ಗ್ರಾಮೀಣ ಮಕ್ಕಳಲ್ಲಿ  ಆತ್ಮಸ್ಥೈರ್ಯ ಹೆಚ್ಚು: ಶಕುಂತಳಾ ಶೆಟ್ಟಿ

Team Udayavani, Aug 3, 2017, 7:00 AM IST

0208IRL2.jpg

ನೆಟ್ಟಣಿಗೆಮುಟ್ನೂರು: ಜೀವನದಲ್ಲಿ  ಛಲ ಬೇಕು. ಕೇವಲ ಅಂಕದ ಮೇಲೆ ಮಕ್ಕಳನ್ನು ಬೆಳೆಸ ಬಾರದು. ಸುತ್ತಮುತ್ತ ನಡೆಯುವ ಆಗುಹೋಗುಗಳ ಬಗ್ಗೆ  ಮಕ್ಕಳಿಗೆ ತಿಳಿಹೇಳಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಆಟಪಾಠಗಳೊಂದಿಗೆ ಸಮಾಜದ ಕಡೆಗೆ ಹೆಚ್ಚು ಗಮನಕೊಡುತ್ತಿದ್ದಾರೆ. ಆದರಿಂದ ಅವರಲ್ಲಿ  ಆತ್ಮಸ್ಥೈರ್ಯ ಹೆಚ್ಚು ಇದೆ ಎಂದು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಅವರು ನೆಟ್ಟಣಿಗೆಮುಟ್ನೂರು ಸರಕಾರಿ ಪ್ರೌಢ ಶಾಲೆಯ ದಶಮಾನೋತ್ಸವದ ಪೂರ್ವಭಾವಿ ಸಭೆ ಯಲ್ಲಿ ಭಾಗವಹಿಸಿ ಮಾತನಾಡಿದರು.

ಸರಕಾರಿ ಶಾಲೆಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಿ ರೂಪುಗೊಳ್ಳಬೇಕು. ದಶಮಾನೋತ್ಸವ ಸಂಭ್ರಮದಲ್ಲಿರುವ ಗಡಿಭಾಗದ ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಸಭಾಂಗಣಕ್ಕೆ 5 ಲಕ್ಷ ರೂ. ಮಂಜೂರು ಮಾಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಜತೆಗೆ ಗ್ರಾಮಕ್ಕೆ  ಕಾಲೇಜು ಮಂಜೂರುಗೊಳಿಸುವಂತೆ ಸರಕಾರಕ್ಕೆ  ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದೇವಿಪ್ರಕಾಶ್‌ ಶೆಟ್ಟಿ  ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮದ ಏಕೈಕ ಸರಕಾರಿ ಪ್ರೌಢಶಾಲೆ ಒಳ್ಳೆಯ ಫಲಿತಾಂಶಕ್ಕೆ ಕಾರಣವಾಗಿದೆ. ಪ್ರಸ್ತುತ 171 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಕರ ಕೊರತೆ ಇಲ್ಲದಿದ್ದರೂ ಶಾಲೆ ಮೂಲ ಸೌಕರ್ಯದಿಂದ ವಂಚಿತವಾಗಿದೆ. ಮುಖ್ಯವಾಗಿ ಸುಸಜ್ಜಿತ ಸಭಾಂಗಣದ ವ್ಯವಸ್ಥೆಯನ್ನು ದಶಮಾನೋತ್ಸವದ ಸಂದರ್ಭದಲ್ಲಿ ಬೇಕಾಗಿರುವುದರಿಂದ ಜನಪ್ರತಿನಿಧಿಗಳು ಗಮನಹರಿಸಬೇಕಾಗಿದೆ. ಗ್ರಾಮದ ದಾನಿಗಳ ಸಹಕಾರದಿಂದ ಶಾಲೆ ಮತ್ತಷ್ಟು  ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಉಪಾಧ್ಯಕ್ಷ  ಶ್ರೀರಾಮ ಪಕ್ಕಳ ಮಾತನಾಡಿ, ಶಾಸಕರು ನೀಡಿದ ಭರವಸೆಗಳು ಈಡೇರಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ  ಶಾಸಕರು ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದಾರೆ ಎಂದು ಹೇಳಿದರು.

ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಅಧ್ಯಕ್ಷೆ  ಶಂಕರಿ ಭಂಡಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ದಶಮಾನೋತ್ಸವ ಸಮಿತಿಯ ಅಧ್ಯಕ್ಷ  ಅಬ್ದುಲ್‌ ಹಮೀದ್‌ ರಾಗಾಳಿ ಮಾತನಾಡಿ, ಮುಂದಿನ ದಿನದಲ್ಲಿ  ಈ ಶಾಲೆಗೆ ವಿದೇಶಿ ಮಾದರಿ ಶಿಕ್ಷಣವನ್ನು  ಸ್ಮಾರ್ಟ್‌  ಕ್ಲಾಸ್‌ ಮಾಡುವ ಯೋಜನೆಯನ್ನು ಹಮ್ಮಿಕ್ಕೊಂಡಿದ್ದೇನೆ. ಇದರಿಂದ ಮಕ್ಕಳಿಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದಾಗಿದೆ. ಅದಕ್ಕೆ ಬೇಕಾಗುವ ವೆಚ್ಚವನ್ನು ಸ್ವತಃ ಭರಿಸುತ್ತೇನೆ. ಜತೆಗೆ ಶಾಸಕರು ಇಂಜಿನಿಯರ್‌ ಹಾಗೂ ತಾಂತ್ರಿಕ ಶಿಕ್ಷಣದ ಕಾಲೇಜು ಮಂಜೂರು ಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಪುತ್ತೂರು ನಗರ ಪ್ರಾಧಿಕಾರದ ಅಧ್ಯಕ್ಷ  ಪ್ರಸಾದ್‌ ಕೌಶಲ್‌ ಶೆಟ್ಟಿ, ತಾಲೂಕು ಪಂಚಾಯತ್‌ ಸದಸ್ಯೆ ಫೌಝೀಯಾ ಇಬ್ರಾಹಿಂ ಕೆ., ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮಹಮ್ಮದ್‌ ಮೇನಾಲ, ಮಾಯಿಲನಾಥ ಶೆಟ್ಟಿ, ಪಂಚಾಯತ್‌ ಸದಸ್ಯರಾದ ಕೆ.ಎಂ. ಮಹಮ್ಮದ್‌,  ಶಿಕ್ಷಕಿಯರಾದ ಸುನೀತಾ, ಇಂದಿರಾ, ಎಸ್‌ಡಿಎಂಸಿ ಪದಾಧಿಕಾರಿಗಳು, ಹೆತ್ತವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.