ಡಿ.ಎಲ್‌.ಇಡಿ/ಡಿ.ಪಿ.ಇಡಿ ಕೋರ್ಸ್‌ಗಳಿಗೆ ದಾಖಲಾತಿ

Team Udayavani, Jun 3, 2017, 11:08 AM IST

online.jpg

ಮಂಗಳೂರು: ಡಿ.ಎಲ್‌.ಇಡಿ/ಡಿ.ಪಿ.ಇಡಿ ಕೋರ್ಸ್‌ಗಳ 2017-18ನೇ ಸಾಲಿನಲ್ಲಿ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಡಿ.ಎಲ್‌.ಇಡಿ ಕೋರ್ಸ್‌ 
ದ್ವಿತೀಯ ಪಿ.ಯು.ಸಿ./12ನೇ ತರಗತಿಯ ಪರೀಕ್ಷೆಯಲ್ಲಿ ಎಸ್‌.ಸಿ/ಎಸ್‌.ಟಿ./ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 45 ಮತ್ತು ಇತರ ಅಭ್ಯರ್ಥಿಗಳು ಕನಿಷ್ಠ ಶೇ. 50 ಅಂಕಗಳನ್ನು ಪಡೆದಿರಬೇಕು.

ಡಿ.ಪಿ.ಇಡಿ ಕೋರ್ಸ್‌ 
ಡಿ.ಪಿ.ಇಡಿ ಕೋರ್ಸ್‌ಗೆ ಸೇರುವ ಎಲ್ಲ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ./12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ ಶೇ. 45 ಅಂಕ ಹಾಗೂ ಶಿಕ್ಷಣ ಇಲಾಖೆ, ವಿಶ್ವವಿದ್ಯಾಲಯ ಅಥವಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ ಶೇ. 40 ಅಂಕ ಪಡೆದಿರಬೇಕು. 

ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಜೂನ್‌ 18ರ ವರೆಗೆ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಆನ್‌ಲೈನ್‌ ಮೂಲಕ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಮೀಸಲಾತಿ ವಿವರಗಳು ಹಾಗೂ ಇತರ ಸೂಚನೆಗಳನ್ನು ವೆಬ್‌ಸೈಟ್‌ www.schooleducation.kar.nic ನಲ್ಲಿ ಪ್ರಕಟಿಸಲಾಗಿದೆ. 

ವೆಬ್‌ಸೈಟ್‌ನಲ್ಲಿನ ಮಾಹಿತಿ ಓದಿಕೊಂಡು ಅರ್ಜಿಗಳನ್ನು ಕ್ರಮವಾಗಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಜೈಲ್‌ ರಸ್ತೆ, ಕೊಡಿಯಾಲ್‌ಬೈಲು, ಮಂಗಳೂರು ಇವರ ಕಚೇರಿ ಸಂಪರ್ಕಿಸಬಹುದು. 
ಅಭ್ಯರ್ಥಿಗಳಿಗೆ ಸೂಚನೆ ದ. ಕ. ಜಿಲ್ಲೆಯಲ್ಲಿನ ಬಲ್ಮಠದ ಸರಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆಯನ್ನು ಕೊಡಿಯಾಲ್‌ಬೈಲ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ವಿಲೀನಗೊಳಿಸಲಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ಸರಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆ, ಬಲ್ಮಠ, ಮಂಗಳೂರು ಸಂಸ್ಥೆಯ ಬದಲಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್‌), ಕೊಡಿಯಾಲ್‌ಬೈಲು, ಮಂಗಳೂರು, ಸಂಸ್ಥೆ ಆಯ್ಕೆ ಮಾಡಿಕೊಳ್ಳಬೇಕು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್‌), ಕೊಡಿಯಾಲ್‌ಬೈಲು, ಮಂಗಳೂರು, ದ.ಕ. ಸಂಸ್ಥೆ ಜಿಲ್ಲೆಯಲ್ಲಿನ ಏಕ ಮಾತ್ರ ಸರಕಾರಿ ಡಿ.ಎಲ್‌.ಇಡಿ ಸಂಸ್ಥೆಯಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ಇದರ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.