತಾದ ಸೇವೆಗಳು ಬುಧವಾರ ನೆರವೇರಲಿದೆ. 

ಪೂಜಾ ಪರಿಕರಗಳ ಖರೀದಿ
ನಾಗರ ಪಂಚಮಿ ಹಿನ್ನೆಲೆಯಲ್ಲಿ ಈಗಾಗಲೇ ವ್ಯಾಪಾರಸ್ಥರು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದಾರೆ. ನಾಗನಿಗೆ ಪ್ರಿಯವಾದ ಹೂ ಹಣ್ಣು, ವಿವಿಧ ಪೂಜಾ ಪರಿಕರಗಳ ಖರೀದಿಯಲ್ಲಿ ಭಕ್ತರು ತೊಡಗಿದ್ದಾರೆ. ಈಗಾಗಲೇ ಉತ್ತರ ಕರ್ನಾಟಕ ಭಾಗಗಳಿಂದಲೂ ವ್ಯಾಪಾರಸ್ಥರು ನಗರಕ್ಕೆ ಆಗಮಿಸಿದ್ದು, ಬೀದಿ ಬೀದಿಗಳಲ್ಲಿ ಹೂವಿನ ಮಾರಾಟದಲ್ಲಿ ತೊಡಗಿದ್ದಾರೆ. ಕಂಕನಾಡಿ ವೃತ್ತದ ನಾಲ್ಕೂ ಬದಿಗಳು, ಬಿಜೈ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ, ಬಂಟ್ಸ್‌ ಹಾಸ್ಟೆಲ್‌, ಸ್ಟೇಟ್‌ ಬ್ಯಾಂಕ್‌, ಹಂಪನಕಟ್ಟೆ ಮುಂತಾದೆಡೆಗಳಲ್ಲಿ ಹೂವಿನ ವ್ಯಾಪಾರ ಜೋರಾಗಿದೆ.

ನಾಗರಪಂಚಮಿಗಾಗಿ ಕೇದಿಗೆ, ಮಲ್ಲಿಗೆ, ಸೇವಂತಿಗೆ, ಹಬ್ಬಲ್ಲಿಗೆ, ಗುಲಾಬಿ ಹೂವುಗಳ ಮಾರಾಟ ಜೋರಾಗಿದೆ. ಮಲ್ಲಿಗೆ, ಸೇವಂತಿಗೆಗೆ ಮೊಳಕ್ಕೆ 20 ರೂ.ಗಳಿಂದ 30 ರೂ.ಗಳ ತನಕವೂ ಮಾರಾಟವಾಗುತ್ತಿದೆ. ಕೆಂಗುಲಾಬಿಗೆ 10 ರೂ.ಗಳಾಗಿವೆ. ಆದರೆ ಒಂದೊಂದು ಕಡೆ ಒಂದೊಂದು ರೀತಿಯ ದರಕ್ಕೆ ಈ ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ನಾಗದೇವರಿಗೆ ಪ್ರಿಯವಾದ ಸೀಯಾಳದ ಬೆಲೆ 40-45 ರೂ. ದಾಟಿದೆ. ಬಾಳೆಹಣ್ಣು, ಕಿತ್ತಳೆ, ಸೇಬು ಹಣ್ಣುಗಳ ಮಾರಾಟವೂ ಭರ್ಜರಿಯಾಗಿ ನಡೆಯುತ್ತಿದ್ದು, ವಿವಿಧ ಕಡೆಗಳಿಂದ ಜನ ಆಗಮಿಸಿ ಖರೀದಿಯಲ್ಲಿ ತೊಡಗಿದ್ದಾರೆ.

ಮಳೆಯಿಂದ ವ್ಯಾಪಾರಕ್ಕೆ ಹಿನ್ನಡೆ
ಮಳೆ ನೀರು ಬೀಳದಿರುವ ಕಡೆಗಳಲ್ಲಿ ಅಥವಾ ಮಾರ್ಕೆಟ್‌ಗಳಲ್ಲಿ ವ್ಯಾಪಾರ ನಡೆಸುತ್ತಿರುವವರಿಗೆ ವ್ಯಾಪಾರ ಹೆಚ್ಚಿದ್ದರೂ ಹೊರ ಜಿಲ್ಲೆಗಳಿಂದ ಬಂದು ನಗರದ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸುತ್ತಿರುವವರಿಗೆ ಮಳೆಯಿಂದಾಗಿ ತುಸು ಹಿನ್ನಡೆಯಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೂವಿನ ಮೇಲೆ ನೀರು ಬಿದ್ದು ಹಾಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜನ ಮಾರ್ಕೆಟ್‌ನತ್ತಲೇ ಹೆಚ್ಚು ಹೋಗುತ್ತಿದ್ದಾರೆ. ಅಲ್ಲದೆ ಸುರಕ್ಷಿತ ಸ್ಥಳವೂ ಇಲ್ಲದ್ದರಿಂದ ಮಳೆಯಲ್ಲಿ ನೆನೆದು ಕೊಂಡೇ ವ್ಯಾಪಾರ ನಡೆಸಿದರೂ ವ್ಯಾಪಾರ ಇಳಿಕೆಯಾಗಿದೆ ಎನ್ನುತ್ತಾರೆ ಬಿಜೈ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಬಳಿ ಹೂ ಮಾರಾಟ ಮಾಡುತ್ತಿರುವ ವ್ಯಾಪಾರಸ್ಥರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.