ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

Team Udayavani, Jan 21, 2022, 3:00 AM IST

ಒಳಹರಿವು ಕಡಿಮೆಯಾದರೆ ಕೈಗಾರಿಕೆಗಳಿಗೆ ರೇಷನಿಂಗ್‌!

ತುಂಬೆ: ಮಂಗಳೂರು ನಗರಕ್ಕೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆ ವಹಿಸಲು ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ನಿಗಾ ವಹಿಸಿದೆ. ಅಗತ್ಯವಾದರೆ ಕೈಗಾರಿಕೆಗಳಿಗೆ ನೀಡುತ್ತಿರುವ ನೀರು ರೇಷನಿಂಗ್‌ ಮಾಡಲು ಚಿಂತನೆ ನಡೆಸಲಾಗಿದೆ.

ಸದ್ಯ ತುಂಬೆ ಡ್ಯಾಂನಲ್ಲಿ ನೀರಿನ ಒಳಹರಿವು ಉತ್ತಮವಾಗಿದ್ದು, 6 ಮೀ. ನೀರು ನಿಲುಗಡೆ ಮಾಡಿ ಹೆಚ್ಚುವರಿ ನೀರನ್ನು ಒಂದು ಗೇಟ್‌ ತೆರೆದು ಹೊರಗೆ ಬಿಡಲಾಗುತ್ತಿದೆ. ಫೆಬ್ರವರಿವರೆಗೂ ಒಳಹರಿವು ಇರುವ ನಿರೀಕ್ಷೆಯಿದೆ. ಇದು ಸಂಪೂರ್ಣ ನಿಂತ ಬಳಿಕ ತುಂಬೆ ಡ್ಯಾಂನ ಎಲ್ಲ ಗೇಟ್‌ಗಳನ್ನು ಬಂದ್‌ ಮಾಡಿ 6 ಮೀ.ನೀರು ನಿಲುಗಡೆ ಮಾಡಲಾಗುತ್ತದೆ. ಆ ವೇಳೆಗೆ ಮಳೆಯಾಗದಿದ್ದರೆ ರೇಷನಿಂಗ್‌ ಸಂಬಂಧಿತ ಕ್ರಮ ಕೈಗೊಳ್ಳಲಾಗುತ್ತದೆ.

ಈ ಎಲ್ಲ ವಿಚಾರಗಳ ಬಗ್ಗೆ ವಿಶೇಷ ನಿಗಾ ವಹಿಸುವ ನಿಟ್ಟಿನಲ್ಲಿ ಇದೀಗ ಮೊದಲ ಸುತ್ತಿನ ಮಹತ್ವದ ಸಭೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಅಧ್ಯಕ್ಷತೆಯಲ್ಲಿ ವಾರದೊಳಗೆ ನಡೆಯಲಿದೆ. ಇದರಲ್ಲಿ ಎಂಎಸ್‌ಇಝಡ್‌, ಎಂಸಿಎಫ್‌, ಎಎಂಆರ್‌ ಡ್ಯಾಂ, ಮೆಸ್ಕಾಂ, ಪಾಲಿಕೆ ಅಧಿಕಾರಿಗಳು, ಸುಯೇಜ್‌ ಸಂಸ್ಥೆಯವರ ಜತೆಗೆ ಸಭೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮತ್ತೂಂದು ಸುತ್ತಿನ ಸಭೆ ನಡೆಸಿ ಕುಡಿಯುವ ನೀರಿನ ಬಗ್ಗೆ ವಿಶೇಷ ನಿಗಾ ವಹಿಸಲು ನಿರ್ದೇಶನ ನೀಡಲಾಗುತ್ತದೆ.

ಪ್ರಸ್ತುತ ತುಂಬೆ ಡ್ಯಾಂನಿಂದ ಮಹಾನಗರದ ಜತೆಗೆ ಉಳ್ಳಾಲ, ಮೂಲ್ಕಿ ಪುರಸಭೆಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದಲ್ಲದೆ ನೇತ್ರಾವತಿ ನದಿಮೂಲವನ್ನು ಆಧಾರವಾಗಿಟ್ಟುಕೊಂಡು ಬಹುಗ್ರಾಮ ಕುಡಿಯುವ ನೀರು ಯೋಜನೆಗಳು ಕಾರ್ಯನಿರ್ವಹಿಸುತ್ತಿದೆ.

2016ರಿಂದ ರೇಷನಿಂಗ್‌ ಆರಂಭ :

2016ರ ಜನವರಿಯಲ್ಲಿಯೇ ನಗರ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಎದುರಿಸಿತ್ತು. ಡ್ಯಾಂನಲ್ಲಿ ನೀರಿಲ್ಲದ ಕಾರಣದಿಂದ ನಗರದಲ್ಲಿ ಟ್ಯಾಂಕರ್‌ ನೀರು ಬಳಸಲಾಗಿತ್ತು. ಅದೂ ಖಾಲಿಯಾದಾಗ, ಖಾಸಗಿ ಬಾವಿಗಳಿಂದ ನೀರು ತರಿಸಲಾಗಿತ್ತು. ಬಳಿಕ ಲಕ್ಯಾ ಡ್ಯಾಂನ ನೀರನ್ನು ಕೊಂಚ ಬಳಸಲಾಯಿತು. ಇದರಿಂದ ಎಚ್ಚೆತ್ತ ಪಾಲಿಕೆಯು 2017ರಲ್ಲಿ ಪ್ರತೀ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್‌ ಆರಂಭಿಸಿತ್ತು. ಕೈಗಾರಿಕೆಗಳಿಗೂ ನೀರು ಕಡಿತ ಮಾಡಲಾಗಿತ್ತು. 2019ರಲ್ಲಿಯೂ ಮುನ್ನೆಚ್ಚರಿಕೆ ಕ್ರಮವಾಗಿ ಕೈಗಾರಿಕೆಗಳಿಗೆ ನೀಡುತ್ತಿರುವ ನೀರಿನ ಪ್ರಮಾಣವನ್ನು ಅರ್ಧದಷ್ಟು ಕಡಿತಗೊಳಿಸಲಾಗಿತ್ತು. 18 ಎಂಜಿಡಿ ನೀರಿನ ಪೈಕಿ 15 ಎಂಜಿಡಿಗೆ ಕಡಿತಗೊಳಿಸಲಾಗಿತ್ತು. ಬಳಿಕ 13, 10.5 ಎಂಜಿಡಿಗೆ ಇಳಿಸಲಾಗಿತ್ತು. ಕಳೆದೆರಡು ವರ್ಷ ನೀರಿನ ಸಮಸ್ಯೆ ಎದುರಾಗದಿದ್ದರೂ ಕೈಗಾರಿಕೆಗಳಿಗೆ ನೀರು ರೇಷನಿಂಗ್‌ ನಿಯಮ ಕೊಂಚ ಮಟ್ಟದಲ್ಲಿ ಜಾರಿಯಲ್ಲಿತ್ತು.

ಕೈಗಾರಿಕೆಗಳಿಗೆ ಎಷ್ಟು ನೀರು? :

ಮಂಗಳೂರು ನಗರಕ್ಕೆ 160 ಎಂಎಲ್‌ಡಿ (ದಿನವೊಂದಕ್ಕೆ ಮಿಲಿಯ ಲೀಟರ್‌) ನೀರು ಇಲ್ಲಿವರೆಗೆ ಪೂರೈಕೆಯಾಗುತ್ತದೆ. ಎಂಜಿಡಿ (ಮಿಲಿಯ ಗ್ಯಾಲನ್ಸ್‌) ಲೆಕ್ಕಾಚಾರದಲ್ಲಿ 160 ಎಂಎಲ್‌ಡಿ ಅಂದರೆ ಸುಮಾರು 35 ಎಂಜಿಡಿ. ತುಂಬೆ ಡ್ಯಾಂನಿಂದ ಎಂಸಿಎಫ್‌ಗೆ 2 ಎಂಜಿಡಿ ಹಾಗೂ ಎನ್‌ಎಂಪಿಟಿಗೆ 0.5 ಎಂಜಿಡಿ, ಇತರ ಕೈಗಾರಿಕೆಗಳಿಗೆ 1ಎಂಜಿಡಿ ನೀರು ಪೂರೈಕೆಯಾಗುತ್ತದೆ. ಬಂಟ್ವಾಳ ಸಮೀಪವಿರುವ ಎಎಂಆರ್‌ ಡ್ಯಾಂನಿಂದ ಎಂಆರ್‌ಪಿಎಲ್‌ಗೆ 6 ಎಂಜಿಡಿ ಹಾಗೂ ವಿಶೇಷ ಆರ್ಥಿಕ ವಲಯಕ್ಕೆ (ಎಸ್‌ಇಝೆಡ್‌) 8 ಎಂಜಿಡಿ ನೀರು ಪೂರೈಕೆಯಾಗುತ್ತದೆ. ಹೀಗೆ ಒಟ್ಟು ಸುಮಾರು 18 ಎಂಜಿಡಿಯಷ್ಟು ನೀರು ವಿವಿಧ ಕೈಗಾರಿಕೆಗಳಿಗೆ ತುಂಬೆ, ಎಎಂಆರ್‌ ಡ್ಯಾಂನಿಂದ ಪೂರೈಕೆಯಾಗುತ್ತದೆ.

ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ :

ಮಂಗಳೂರಿಗೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸದ್ಯ ತುಂಬೆ ಡ್ಯಾಂನಲ್ಲಿ ಒಳಹರಿವು ಉತ್ತಮವಾಗಿದೆ. ಹೀಗಾಗಿ ನೀರಿನ ಸಮಸ್ಯೆ ಈ ಬಾರಿ ಆಗಲಾರದು. ಆದರೂ ನೀರಿನ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಒಂದು ವೇಳೆ ಆವಶ್ಯಕವಾದರೆ ಕೈಗಾರಿಕೆಗಳಿಗೆ ನೀರು ರೇಷನಿಂಗ್‌ ಕ್ರಮ ಕೈಗೊಳ್ಳುವ ಬಗ್ಗೆ ಮುಂದಿನ ದಿನದಲ್ಲಿ ಚರ್ಚೆ ನಡೆಸಲಾಗುವುದು.-ಪ್ರೇಮಾನಂದ ಶೆಟ್ಟಿ,  ಮೇಯರ್‌, ಮಹಾನಗರ ಪಾಲಿಕೆ

- ದಿನೇಶ್‌ ಇರಾ

ಟಾಪ್ ನ್ಯೂಸ್

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

3 ಹುಲಿ ಮರಿಗಳಿಗೆ ತಾಯಿಯಾದ ನಾಯಿ-ವಿಡಿಯೋ ವೈರಲ್

ಈ 3 ಹುಲಿ ಮರಿಗಳಿಗೆ ನಾಯಿಯೇ “ತಾಯಿ’!-ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ: ಜಿಲ್ಲಾಧಿಕಾರಿ ಸೂಚನೆ

ವಿಕಲಚೇತನರ ಸಮಸ್ಯೆ ಪರಿಹಾರ ಸಭೆ : ಜಿಲ್ಲಾಧಿಕಾರಿ ಸೂಚನೆ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

ಶಾಲೆಯಂಗಳದಲ್ಲಿ ಮತ್ತೆ ಮಕ್ಕಳ ಸಂಭ್ರಮ; ಸಡಗರ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.