ಸೇತುವೆ ಮೇಲೆ ಸಂಚರಿಸಿದರೆ ಕೆಸರು ನೀರಿನ ಸ್ನಾನ!

Team Udayavani, Jun 20, 2018, 3:20 AM IST

bridge-water-19-6.jpg

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಣೆ ಮಾಡದಿರುವುದು ಮಳೆಗಾಲದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗಿದ್ದು, ಇಲ್ಲಿನ ಸೇತುವೆಗಳ ಮೇಲೆ ಸಂಚರಿಸುವ ಪಾದಚಾರಿಗಳು ಕೆಸರು ನೀರಿನಿಂದ ಸ್ನಾನ ಮಾಡಬೇಕಾದ ಸ್ಥಿತಿ ಬಂದೊದಗಿದೆ. ಈ ರಾಷ್ಟ್ರೀಯ ಹೆದ್ದಾರಿಯು ಮೇಲ್ದರ್ಜೆಗೇರಿದ್ದು, ಚತುಷ್ಪಥವಾಗಿ ಬದಲಾಗುತ್ತಿದೆ. ಇದರ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ಅಗೆದು ಹಾಕಲಾಗಿದೆ. ಇನ್ನೊಂದೆಡೆ ಈಗಿದ್ದ ಹೆದ್ದಾರಿಯನ್ನು ನಿರ್ವಹಣೆ ಮಾಡುವವರೇ ಇಲ್ಲದೆ ಹೆದ್ದಾರಿಯ ಇಕ್ಕೆಲಗಳಲ್ಲಿ ಗಿಡ- ಗಂಟಿಗಳು, ಪೊದೆಗಳು ಹುಲುಸಾಗಿ ಬೆಳೆದು, ಹೆದ್ದಾರಿಯನ್ನು ಆವರಿಸಿವೆ. ಇದ್ದ ಚರಂಡಿಯು ಹೂಳು ತುಂಬಿ ಮುಚ್ಚಿದ್ದು, ಇವುಗಳ ಮೇಲೆ ಹುಲ್ಲು, ಗಿಡಗಂಟಿಗಳು ಆವರಿಸಿವೆ.

ಕೆಸರಿನ ಅಭಿಷೇಕ!
ಉಪ್ಪಿನಂಗಡಿಯಲ್ಲಿರುವ ಕುಮಾರಧಾರಾ ನದಿಯ ಸೇತುವೆ ಮೇಲೆ ಪಾದಚಾರಿಗಳಿಗೆ ನಡೆದಾಡಲು ಕಷ್ಟಕರವಾದ ಸ್ಥಿತಿ ನಿರ್ಮಾಣಗೊಂಡಿದೆ. ಸೇತುವೆಯಲ್ಲಿ ನೀರು ಹೋಗಲು ಮಾಡಲಾದ ರಂಧ್ರಗಳು ಮಣ್ಣು, ಕಸಕಡ್ಡಿಗಳಿಂದ ತುಂಬಿ ಮುಚ್ಚಿ ಹೋಗಿದ್ದು, ನೀರಿನ ಹರಿಯುವಿಕೆಗೆ ತಡೆಯಾಗಿ, ಮಳೆ ಬಂದ ಸಂದರ್ಭ ನೀರು ಸೇತುವೆಯ ಮೇಲೆಯೇ ನಿಂತು ಸೇತುವೆಯೇ ದೊಡ್ಡ ಹಳ್ಳವಾಗಿ ಮಾರ್ಪಾಡಾಗುತ್ತದೆ. ಇದರ ಮೇಲೆ ವಾಹನಗಳು ಸಂಚರಿಸಿದರೆ ಬದಿಯಲ್ಲಿ ನಡೆದುಕೊಂಡು ಹೋಗುವವರ, ದ್ವಿಚಕ್ರ ವಾಹನ ಸವಾರರ ಮೈಮೇಲೆಲ್ಲ ಕೆಸರು ನೀರಿನ ಪ್ರೋಕ್ಷಣೆಯಾಗುತ್ತದೆ. ಇದರಿಂದ ಪಾದಚಾರಿಗಳು, ಶಾಲಾ ಮಕ್ಕಳು, ದ್ವಿಚಕ್ರ, ಅಟೋರಿಕ್ಷಾ ಸವಾರರು ಸಮಸ್ಯೆಗೆ ಸಿಲುಕುವಂತಾಗಿದೆ. ಇದು ಒಂದೇ ಸೇತುವೆಯ ಕಥೆಯಲ್ಲ. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಹೆಚ್ಚಿನ ಎಲ್ಲ ಸೇತುವೆಗಳಲ್ಲೂ ಇದೇ ಅವಸ್ಥೆ.

ಆದರೆ ಇಕ್ಕೆಲಗಳಲ್ಲಿ ತುದಿಯಿಂದ ಕೊನೆಯವರೆಗೆ ಬೆಳೆದಿರುವ ಹುಲ್ಲುಗಳು ಹಾಗೆಯೇ ಇರುವುದರಿಂದ ಹಾಗೂ ಸೇತುವೆಯಲ್ಲಿ ಮಣ್ಣು ತುಂಬಿರುವುದರಿಂದ ರಂಧ್ರಗಳ ಮಣ್ಣು ತೆರವುಗೊಳಿಸಿದ ನಾಲ್ಕೈದು ದಿನದಲ್ಲೇ ಮತ್ತೆ ಸೇತುವೆಯ ಮೇಲಿನ ನೀರು ಹರಿದು ಹೋಗಲು ತಡೆಯಾಗಿ ಮೊದಲಿನ ಹಾಗೆ ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ಇನ್ನಾದರೂ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಂಡು ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಮುಂದಾಗಬೇಕೆನ್ನುವುದೇ ಸಾರ್ವಜನಿಕರ ಆಗ್ರಹ.

ಯುವಕರಿಂದ ಶ್ರಮದಾನ! 
ಈ ಬಾರಿ ಮಳೆ ಬಂದು ಹಲವು ಮಂದಿ ಕೆಸರು ನೀರಿನಲ್ಲಿ ಸ್ನಾನ ಮಾಡಿದ ಬಳಿಕವೂ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಳ್ಳದಿದ್ದಾಗ ಬೇಸತ್ತ ನೆಕ್ಕಿಲಾಡಿಯ ಕೆಲ ಯುವಕರು ಕುಮಾರಧಾರಾ ನದಿಯ ಸೇತುವೆಯ ಇಕ್ಕೆಲಗಳಲ್ಲಿ ಹೂಳು ತುಂಬಿ ಮುಚ್ಚಿಹೋಗಿದ್ದ ರಂಧ್ರಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡುವ ಸಾಮಾಜಿಕ ಕಳಕಳಿ ತೋರಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.