ಮೆಲ್ಕಾರ್‌-ಬಿ.ಸಿ.ರೋಡ್‌: ರಾ.ಹೆ. ದುರಸ್ತಿ ಆಗ್ರಹಿಸಿ ಕಾಂಗ್ರೆಸ್‌ ಪಾದಯಾತ್ರೆ

Team Udayavani, Sep 12, 2019, 5:16 AM IST

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌-ಮಾಣಿ ಮಧ್ಯೆ ಭೀಕರ ಹೊಂಡಗಳು ಸೃಷ್ಟಿಯಾಗಿದ್ದು, ದುರಸ್ತಿಗೆ ಆಗ್ರಹಿಸಿ ಬುಧವಾರ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮೆಲ್ಕಾರ್‌ನಿಂದ ಬಿ.ಸಿ.ರೋಡ್‌ ವರೆಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ರಮಾನಾಥ ರೈಗಳು ಮಾತನಾಡಿ, ಹೆದ್ದಾರಿಯಲ್ಲಿ ಹೊಂಡಗಳು ಸೃಷ್ಟಿಯಾಗಿ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಹಾಗೂ ಕೇಂದ್ರ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ ಎಂದರು.

ಪ್ರಧಾನಿಯವರ ಕ್ರಮವನ್ನು ಖಂಡಿಸಿದರೆ ಬಿಜೆಪಿಯವರು ದೇಶದ್ರೋಹದ ಆರೋಪ ಹೊರಿಸುತ್ತಿದ್ದಾರೆ. ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ, ನೆಹರೂ ಅವರನ್ನು ಟೀಕಿಸುವ ಬಿಜೆಪಿಯವರನ್ನು ಏನು ಹೇಳಬೇಕು ಎಂದು ಪ್ರಶ್ನಿಸಿದರು.ಬಳಿಕ ಪಾದಯಾತ್ರೆ ಬಿ.ಸಿ.ರೋಡಿನ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್‌ ಮೂಲಕ ದ.ಕ. ಜಿಲ್ಲಾಧಿಕಾರಿಗೆ ಮನವಿ ನೀಡಿತು. ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌,ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಬೇಬಿ ಕುಂದರ್‌, ಸುದೀಪ್‌ಕುಮಾರ್‌ ಶೆಟ್ಟಿ, ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ್‌ ಜೈನ್‌, ಚಂದ್ರಪ್ರಕಾಶ್‌ ಶೆಟ್ಟಿ, ಎಂ.ಎಸ್‌. ಮಹಮ್ಮದ್‌, ಮಂಜುಳಾ ಮಾಧವ ಮಾವೆ, ಶಾಹುಲ್‌ ಹಮೀದ್‌, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್‌ ಆಲಿ ಮೊದಲಾದವರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ