ಪುಸಲಾಯಿಸಿ ಬಾಲಕಿಯ ಅತ್ಯಾಚಾರ; ಸೆರೆ
Team Udayavani, Jun 24, 2023, 5:10 AM IST
ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಯುವಕನೋರ್ವ ಪುಸಲಾಯಿಸಿ ಮನೆಯಿಂದ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಬಾಲಕಿಯ ತಂದೆ ಈ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ಸುಬ್ರಹ್ಮಣ್ಯದ ಕಾಲೇಜಿನ ವಿದ್ಯಾರ್ಥಿಯಾಗಿರುವ ಬಾಲಕಿಯನ್ನು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಚಿದಾನಂದ ಪುಸಲಾಯಿಸಿ ಮನೆಯಿಂದ ಜೂ. 21ರಂದು ರಾತ್ರಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಮರುದಿನ ಬೆಳಗ್ಗೆ ಮನೆ ಬಳಿ ಬಿಟ್ಟು ಪರಾರಿಯಾಗಿದ್ದ. ಆತ ಮೇ 23ರಂದು ಕೂಡ ಆಕೆಯನ್ನು ಆತನ ಮನೆಗೆ ಕರೆದುಕೊಂಡು ಹೋಗಿದ್ದ. ಆತ ಮಗಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ದೂರಿನಲ್ಲಿ ಬಾಲಕಿಯ ತಂದೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ