ತಂದೆಯಿಂದಲೇ ಅತ್ಯಾಚಾರ: ಆರೋಪ ಸಾಬೀತು

ನಿರಂತರ ಅತ್ಯಾಚಾರಕ್ಕೊಳಗಾಗಿ ತಾಯಿಯಾಗಿದ್ದ 13ರ ಬಾಲಕಿ

Team Udayavani, Dec 14, 2019, 5:22 AM IST

xd-31

ಮಂಗಳೂರು: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ನಿರಂತರ ಅತ್ಯಾಚಾರ ಮಾಡಿ ಆಕೆ ಮಗುವಿಗೆ ಜನ್ಮ ನೀಡಿದ ಅಪರಾಧವು ಮಂಗಳೂರಿನ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ (ಪೋಕ್ಸೋ)ದಲ್ಲಿ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಕಾದಿರಿಸಿದೆ. ಉತ್ತರ ಭಾರತ ಮೂಲದ ನಿವಾಸಿಯಾಗಿದ್ದು, ಪ್ರಸ್ತುತ ನಗರದಲ್ಲಿ ವಾಸವಿರುವ ಕಿಶೋರ್‌ ಭಯ್ನಾ (36) ಅಪರಾಧಿಯಾಗಿದ್ದು, ಈತ ತನ್ನ 13 ವರ್ಷದ ಪುತ್ರಿ ಮೇಲೆ ಅತ್ಯಾಚಾರ ಎಸಗಿದ್ದ.

ಆರೋಪಿ ವಿರುದ್ಧ ಐಪಿಸಿ 376 (ಅತ್ಯಾಚಾರ), 506 (ಕೊಲೆ ಬೆದರಿಕೆ) ಹಾಗೂ ಪೋಕ್ಸೋ ಕಾಯಿದೆಯ 5 ಮತ್ತು 6ಕಲಂ (ನಿರಂತರ ಲೈಂಗಿಕ ದೌರ್ಜನ್ಯ) ಅನ್ವಯ ಅಪರಾಧ ಸಾಬೀತಾಗಿದೆ ಎಂದು 2ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್‌. ಪಲ್ಲವಿ ಅವರು ಶುಕ್ರವಾರ ತೀರ್ಪು ನೀಡಿದರು.

ಪ್ರಕರಣದ ವಿವರ: 2016ರಲ್ಲಿ ಕಿಶೋರ್‌ ಭಯ್ನಾ ತನ್ನ ಪತ್ನಿ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾಗ ಪುತ್ರಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಆರೋಪಿ ಕೊಲೆ ಬೆದರಿಕೆಯನ್ನೂ ಹಾಕಿದ್ದರಿಂದ ಆಕೆ ಹೆದರಿ ಸುಮ್ಮನಾಗಿದ್ದಳು. ಬಳಿಕ ಆತ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಇದರ ಪರಿಣಾಮ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆರೋಪಿ ವಿರುದ್ಧ ಬಾಲಕಿಯ ತಾಯಿ (ಕಿಶೋರ್‌ ಭಯ್ನಾನ ಪತ್ನಿ) ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇನ್‌ಸ್ಪೆಕ್ಟರ್‌ ಕಲಾವತಿ ಅವರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 12 ಮಂದಿ ಸಾಕ್ಷಿದಾರರನ್ನು ಹಾಗೂ 24 ದಾಖಲೆಗಳನ್ನು ಪರಿಗಣಿಸ ಲಾಗಿದೆ. ಮಗುವಿನ ಡಿಎನ್‌ಎ ಪರೀಕ್ಷೆಯಲ್ಲೂ ಕಿಶೋರ್‌ ಭಯ್ನಾವು ಜೈವಿಕ ತಂದೆ ಎನ್ನುವುದು ಸಾಬೀತಾಗಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಸಜೆ, ದಂಡ
ಕಾಸರಗೋಡು: ಪರಿಶಿಷ್ಟ ಜಾತಿಯ 14ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಂಗಲ್ಪಾಡಿ ಕುಬಣೂರು ನಿವಾಸಿ ಯಶವಂತ್‌ ಯಾನೆ ಅಪ್ಪು (35) ಎಂಬಾ ತ ನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆೆಶನ್ಸ್‌ ನ್ಯಾಯಾ ಲಯ(ಪ್ರಥಮ) ಪೋಕ್ಸೋ ಕಾನೂನಿನಂತೆ 10 ವರ್ಷ ಸಜೆ ಮತ್ತು 25 ಸಾ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ 2 ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕು.

ಮಂಗಲ್ಪಾಡಿ ಗ್ರಾ. ಪಂ. ವ್ಯಾಪ್ತಿಯ ಬಾಲಕಿಗೆ 2014ರ ಡಿಸೆಂಬರ್‌ ಮತ್ತು ಜನವರಿ 19 ರ ವರೆಗೆ ಶಾಲೆಯೊಂದರ ಪರಿಸರದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ನೀಡಲಾದ ದೂರಿನಂತೆ ಯಶವಂತ್‌ ವಿರುದ್ಧ ಕುಂಬಳೆ ಪೊಲೀಸರು ಪೋಕ್ಸೋ ಕಾಯ್ದೆ ಪ್ರಕಾರ ಕೇಸು ದಾಖಲಿಸಿದ್ದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.