ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಪುಟ್ಟಣ್ಣ

ಹೊಸ ಪ್ರಯೋಗದ ಮೂಲಕ ನೇಜಿ ನಾಟಿ

Team Udayavani, Oct 12, 2020, 11:55 AM IST

Sud-blth-tdy-2

ಸವಣೂರು, ಅ. 11: ಲಾಕ್‌ಡೌನ್‌ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೂರೈಕೆಯಲ್ಲಿ ವ್ಯತ್ಯಯ, ಮಾರುಕಟ್ಟೆಗೆ ಹೋಗಲಾಗದ ಪರಿಸ್ಥಿತಿಯನ್ನು ಎದುರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಗಳ ಜನ ಇದೀಗ ತಾವೇ ಭತ್ತ ಹಾಗೂ ತರಕಾರಿಯನ್ನು ಬೆಳೆಯಲಾರಂಭಿಸಿದ್ದಾರೆ. ಗದ್ದೆ ಇಲ್ಲದೇ ಹೋದಲ್ಲಿ ಇತರರ ಜಮೀನಿನಲ್ಲಿರುವ ಖಾಲಿ ಜಾಗವನ್ನು ಸಮತಟ್ಟುಗೊಳಿಸಿ ಕೃಷಿ ಮಾಡುತ್ತಿದ್ದಾರೆ.

ಪಾಲ್ತಾಡಿ ಮಂಜುನಾಥನಗರ ಸ.ಹಿ.ಪ್ರಾ. ಶಾಲೆಯ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾಗಿರುವ ಸವಣೂರು ಸಮೀಪದ ಪರಣೆ ನಿವಾಸಿ ಪುಟ್ಟಣ್ಣ ಮಡಿವಾಳ ಅವರ ಕಥೆಯೂ ಇದಕ್ಕಿಂತ ಭಿನ್ನವಾಗಿಲ್ಲ. ಅವರಿಗೆ ಸ್ವಂತ ಗದ್ದೆ ಇಲ್ಲ. ಆದರೂ ಭತ್ತದ ಗದ್ದೆ ಮಾಡಬೇಕೆಂಬ ಅದಮ್ಯ ಉತ್ಸಾಹ ಅವರಲ್ಲಿತ್ತು. ಅದಕ್ಕೆ ಪೂರಕವಾಗಿ ಬಂಬಿಲಗುತ್ತು ಮಿತ್ರಾ ಜೈನ್‌ ಕೆಲವು ವರ್ಷಗಳಿಂದ ಭತ್ತದ ಕೃಷಿ ನಿಲ್ಲಿಸಿ ಹಡಿಲು ಬಿದ್ದಿದ್ದ ತಮ್ಮ ಗದ್ದೆ ನೀಡಿ ಅದಕ್ಕೆ ಬೇಕಾದ ಪೂರಕ ವ್ಯವಸ್ಥೆ ಕಲ್ಪಿಸಿದ್ದರು. ಅದರಂತೆ ಇದೀಗ ಭತ್ತ ಕೊಯ್ಲಿಗೆ ಸಿದ್ಧವಾಗಿದೆ.

ಸಸಿ ಮಡಿ : ಶ್ರೀ ಪದ್ಧತಿಯಂತೆ ನೇಜಿ ನಾಟಿ ಮಾಡಿದ ಪುಟ್ಟಣ್ಣ ಹೊಸ ಪ್ರಯೋಗದ ಮೂಲಕ ನೇಜಿ ಬೆಳೆಸಿದರು. ಮಣ್ಣಿನ ಹೆಂಚುಗಳನ್ನು ನೆಲದ ಮೇಲೆ ಹಾಸಿ ಅದರ ಮೇಲೆ ಸೋಸಿದ ಮಣ್ಣು ಹಾಕಿ ಭತ್ತದ ಬೀಜ ಹಾಕಿ  ಸಸಿ ಮಾಡಿ ಹೆಂಚು ಸಮೇತ ನೇಜಿಯನ್ನು ಗದ್ದೆಗೆ ಕೊಂಡು ಹೋಗಿ ಅಲ್ಲಿ ನಾಟಿ ಮಾಡಿದರು. ಭತ್ತದ ಬೀಜವನ್ನು ಉಪ್ಪು ನೀರಿನಲ್ಲಿ ಹಾಕಿದಾಗ ಅದರಲ್ಲಿ ಉತ್ತಮ ಭತ್ತ ಹಾಗೂ ಜೊಲ್ಲು ಭತ್ತ ಪ್ರತ್ಯೇಕವಾಗುತ್ತದೆ. ಉಪ್ಪು ನೀರಿನಿಂದ ತೆಗೆದು ಶುದ್ಧ ನೀರಿನಲ್ಲಿ ತೊಳೆದು ಸಗಣಿ ಮಿಶ್ರಿತ ಭತ್ತವನ್ನು ಗೋಣಿಯಲ್ಲಿ ಇಟ್ಟೋವು ಜಾತಿಯ ಗಿಡದ ಎಲೆಯನ್ನು ಹಾಕಿಟ್ಟು ಬಳಿಕ ಹೆಂಚಿನ ಮೇಲೆ ಮಣ್ಣು ಹಾಕಿ ಭತ್ತ ಭಿತ್ತನೆ ಮಾಡಿದ್ದೇನೆ. ಗಿಡವಾದ 22ನೇ ದಿನದಲ್ಲಿ ನಾಟಿ ಮಾಡಿದ್ದೇನೆ ಎಂದು ವಿವರಿಸುತ್ತಾರೆ ಪುಟ್ಟಣ್ಣ. ಒಂದೂವರೆ ಎಕ್ರೆಯಲ್ಲಿ ಅಂದಾಜು ಸುಮಾರು 50 ಕ್ವಿಂಟಾಲ್‌ ಇಳುವರಿ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.

ನಮ್ಮ ಊರಿನ ಮಿತ್ರ ಜೈನ್‌ ತಮ್ಮ ಹಡಿಲು ಬಿದ್ದಿದ್ದ  ಗದ್ದೆಯಲ್ಲಿ ಬೇಸಾಯ ಮಾಡುವ ಕುರಿತು ಆಸಕ್ತಿ ಇದೆಯಾ ಎಂದು ಕೇಳಿದರು. ಅದಕ್ಕೆ ಪೂರಕವಾಗಿ ಭತ್ತದ ಕೃಷಿಗೆ ಇಳಿದೆ. ಹೊಸ ಪದ್ಧತಿಯಿಂದ ಗದ್ದೆ ಮಾಡಿದೆ. ಅವರ ಸಹಕಾರವೂ ಸಿಕ್ಕಿದೆ.ನಿರೀಕ್ಷೆಗೂ ಮೀರಿದ ಬೆಳೆಯಾಗಿದೆ. ಇದನ್ನು ಮುಂದುವರಿಸುತ್ತೇನೆ. ಪುಟ್ಟಣ್ಣ ಪರಣೆ, ಭತ್ತದ ಕೃಷಿಕ

ಸುದಿನ ವಿಶೇಷ

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಆರಂಭ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

Untitled-1

ಪಾಲ್ತಾಡಿಯ ಬಂಬಿಲಗುತ್ತಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿದೆ ತುಳುವರ ಭೂಮಿ ಪೂಜೆ- ಗದ್ದೆಕೋರಿ

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

4

200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.