ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ

ಭಾವನಿಂದಲೂ ಲೈಂಗಿಕ ಕಿರುಕುಳ!

Team Udayavani, Apr 8, 2019, 10:40 AM IST

ಬಂಟ್ವಾಳ: ಹದಿನೇಳರ ಹರೆಯದ ಪುತ್ರಿ ಮೇಲೆ ತಂದೆಯಿಂದ ನಿರಂತರವಾಗಿ ಅತ್ಯಾಚಾರ ನಡೆದ ಘಟನೆ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತನ್ನ ಮೇಲೆ ತಂದೆ ಮೂರು ಬಾರಿ ಅತ್ಯಾಚಾರ ಮಾಡಿದ್ದಾರೆ. ಎರಡು ಬಾರಿ ಮನೆಯಲ್ಲಿ ಒಂದು ಬಾರಿ ಮೆಲ್ಕಾರಿನ ಲಾಡ್ಜ್ನಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪಿಯು ಮೂಲತಃ ಪಾಣೆ ಮಂಗಳೂರಿನವನಾಗಿದ್ದು, ನಾಲ್ಕು ಮದುವೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನಿಗೆ 15 ಮಕ್ಕಳಿದ್ದು, ತನ್ನ 2ನೆ ಪತ್ನಿಯ ಮಗಳ ಮೇಲೆ ಅತ್ಯಾಚಾರ ಎಸಗಿರುದಾಗಿ ಪೊಲೀಸರು ತಿಳಿಸಿದ್ದಾರೆ. ಈತನ ಮೊದಲನೆ ಪತ್ನಿ ಬಿಟ್ಟು ಹೋಗಿದ್ದು, ಉಳಿದವರು ಒಂದೊಂದು ಕಡೆ ವಾಸವಾಗಿದ್ದಾರೆ. ವಾರಗಳ ಹಿಂದೆ ಸಂತ್ರಸ್ತೆ ಮೇಲೆ ಅಕ್ಕನ ಗಂಡ ( ಬಾವ) ಕೂಡ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚೈಲ್ಡ್‌ ಹೆಲ್ಪ್ಲೈನ್‌ನವರು ಸಂತ್ರಸ್ತೆಯನ್ನು ವಿಚಾರಣೆ ನಡೆಸಿದಾಗ ತಂದೆ ಕೂಡ ತನ್ನ ಮೇಲೆ ಮೂರು ಬಾರಿ ಅತ್ಯಾಚಾರ ಮಾಡಿದ್ದಾರೆನ್ನುವ ಆಘಾತಕಾರಿ ವಿಷಯವನ್ನು ತಿಳಿಸಿದ್ದಾಳೆ.

ಬಂಟ್ವಾಳ ಠಾಣೆಯಲ್ಲಿ ಫೋಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ