ರಾಲಿ ಮಾಡಿಯೇ ಸಿದ್ಧ: ದ.ಕ. ಬಿಜೆಪಿ

Team Udayavani, Sep 6, 2017, 7:10 AM IST

bjp.jpg

ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆ. 7ರಂದು ಆಯೋಜಿಸ ಲಾದ “ಮಂಗಳೂರು ಚಲೋ’ ಕಾರ್ಯಕ್ರಮ ಪೂರ್ವ ನಿಗದಿಯಂತೆಯೇ ನಡೆಯಲಿದೆ. ರಾಜ್ಯ ಸರಕಾರ ನಮ್ಮನ್ನು ಯಾವುದೇ ರೀತಿಯಲ್ಲಿ ತಡೆ ದರು ಕೂಡ ನಾವು ಕಾರ್ಯಕ್ರಮ ಮಾಡಿಯೇ ಸಿದ್ಧ. ರಾಜ್ಯದ ವಿವಿಧೆಡೆಯಿಂದ ಬೈಕ್‌ ರ್ಯಾಲಿ ಜತೆಗೆ ಬಸ್‌, ರೈಲುಗಳಲ್ಲಿ ಸಾವಿರಾರು ಬಿಜೆಪಿ ಕಾರ್ಯ ಕರ್ತರು ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಕಾರ್ಯ ಕರ್ತರಿಗೆ ದ.ಕ. ಜಿಲ್ಲಾ ಬಿಜೆಪಿ ವತಿ ಯಿಂದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲು ಸಿದ್ಧ ವಾಗಿದ್ದೇವೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬೈಕ್‌ ರ್ಯಾಲಿ ಬಳಿಕ ಪ್ರಜಾಪ್ರಭುತ್ವ ರೀತಿಯಲ್ಲಿ ಶಾಂತಿಯುತ ಪ್ರತಿಭಟನೆ ಆಯೋಜಿಸಿದೆ. ಅದನ್ನು ಹತ್ತಿಕ್ಕಲು ಸರಕಾರ ಮುಂದಾಗಿರುವ ಕಾರಣದಿಂದ ರಾಜ್ಯಾ ದ್ಯಂತ ಬಿಜೆಪಿ ಕಾರ್ಯಕರ್ತರ ಉತ್ಸಾಹ ಹೆಚ್ಚಾ ಗಿದೆ. ಪೊಲೀಸರು ಪ್ರತಿಭಟನೆಗೆ ಅನು ಮತಿ ನೀಡ  ದಿದ್ದರೆ ನಾವು ಪ್ರತಿಭಟನೆ ನಡೆಸಿಯೇ ಸಿದ್ಧ. ಸೆಕ್ಷನ್‌ ಹೇರಿ ದರೆ, ಸಮಯ ಸಂದರ್ಭ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಬಿಜೆಪಿ ಪ್ರಜಾಪ್ರಭುತ್ವ ರೀತಿಯಲ್ಲಿ ಮಂಗಳೂರು ಚಲೋ ರ್ಯಾಲಿ ಆಯೋಜಿಸಿದೆ. ಕೇಂದ್ರದಲ್ಲಿ ಮತ್ತು 18 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ರಾಜ್ಯದಲ್ಲಿ ವಿರೋಧ ಪಕ್ಷವಾಗಿ ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು. ಆದರೆ, ಯಾವ ಆಧಾರ ದಲ್ಲಿ ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವನ್ನು ರಾಜ್ಯ ಸರಕಾರ ನಡೆಸುತ್ತಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ಸಿದ್ದರಾಮಯ್ಯ ಈಗ ಅಘೋಷಿತ ತುರ್ತು ಪರಿಸ್ಥಿತಿ ಹೇರುವ ಮೂಲಕ ಬಿಜೆಪಿ ರ್ಯಾಲಿಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡುವುದು ಬಿಟ್ಟು ಸಿದ್ದರಾಮಯ್ಯ, ಸಚಿವ ರಮಾನಾಥ ರೈ ಅವರು ಹೇಳಿದಂತೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ನ್ಯಾಯಬದ್ದವಾಗಿ ಹೋರಾಟಕ್ಕೆ ಅನುಮತಿ ಕೇಳಿದರೆ ನಿರಾಕರಿಸುತ್ತಿದ್ದಾರೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾ| ಬ್ರಿಜೇಶ್‌ ಚೌಟ, ಉಮಾನಾಥ ಕೋಟ್ಯಾನ್‌, ಕಿಶೋರ್‌ ರೈ, ಸುದರ್ಶನ ಮೂಡುಬಿದರೆ, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜಾ, ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ಮಂಗಳೂರು ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್‌, ನಮಿತಾ ಶ್ಯಾಂ, ಸಂಜಯ ಪ್ರಭು, ರಾಜೇಶ್‌ ಕೊಟ್ಟಾರಿ ಉಪಸ್ಥಿತರಿದ್ದರು.

ಪೂರ್ವಭಾವಿ ಪ್ರತಿಭಟನೆಯಲ್ಲಿ 1 ಲಕ್ಷ  ಜನ!
“ಮಂಗಳೂರು ಚಲೋಗೆ ಪೂರ್ವ ಭಾವಿಯಾಗಿ ಸೋಮವಾರ ದ.ಕ. ಜಿಲ್ಲೆಯ 232 ಗ್ರಾಮ ಪಂಚಾಯತ್‌ಗಳ ಪೈಕಿ 205 ಕಡೆ ಸೇರಿದಂತೆ ಒಟ್ಟು 260 ಕಡೆ ಪ್ರತಿಭಟನೆ ನಡೆಸಲಾಗಿದೆ. ಈ ಮೂಲಕ ದ.ಕ. ಜಿಲ್ಲೆ ಯಲ್ಲಿಯೇ ಒಟ್ಟು 1 ಲಕ್ಷಕ್ಕೂ ಅಧಿಕ ಕಾರ್ಯ ಕರ್ತರು ಈ ಪ್ರತಿಭಟನೆಯಲ್ಲಿ ಭಾಗ ವಹಿ ಸಿದ್ದಾರೆ. ರಾಜ್ಯದ ಮೂಲೆ ಮೂಲೆ ಯಿಂದ ಸೆ. 7ರಂದು ಬಿಜೆಪಿಯ ಸಾವಿ ರಾರು ಕಾರ್ಯಕರ್ತರು ಭಾಗವಹಿಸ ಲಿದ್ದಾರೆ. ಒಂದು ವೇಳೆ ರಾಜ್ಯದ ಇತರ ಭಾಗಗಳಿಂದ ಬೈಕ್‌ ರ್ಯಾಲಿಯಲ್ಲಿ ಜನರು ಬರಲು ಆಗದಿದ್ದರೆ, ದ.ಕ. ಜಿಲ್ಲೆಯ 10,000 ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗ ವಹಿಸಲಿದ್ದಾರೆ ಎಂದು ಸಂಜೀವ ಮಠಂದೂರು ತಿಳಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.