ಪುತ್ತೂರಿನಲ್ಲಿ  5,136, ಸುಳ್ಯದಲ್ಲಿ  1,998 ವಿದ್ಯಾರ್ಥಿಗಳು ಹಾಜರು

Team Udayavani, Mar 31, 2017, 10:36 AM IST

3003kpk9.jpg

ಉಭಯ ತಾಲೂಕುಗಳಲ್ಲಿ ಎಸೆಸೆಲ್ಸಿ ಪರೀಕ್ಷೆ  ಆರಂಭ
ಪುತ್ತೂರು : ತಾಲೂಕಿನಲ್ಲಿ 2016-17ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿತು. ಪರೀಕ್ಷೆಗೆ ಒಟ್ಟು ನೋಂದಣಿಗೊಂಡ 5,199 ವಿದ್ಯಾ ರ್ಥಿಗಳ ಪೈಕಿ 5,136 ಮಂದಿ ಪರೀಕ್ಷೆ ಬರೆದಿದ್ದು, 63 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

12 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ, ಇಂಗ್ಲಿಷ್‌, ಸಂಸ್ಕೃತ ವಿಷಯವನ್ನು ಪ್ರಥಮ ಭಾಷೆಯನ್ನಾಗಿ ಆಯ್ದುಕೊಂಡ ವಿದ್ಯಾ ರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಹೊಸದಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 2,103 ಬಾಲಕರು, 2,219 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 36 ಬಾಲಕರು ಮತ್ತು 18 ಬಾಲಕಿಯರು ಗೈರು ಹಾಜರಾಗಿದ್ದರು. ಮರು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 21 ಬಾಲಕರು, 2 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, ಬಾಲಕರ ಪೈಕಿ-4, ಬಾಲಕಿಯರ ಪೈಕಿ 1 ವಿದ್ಯಾರ್ಥಿನಿ ಗೈರಾಗಿದ್ದರು. ಆಂಗ್ಲ ಭಾಷಾ ವಿಷಯದಲ್ಲಿ 323 ಬಾಲಕರು, 307 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.  ಸಂಸ್ಕೃತ ವಿಷಯದಲ್ಲಿ 127 ಬಾಲಕರು, 97 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಪರೀಕ್ಷಾ ಕೇಂದ್ರಗಳು
ನಗರದ ಕೊಂಬೆಟ್ಟು ಸರಕಾರಿ ಪ್ರೌಢಶಾಲೆ, ದರ್ಬೆ ಫಿಲೋಮಿನಾ ಪ್ರೌಢಶಾಲೆ, ಸೈಂಟ್‌ ವಿಕ್ಟರ್ ಪ್ರೌಢಶಾಲೆ, ತೆಂಕಿಲ ವಿವೇಕಾನಂದ ಪ್ರೌಢಶಾಲೆ, ಉಪ್ಪಿ ನಂಗಡಿ ಸರಕಾರಿ ಪ್ರೌಢಶಾಲೆ, ಸೈಂಟ್‌ ಜಾರ್ಜ್‌ ಪ್ರೌಢಶಾಲೆ ನೆಲ್ಯಾಡಿ, ವಿದ್ಯಾರಶ್ಮಿ ವಿದ್ಯಾಲಯ ಸವಣೂರು, ಸರಕಾರಿ ಪ್ರೌಢಶಾಲೆ ಕುಂಬ್ರ, ಗಜಾನನ ಪ್ರೌಢಶಾಲೆ ಈಶ್ವರಮಂಗಲ, ಸರಕಾರಿ ಪ್ರೌಢಶಾಲೆ ಕಡಬ, ಕನ್ನಾಯ ಜ್ಯೋತಿ ಪ್ರೌಢಶಾಲೆ ಕಡಬ, ರಾಮಕುಂಜ ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ದಲ್ಲಿ ಪರೀಕ್ಷೆ ನಡೆದಿದೆ.

ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆ ಯಲ್ಲಿ 12 ಮುಖ್ಯ ಅಧೀ ಕ್ಷರು, 12 ಉಪ ಅಧೀ ಕ್ಷಕರು, 12 ಮಂದಿ ಅಭಿರಕ್ಷಕರು, 225 ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಿದರು.

ಸುಳ್ಯ : ತಾಲೂಕಿನಲ್ಲಿ ಈ ವರ್ಷದ ಎಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿದ್ದು, ಒಟ್ಟು 39 ಪ್ರೌಢ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ, ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಗುರುವಾರ ನಡೆದ ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್‌, ಸಂಸ್ಕೃತ) ಪರೀ ಕ್ಷೆಗೆ  2,036 ವಿದ್ಯಾರ್ಥಿ ಗಳಲ್ಲಿ 38 ಮಂದಿ ಗೈರು ಹಾಜರಾಗಿದ್ದು, 1998 ಮಂದಿ ಹಾಜರಾಗಿದ್ದಾರೆ. ಈ ಪೈಕಿ 108 ಮಂದಿ ಇಂಗ್ಲಿಷ್‌, 53 ಮಂದಿ ಸಂಸ್ಕೃತ ಹಾಗೂ 1,837 ಮಂದಿ ಕನ್ನಡ ವಿಷಯದಲ್ಲಿ ಪರೀಕ್ಷೆ ಬರೆದಿದ್ದಾರೆ.

6 ಪರೀಕ್ಷಾ ಕೇಂದ್ರಗಳು
ಸುಳ್ಯ ಸರಕಾರಿ ಪ.ಪೂ. ಕಾಲೇ ಜಿನಲ್ಲಿ 458ರಲ್ಲಿ 6 ಮಂದಿ, ಗಾಂಧಿಧಿನಗರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 272ರಲ್ಲಿ 6 ಮಂದಿ, ಸುಳ್ಯ ಶಾರದಾ ಮಹಿಳಾ ಶಿಕ್ಷಣ ಸಂಸ್ಥೆಯಲ್ಲಿ 277ರಲ್ಲಿ 5 ಮಂದಿ, ಸೈಂಟ್‌ ಜೋಸೆಫ್‌ ಶಿಕ್ಷಣ ಸಂಸ್ಥೆಯಲ್ಲಿ 282ರಲ್ಲಿ 6ಮಂದಿ, ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 311ರಲ್ಲಿ 3 ಮಂದಿ ಹಾಗೂ ಸುಬ್ರಹ್ಮಣ್ಯ ಪ.ಪೂ. ಕಾಲೇಜಿನಲ್ಲಿ 436ರಲ್ಲಿ 11 ಮಂದಿ ಗೈರು ಹಾಜರಾಗಿದ್ದಾರೆ.

9.45ರ ವರೆಗೆ ಅವಕಾಶ
ಪ್ರತಿದಿನ ಬೆಳಗ್ಗೆ 9.15ಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. 9.30ಕ್ಕೆ ಪರೀಕ್ಷೆ ಆರಂಭಗೊಳ್ಳುತ್ತದೆ. 1 ನಿಮಿಷ ತಡವಾದರೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ  ಎಂದು ಹೇಳಲಾಗಿತ್ತು. ಆದರೆ ಇದೀಗ 9.45ರ ವರೆಗೆ ಅವಕಾಶ ನೀಡಲಾಗಿದೆ. ಅನಂತರ ಕೇಂದ್ರಕ್ಕೆ ಬಂದವರಿಗೆ  ಅವಕಾಶವಿಲ್ಲ. ಅರಂತೋಡು ಪರೀಕ್ಷಾ ಕೇಂದ್ರ ಈ ಬಾರಿ ರದ್ದುಗೊಂಡಿದೆ. ಸಂಪಾಜೆ, ಅರಂತೋಡು, ಮರ್ಕಂಜ ಇನ್ನಿತರ ಗ್ರಾಮಾಂತರ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರ ದೂರವಾಗಿದ್ದರಿಂದ ವಿದ್ಯಾ ರ್ಥಿಗಳು ಖಾಸಗಿ ವಾಹನಗಳ ಮೂಲಕ ಕೇಂದ್ರಕ್ಕೆ  ಬಂದರು. 

ಎಲ್ಲೆಡೆ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆದಿದ್ದು, ಕೆಲವೊಂದು ಕೇಂದ್ರಗಳಲ್ಲಿ ಸಿ.ಸಿ. ಕೆಮರಾ ಅಳವಡಿ ಸಲಾಗಿತ್ತು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.