ಪುತ್ತೂರಿನಲ್ಲಿ ಒಂದೇ ಕುಟುಂಬದ ಇಬ್ಬರ ಕೊಲೆ: ಮಹಿಳೆ ಗಂಭೀರ

Team Udayavani, Nov 19, 2019, 11:45 AM IST

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ  ಬಂದಿದೆ.

ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಮೂವರ ಮೇಲೂ ಕೊಲೆಯತ್ನ ನಡೆದಿದೆ.

ಕುಗ್ಗು ಸಾಹೇಬ್ ( 60 ವ) ಮತ್ತು ಅವರ ಮೊಮ್ಮಗಳು ಸಮೀಹ  (16 ವ) ಕೊಲೆಯಾದವರು.

ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ವ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರಿನ ಬಾಡಿಗೆ ಮನೆಯಲ್ಲಿರುವ ಕೊಗ್ಗು ಸಾಹೇಬರ ಪುತ್ರ ರಝಾಕ್ ಅವರು ಮಂಗಳವಾರ ಬೆಳಿಗ್ಗೆ ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಇತರರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದರು.

ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಸಂಪ್ಯ ಠಾಣಾ ಎಸ್ ಐ ಶಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ