ವಿದ್ಯಾರ್ಥಿನಿ ಮೇಲೆ ಅತ್ಯಾಚಾರದ ವೀಡಿಯೋ ವೈರಲ್: ಐವರ ಬಂಧನ

ಜಿಲ್ಲೆಯನ್ನೇ ತಲ್ಲಣಗೊಳಿಸಿದ ಹೇಯ ಕೃತ್ಯ

Team Udayavani, Jul 4, 2019, 5:00 AM IST

Gang-rape

ಪುತ್ತೂರು: ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಭಾಗಿಯಾಗಿದ್ದ ಆರೋಪಿದಲ್ಲಿ ಪುತ್ತೂರಿನ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ವೀಡಿಯೋ ವೈರಲ್ ಆದ ಬಳಿಕ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ. ಬಜತ್ತೂರು ಗಾಣದಮೂಲೆ ನಿವಾಸಿ ಗುರುನಂದನ್‌(19), ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಕಡಂಬು ನಿವಾಸಿ ಕಿಶನ್‌ (19), ಆರ್ಯಾಪು ಪಿಲಿಗುಂಡ ನಿವಾಸಿ ಸುನಿಲ್ (19) ಹಾಗೂ ಬರಿಮಾರು ಬಲ್ಯ ನಿವಾಸಿ ಪ್ರಖ್ಯಾತ್‌ (19) ಬಂಧಿತರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ದ.ಕ. ಎಸ್‌ಪಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು.

ಪ್ರಕರಣದ ವಿವರ
ಘಟನೆಯ ಕುರಿತು ಸಂತ್ರಸ್ತೆಯು ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್‌ ತಿಂಗಳ ಕೊನೆಯ ವಾರದ ಒಂದು ದಿನ ಈ ಕೃತ್ಯ ನಡೆದಿದೆ.

ಅಂದು ಮಧ್ಯಾಹ್ನ 3ಕ್ಕೆ ಕಾಲೇಜಿನ ಸುನಿಲ್ ಎಂಬಾತನು ತನ್ನಲ್ಲಿ ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್ ಹಾಗೂ ಪ್ರಕೃತ್‌ರನ್ನು ಕೂಡಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ನಾಲ್ಕೈದು ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ. ಬಳಿಕ ಈ ವಿಚಾರವನ್ನು ಬಹಿರಂಗಪಡಿಸದಂತೆ ಬೆದರಿಕೆಯೊಡ್ಡಿದ್ದಾರೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ಕುರಿತು ಪುತ್ತೂರು ಮಹಿಳಾ ಠಾಣೆಯಲ್ಲಿ ಕಲಂ 341, 376(ಡಿ) ಆರ್‌/ಡಬ್ಲ್ಯು 34 ಐಪಿಸಿ ಮತ್ತು ಎಸ್‌ಸಿ/ಎಸಿ ಕಾಯ್ದೆ ಹಾಗೂ 66ಇ, 67ಎ ಐಟಿ ಆ್ಯಕ್ಟ್‌ನಂತೆ ಪ್ರಕರಣ ದಾಖಲಾಗಿರುತ್ತದೆ.

ಕಠಿನ ಕ್ರಮಕ್ಕೆ ಮಾಜಿ ಶಾಸಕರ ಆಗ್ರಹ
ಪ್ರಕರಣವನ್ನು ಪೊಲೀಸ್‌ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿನ ಕ್ರಮ ಜರಗಿಸಬೇಕು. ಯಾವುದೇ ತಾರತಮ್ಯ ಮಾಡದೆ ಆರೋಪಿಗಳನ್ನು ಬಂಧಿಸಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಎಸ್‌ಪಿಗೆ ಮನವಿ ಮಾಡಿದ್ದೇವೆ. ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ಇಂತಹ ವೀಡಿಯೋಗಳನ್ನು ವೈರಲ್ ಮಾಡದಂತೆ ಶಕುಂತಳಾ ಶೆಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕೃತ್ಯಗಳಿಂದ ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಪೋಷಕರು ಹೆದರುವ ಸ್ಥಿತಿ ಇದೆ. ಹೀಗಾಗಿ ಪೊಲೀಸರು ಕಠಿನ ಕ್ರಮ ಜರಗಿಸಿ ಪೋಷಕರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಅವರು ಆಗ್ರಹಿಸಿದ್ದಾರೆ.

ಎಬಿವಿಪಿ ಆಗ್ರಹ
ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿನ ಶಿಕ್ಷೆಗೆ ಒಳಪಡಿಸಬೇಕು ಎಂದು ಪುತ್ತೂರಿನ ಎಬಿವಿಪಿ ಘಟಕ ಆಗ್ರ ಹಿಸಿದೆ. ಮಾದಕ ವ್ಯಸನಗಳಿಂದ ಯುವಜನತೆಯನ್ನು ರಕ್ಷಿಸ ಬೇಕು ಎಂದು ಸುಳ್ಯ ವಿಹಿಂಪ-ಬಜರಂಗ ದಳ ಘಟಕ ಆಗ್ರಹಿಸಿದೆ.

ಯುವ ಕಾಂಗ್ರೆಸ್‌ ಆಗ್ರಹ
ಇಂತಹ ಕೃತ್ಯಗಳು ಸಾಮಾಜದ ಸ್ವಾಸ್ಥ್ಯ ಕೆಡಿಸುತ್ತದೆ. ಪೊಲೀಸ್‌ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಎಷ್ಟೇ ಪ್ರಭಾವಿ ವ್ಯಕ್ತಿಗಳಾದರೂ ಅವರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಪುತ್ತೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಯು.ಟಿ. ತೌಸೀಫ್‌ ಅವರು ಆಗ್ರಹಿಸಿದ್ದಾರೆ.

ವೀಡಿಯೋ ಪ್ರಸಾರ ಮಾಡದಂತೆ ಎಸ್‌ಪಿ ಎಚ್ಚರಿಕೆ

ಓರ್ವ ಹುಡುಗಿ ಜತೆ 3ರಿಂದ 4 ಮಂದಿ ಹುಡುಗರು ಆತ್ಮೀಯ ಕೃತ್ಯದಲ್ಲಿ ತೊಡಗಿರುವ ವೀಡಿಯೋ ತುಣುಕೊಂದು ವಾಟ್ಸಾಪ್‌ ಮೂಲಕ ಹರಿದಾಡುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಪೊಲೀಸರು ಸೊ-ಮೋಟೊ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಉಲ್ಲೇಖೀತ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಅಥವಾ ಉಲ್ಲೇಖೀತ ವೀಡಿಯೋಗಳನ್ನು ಅವರ ಫೋನ್‌/ಕಂಪ್ಯೂಟರ್‌ಗಳಲ್ಲಿ ಉಳಿಸಬಾರದು ಎಂದು ನಾವು ಸಾರ್ವಜನಿಕರನ್ನು ಕೋರುತ್ತೇವೆ. ಹಾಗೆ ಮಾಡುವುದು ಐಪಿಸಿಯ 354ಸಿ ಮತ್ತು 66 ಇ, ಐಟಿ ಕಾಯ್ದೆಯ 66ಎ ಮತ್ತು ವ್ಯಕ್ತಿಗಳು(ಗುಂಪು ನಿರ್ವಾಹಕರು ಸಹಿತ) ಅಡಿಯಲ್ಲಿ ಅಪರಾಧವಾಗಿದೆ ಎಂದು ಎಸ್‌ಪಿ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ಅಮಾನತು

ಪೊಲೀಸರು ಸೂಚಿಸಿದ ವಿದ್ಯಾರ್ಥಿಗಳ ಮಾಹಿತಿಯನ್ನು ಕಾಲೇಜಿನಿಂದ ನೀಡಲಾಗಿದ್ದು, ಆ ಐವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಪೊಲೀಸರ ತನಿಖೆಯ ಬಳಿಕ ಮುಂದಿನ ಕ್ರಮ ಜರಗಿಸಲಾಗುತ್ತದೆ. ವಿದ್ಯಾರ್ಥಿನಿ ವಿರುದ್ಧ ಯಾವುದೇ ಕ್ರಮ ಜರಗಿಸಿಲ್ಲ ಎಂದು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಅವರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಪುತ್ತೂರು ಠಾಣೆಗೆ ಎಸ್‌ಪಿಭೇಟಿ

ವೀಡಿಯೋ ವೈರಲ್ ಆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ ಅವರು ಪುತ್ತೂರಿಗೆ ಆಗಮಿಸಿ ಪೊಲೀಸರೊಂದಿಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಘಟನೆ ಕುರಿತು ವಿದ್ಯಾರ್ಥಿನಿಯು ಪೂರ್ಣ ಮಾಹಿತಿ ನೀಡಿದ್ದಾರೆ. ಯಾವುದೇ ಅಮಲು ಪದಾರ್ಥ ಸೇವನೆಯಿಂದ ಆದ ಘಟನೆಯಲ್ಲ. ವಿದ್ಯಾರ್ಥಿನಿಯನ್ನು ಮಾತನಾಡಲು ಇದೆ ಎಂದು ಹೇಳಿ ಕರೆದುಕೊಂಡು ಹೋಗಿ ಈ ಕೃತ್ಯ ನಡೆಸಿದ್ದಾರೆ. ಸಂತ್ರಸ್ತೆಗೆ ವೀಡಿಯೋ ಮಾಡಿರುವುದು ಹಾಗೂ ಘಟನೆ ಯಾವಾಗ ನಡೆದಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಶಾಸಕ ಸಂಜೀವ ಮಠಂದೂರು ಖಂಡನೆ
ಮಂಗಳೂರು: ಸಾಮೂಹಿಕ ಅತ್ಯಾಚಾರ ಕೃತ್ಯವನ್ನು ಪುತ್ತೂರು ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಖಂಡಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಸಹಪಾಠಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ಅಕ್ಷಮ್ಯ ಅಪರಾಧ. ಘಟನೆಗೆ ಸಂಬಂಧಿಸಿದ ಎಲ್ಲ ಆರೋಪಿಗಳ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಂಡು ಮುಂದಕ್ಕೆ ಇಂತಹಾ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಆರೋಪಿಗಳು ಅಮಲು ಪದಾರ್ಥ ಸೇವಿಸಿದ್ದರೆ, ಈ ಬಗ್ಗೆ ತನಿಖೆ ನಡೆಸಬೇಕು. ಪುತ್ತೂರು ಮಾತ್ರವಲ್ಲದೆ ಜಿಲ್ಲಾದ್ಯಂತ ಗಾಂಜಾ, ಅಫೀಮು ಸಹಿತ ಮಾದಕ ವಸ್ತುಗಳು ಎಲ್ಲಿ, ಯಾರಿಂದ ಪೂರೈಕೆ ಮತ್ತು ಮಾರಾಟ ಆಗುತ್ತಿದೆ ಎಂಬುದನ್ನು ಪೊಲೀಸರು ಪತ್ತೆಹಚ್ಚಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಗಾಂಜಾ ಸಹಿತ ಮಾದಕ ದ್ರವ್ಯ ಮಾರಾಟ, ಸಾಗಾಟ ಆಗದಂತೆ ಪೊಲೀಸ್‌ ಇಲಾಖೆ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟನೆಯಲ್ಲಿ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಏ.27ಕ್ಕೆ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತ

2023ರಲ್ಲಿ ಸುಸಜ್ಜಿತ ಹೆದ್ದಾರಿ ಸಂಚಾರಕ್ಕೆ ಮುಕ್ತ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.