ಅರಣ್ಯ ಇಲಾಖೆಯಲ್ಲಿ ಜ್ಯೇಷ್ಠತೆ ಆಧಾರದ ಭಡ್ತಿ ಸಿಗಲಿ

Team Udayavani, Jan 6, 2019, 9:14 AM IST

6-january-15.jpg

ಪುತ್ತೂರು: ಅರಣ್ಯ ಇಲಾಖೆಯಲ್ಲಿ ಅಪರ ಕಾರ್ಯದರ್ಶಿಗಳನ್ನು ಸೀಮಿತ ಅವಧಿಯಲ್ಲಿ ಬದಲಾವಣೆ ಮಾಡುತ್ತಿರು ವುದು ತಪ್ಪು ನಿರ್ಧಾರ. ಇಲಾಖೆಯಲ್ಲಿ ಜ್ಯೇಷ್ಠತೆಯ ಆಧಾರದಲ್ಲಿ ಭಡ್ತಿ ಪ್ರಕ್ರಿಯೆ ನಡೆಯಬೇಕು. ನಿವೃತ್ತಿ ಸಂದರ್ಭದಲ್ಲಿ ಅಧಿಕಾರಿಗಳಿಗೆ ನ್ಯಾಯ ಸಿಗಬೇಕು. ಮಂಗಳೂರು ಮತ್ತು ಉತ್ತಮ ಕನ್ನಡ ವೃತ್ತಗಳಲ್ಲಿ ಈ ಸಮಸ್ಯೆ ಹೆಚ್ಚು ಇದೆ. ಶೀಘ್ರದಲ್ಲಿ ಈ ತೊಂದರೆ ನಿವಾರಣೆಯಾ ಗುವ ವಿಶ್ವಾಸವಿದೆ ಎಂದು ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು.

ದರ್ಬೆ ಅಶ್ವಿ‌ನಿ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಮಂಗಳೂರು ವಿಭಾಗದ 2018 -19ನೇ ಸಾಲಿನ ಮಹಾಸಭೆ, ದಿನಚರಿ ಬಿಡುಗಡೆ ಮತ್ತು ನಿವೃತ್ತರಿಗೆ ಸಮ್ಮಾನ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಅರಣ್ಯ ಸಂಪತ್ತಿನ ರಕ್ಷಣೆ ಮಾಡುವ ಮಹತ್ವದ ಜವಾಬ್ದಾರಿ ಹೊಂದಿರುವ ಅರಣ್ಯ ಇಲಾಖೆ ಸಿಬಂದಿ ಶಿಸ್ತುಬದ್ಧ ಹಾಗೂ ಪ್ರಾಮಾಣಿಕ ಕರ್ತವ್ಯಕ್ಕೆ ಹೆಸರಾಗಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಪ್ರಾಮಾಣಿಕ ಅಧಿಕಾರಿಗಳಿದ್ದಾರೆ. ಶಿಸ್ತಿನ ಇಲಾಖೆಗೆ ಸಚಿವನಾಗಿದ್ದ ಹೆಮ್ಮೆ ನನಗಿದೆ. ಎಲ್ಲ ಖಾಕಿ ಇಲಾಖೆಗಳಿಗೆ ಸಚಿವನಾಗಿದ್ದ ಅನುಭವ ಖುಷಿ ನೀಡಿದೆ ಎಂದು ಹೇಳಿದರು.

ನ್ಯಾಯ ಬೇಕು
ಅಧ್ಯಕ್ಷತೆ ವಹಿಸಿದ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಸಂಜೀವ ಕೆ. ಮಾತನಾಡಿ, ಅರಣ್ಯ ಅಧಿಕಾರಿಗಳು ಜನರೊಂದಿಗೆ ಸಂಘರ್ಷ ಮಾಡಲು ಇರುವವರಲ್ಲ. ಅಭಿವೃದ್ಧಿಗೆ ಅಡ್ಡಿಪಡಿಸುವ ಇಚ್ಛೆಯೂ ನಮಗಿಲ್ಲ. ಅರಣ್ಯ ರಕ್ಷಣೆಯ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇವೆ ಎಂದು ಹೇಳಿದರು.

ಮಂಗಳೂರು ವೃತ್ತ ವ್ಯಾಪ್ತಿಯಲ್ಲಿ 182 ಉಪವಲಯ ಅರಣ್ಯಾಧಿಕಾರಿ ಹುದ್ದೆಗಳಿವೆ. ಇದರಲ್ಲಿ 90 ಹುದ್ದೆಗಳು ಖಾಲಿ ಇದ್ದರೂ ಜೇಷ್ಠತೆಯ ಆಧಾರದಲ್ಲಿ ಭಡ್ತಿ ನೀಡಿ ನೇಮಕ ಮಾಡಿಕೊಳ್ಳದಿರುವುದು ವಿಷಾದನೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ನೆಟಾಲ್ಕರ್‌ ಮಾತನಾಡಿ, ಇಲಾಖೆ ಯಲ್ಲಿನ ನ್ಯೂನತೆಗಳ ಅಹವಾಲುಗಳನ್ನು ಸರಿಪಡ ಬೇಕಿದೆ. ಈ ವಿಚಾರವನ್ನು ಮೇಲಧಿ ಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಸಮ್ಮಾನ
ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಕೆ. ನಾರಾಯಣ ಹಾಗೂ ಮಾಧವ ನಾಯ್ಕ ಅವರನ್ನು ಸಮ್ಮಾನಿಸಲಾಯಿತು. ಇಲಾಖೆಯ ಸಹಕಾರದೊಂದಿಗೆ 4000ಕ್ಕೂ ಅಧಿಕ ಹಾವುಗಳನ್ನು ಹಿಡಿದ ಉರಗ ಸ್ನೇಹಿ ತೇಜಸ್‌ ಅವರನ್ನು ಗೌರವಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಕ್ತದಾನದಲ್ಲಿ ಪಾಲೊಅ್ಗಂಡ ಸಂಘದ ಸದಸ್ಯರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಲನ್‌ ವಿ. , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯೇಶ್ವರ ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಉಪವಲಯ ಅರಣ್ಯಾಧಿಕಾರಿ ಪ್ರಕಾಶ್‌ ಬಿ.ಟಿ. ಸ್ವಾಗತಿಸಿ, ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ವಂದಿಸಿದರು. ಉಪವಲಯ ಅರಣ್ಯಾಧಿಕಾರಿ ಮಹಾಬಲ ಬಿ.ಎಸ್‌. ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಶ್ರೀ ಧರ್ಮಸ್ಥಳ ಮೇಳದ ಕಲಾವಿದರಿಂದ ಯಕ್ಷ ನೃತ್ಯ ವೈಭವ ನಡೆಯಿತು.

ಅರಣ್ಯ ಸಂಸ್ಕೃತಿ ಉಳಿಯಬೇಕು
ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮ್ಮ ಹಿರಿಯರು ಪಾಲಿಸಿಕೊಂಡು ಬಂದ ಅರಣ್ಯ ಸಂಸ್ಕೃತಿ, ಕೃಷಿ ಸಂಸ್ಕೃತಿ ಹೋಗಿ ಈಗ ಕೈಗಾರಿಕಾ ಸಂಸ್ಕೃತಿ ಬಂದಿದೆ. ಪರಿವರ್ತನೆ ಜಗದ ನಿಯಮನವಾದರೂ ಪ್ರಾಣವಾಯು, ಜೀವಜಲ, ಆಹಾರದಲ್ಲಿ ಬದಲಾವಣೆ ಪ್ರಾಣಿಸಂಕುಲಗಳಿಗೆ ಕಂಟಕವಾಗಲಿದೆ. ಆರೋಗ್ಯವಂತ ಸಮಾಜಕ್ಕಾಗಿ ಆರೋಗ್ಯವಂತ ಪರಿಸರವೂ ಬೇಕಾಗಿರುವುದರಿಂದ ಅರಣ್ಯ ಇಲಾಖೆಗೆ ಸಾಕಷ್ಟು ಜವಾಬ್ದಾರಿ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.