
ಧರ್ಮಾಧಾರಿತ ರಾಜಕೀಯ ಹತ್ಯೆಗಳ ತನಿಖೆಗೆ ಎಸ್‌ಐಟಿಗೆ ರಮಾನಾಥ ರೈ ಒತ್ತಾಯ
Team Udayavani, May 26, 2023, 12:45 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಧರ್ಮಾಧಾರಿತ ರಾಜಕೀಯ ಹತ್ಯೆಗಳ ಕುರಿತಂತೆ ಹಿರಿಯ ತನಿಖಾಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆ ನಡೆಸಲು ನೂತನ ಸರಕಾರ ಆದೇಶಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶರತ್ ಮಡಿವಾಳ, ಅಶ್ರಫ್, ಜಲೀಲ್ ಕರೋಪಾಡಿ, ಪ್ರವೀಣ್ ನೆಟ್ಟಾರ್, ಮಸೂದ್, -ಝಿಲ್ ಸೇರಿದಂತೆ ಹಲವು ಹಿಂದೂ ಮುಸ್ಲಿಂ ಯುವಕರು ಧರ್ಮಾಧಾರಿತ ರಾಜಕೀಯದಿಂದ ಬಲಿಯಾಗಿದ್ದಾರೆ. ಇವುಗಳ ತನಿಖೆಯನ್ನು ಜಿಲ್ಲೆಯಲ್ಲಿ ಹಿಂದೆ ಎಸ್ಪಿಯಾಗಿದ್ದ ಸುಬ್ರಹ್ಮಣ್ಯೇಶ್ವರ ರಾವ್ ಅಂತಹ ಅಧಿಕಾರಿಗಳ ನೇತೃತ್ವದ ಎಸ್‌ಐಟಿ ತಂಡ ರಚಿಸಿ ತನಿಖೆಗೊಳಪಡಿಸಬೇಕು ಎಂದರು.
ಇಂತಹ ಹತ್ಯೆಗಳನ್ನು ಗಂಭೀರವಾಗಿ ನೂತನ ಸರಕಾರ ಪರಿಗಣಿಸಿ ಕ್ರಮ ಕೈಗೊಂಡಲ್ಲಿ ಜಿಲ್ಲೆಯಲ್ಲಿ ಸೌಹಾರ್ದಕ್ಕೆ ಧಕ್ಕೆ ತರುವ ಇಂತಹ ಪ್ರಯತ್ನಗಳಿಗೆ ಕೊನೆ ಹಾಕಲು ಸಾಧ್ಯ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮನಪಾ ವಿಪಕ್ಷ ನಾಯಕ ನವೀನ್ ಡಿ’ಸೋಜಾ, ಮುಕಂಡರಾದ ಶಶಿಧರ್ ಹೆಗ್ಡೆ, ಹರಿನಾಥ್, ಟಿ.ಕೆ. ಸುಧಿರ್, ಅಬ್ಬಾಸ್ ಅಲಿ, ಸುಹೇಲ್ ಕಂದಕ್ ಮೊದಲಾದರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
