ಪಂಪ್‌ವೆಲ್ ಬಸ್‌ ನಿಲ್ದಾಣ ಪಡೀಲ್‌ಗೆ ಸ್ಥಳಾಂತರ ?


Team Udayavani, Jun 25, 2019, 5:37 AM IST

2406MLR16-JUMPWELL-BUSSTAND

ವಿಶೇಷ ವರದಿ-ಮಹಾನಗರ: ಸುಸಜ್ಜಿತ ಬಸ್‌ ನಿಲ್ದಾಣಕ್ಕಾಗಿ 10 ವರ್ಷಗಳ ಹಿಂದೆ ಪಂಪ್‌ವೆಲ್‌ನಲ್ಲಿ ಭೂಸ್ವಾಧೀನ ಪಡಿಸಿ, ವಿವಿಧ ಸ್ತರದಲ್ಲಿ ಚರ್ಚೆ- ಸಭೆಗಳೆಲ್ಲ ನಡೆದ ಬಳಿಕ ಈಗ ಇದನ್ನು ಪಂಪ್‌ವೆಲ್ನಿಂದ ಪಡೀಲ್‌ಗೆ ಸ್ಥಳಾಂತರಿಸಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮರು ಚಿಂತನೆ ನಡೆಸುತ್ತಿದೆ.

ಪಡೀಲ್‌ನಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದೇ ಪರಿಸರದಲ್ಲಿ ಬಸ್‌ ನಿಲ್ದಾಣ ಕೂಡ ನಿರ್ಮಾಣವಾದರೆ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ ಕೂಡ ಸನಿಹದಲ್ಲಿಯೇ ಇರುವ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣವನ್ನು ಪಡೀಲಿಗೆ ಸ್ಥಳಾಂತರಿಸುವುದು ಸೂಕ್ತ ಎಂಬ ಬಗ್ಗೆ ಚರ್ಚೆ ಶುರುವಾದ ಹಿನ್ನೆಲೆಯಲ್ಲಿ ಈ ಯೋಜನೆ ಮರುಜೀವ ಪಡೆದುಕೊಂಡಿದೆ.

ಪಡೀಲ್ನ ನೂತನ ಜಿಲ್ಲಾಧಿಕಾರಿ ಸಂಕೀರ್ಣದ ಸಮೀಪದಲ್ಲಿ ಸುಮಾರು 17 ಎಕ್ರೆ ಖಾಸಗಿ ಭೂಮಿ ಲಭ್ಯವಿದ್ದು, ಇದನ್ನು ನೂತನ ಬಸ್‌ ನಿಲ್ದಾಣಕ್ಕೆ ಬಳಸಿಕೊಳ್ಳುವ ಬಗ್ಗೆ ಭೂಮಾಲಕರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ. ಪಂಪ್‌ವೆಲ್ನಿಂದ ಪಡೀಲ್ ಬಸ್‌ ನಿಲ್ದಾಣಕ್ಕೆ ಸುಮಾರು 2ರಿಂದ 3 ಕಿ.ಮೀ. ದೂರವಿದೆ.

ಪಂಪ್‌ವೆಲ್ ನಿರಾಸಕ್ತಿ ಯಾಕೆ ?
ಪಂಪ್‌ವೆಲ್ ಈಗಾಗಲೇ ಫ್ಲೈಓವರ್‌ ಸಹಿತ ವಿವಿಧ ಕಾರಣದಿಂದ ಸಂಚಾರ ಒತ್ತಡದ ಕೇಂದ್ರವಾಗಿ ಪರಿಣಮಿಸಿದೆ. ಮುಂದೆ ಇದೇ ವ್ಯಾಪ್ತಿಯಲ್ಲಿ ಬಸ್‌ ನಿಲ್ದಾಣ ಮಾಡಿದರೆ ಟ್ರಾಫಿಕ್‌ ಒತ್ತಡ ಇನ್ನಷ್ಟು ಹೆಚ್ಚಳವಾಗಬಹುದು ಎಂಬ ಆತಂಕದಿಂದಾಗಿ ಬಸ್‌ ನಿಲ್ದಾಣ ಬೇರೆ ಕಡೆಗೆ ಸ್ಥಳಾಂತರಿಸುವುದೇ ಉತ್ತಮ ಎಂಬ ಅಭಿಪ್ರಾಯ ಸ್ಮಾರ್ಟ್‌ ಸಿಟಿ ಸಭೆಗಳಲ್ಲಿ ವ್ಯಕ್ತವಾಗಿವೆ.

ಜತೆಗೆ, ಸದ್ಯ ಪಂಪ್‌ವೆಲ್ನಲ್ಲಿ ನಿಗದಿ ಮಾಡಿದ ಜಾಗದಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆಗಳಾಗುವ ಬಗ್ಗೆಯೂ ತಜ್ಞರು ತಿಳಿಸಿದ್ದಾರೆ. ಪಂಪ್‌ವೆಲ್ ಬಸ್‌ ನಿಲ್ದಾಣದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಬಗ್ಗೆ ಹೆದ್ದಾರಿ ಇಲಾಖೆ ಮತ್ತು ಪಾಲಿಕೆ ಮಧ್ಯೆ ವಿಚಾರ ವ್ಯತ್ಯಾಸ ಮೂಡಿಬಂದ ಹಿನ್ನೆಲೆಯಲ್ಲಿ ಈ ಯೋಜನೆ ಕಾರ್ಯ ಸಾಧುವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

‘ಸಮಗ್ರ ಟ್ರಾನ್ಸ್‌ಪೊರ್ಟೇಶನ್‌ ಹಬ್‌’ ಕನಸಿತ್ತು!
ಪಂಪ್‌ವೆಲ್ನಲ್ಲಿ ಸುಮಾರು 20 ಎಕ್ರೆ ಪ್ರದೇಶದಲ್ಲಿ ಖಾಸಗಿ ಇಂಟರ್‌ ಸಿಟಿ, ಇಂಟ್ರಾಸಿಟಿ ಬಸ್‌ಗಳಿಗೆ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಶಾಪಿಂಗ್‌ ಸೆಂಟರ್‌, ಕಚೇರಿಗಳನ್ನು ನಿರ್ಮಿಸುವ ‘ಸಮಗ್ರ ಟ್ರಾನ್ಸ್‌ಪೋರ್ಟೆಶನ್‌ ಹಬ್‌’ ನಿರ್ಮಾಣಕ್ಕೆ ಮಂಗಳೂರು ಮಹಾ ನಗರಪಾಲಿಕೆ ಯೋಜನೆ ರೂಪಿಸಿತ್ತು. ಇದಕ್ಕೆ ಸಂಬಂಧಿಸಿ 2009ರಲ್ಲಿ 7.23 ಎಕ್ರೆ ಖಾಸಗಿ ಜಮೀನು ಸ್ವಾಧೀನ ಪಡಿಸಲಾಗಿತ್ತು.

ಇದರ ಸುತ್ತ ಇರುವ ಸರಕಾರಿ ಜಾಗದ ಪರಂಬೋಕು, ಖಾಸಗಿ ಸ್ವಾಮ್ಯದ ಸುಮಾರು 4 ಎಕ್ರೆ ಜಮೀನು ಕೂಡ ಇದೇ ಉದ್ದೇಶಕ್ಕಾಗಿ ಕಾದಿರಿಸಲಾಗಿತ್ತು. ಹೆಚ್ಚುವರಿಯಾಗಿ 11.59 ಎಕ್ರೆ ಖಾಸಗಿ ಜಮೀನು ಸ್ವಾಧೀನ ಮಾಡಲಾಗಿತ್ತು. ಆದರೆ 11.59 ಎಕ್ರೆ ಭೂಮಿಯನ್ನು ಕಳೆದ ಬಾರಿ ಪಾಲಿಕೆ ಕೈಬಿಟ್ಟಿತ್ತು.

ಉಪ ಬಸ್‌ ನಿಲ್ದಾಣ
ನಗರದಲ್ಲಿ ಸುಸಜ್ಜಿತ ಬಸ್‌ ನಿಲ್ದಾಣಗಳನ್ನು ಮಾಡುವುದು ಸ್ಮಾರ್ಟ್‌ ಸಿಟಿ ಯೋಜನೆಯ ಉದ್ದೇಶ. ಇದರಂತೆ ಪಂಪ್‌ವೆಲ್ನ ಮುಖ್ಯ ಬಸ್‌ನಿಲ್ದಾಣವನ್ನು ಪಡೀಲ್ಗೆ ಸ್ಥಳಾಂತರಿಸಲು ಯೋಚಿಸಲಾಗಿದೆ. ಹೀಗಾಗಿ ಪಂಪ್‌ವೆಲ್ನಲ್ಲಿ ‘ಉಪ ಬಸ್‌ ನಿಲ್ದಾಣ’ ನಿರ್ಮಿಸುವ ಬಗ್ಗೆ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಹಾಗೇ ಕೂಳೂರಿನಲ್ಲಿಯೂ ಉಪಬಸ್‌ನಿಲ್ದಾಣ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಆದರೆ, ಈ ಕುರಿತಂತೆ ಸ್ಮಾರ್ಟ್‌ಸಿಟಿ ಸಭೆಗಳಲ್ಲಿ ಪ್ರಸ್ತಾವ ಆಗಿದೆ.

 ಪಡೀಲ್‌ನಲ್ಲೇ ಬಸ್‌ ನಿಲ್ದಾಣ

ಪಂಪ್‌ವೆಲ್ನಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಿಸುವ ಪ್ರಸ್ತಾವವನ್ನು ಕೈಬಿಟ್ಟಿಲ್ಲ. ಆದರೆ, ಪಡೀಲ್ನಲ್ಲಿ ಜಿಲ್ಲಾಧಿಕಾರಿ ಕಚೇರಿ ಬರುವ ಕಾರಣದಿಂದ ಅದೇ ಪರಿಸರದಲ್ಲಿ ಸುಸಜ್ಜಿತ ಬಸ್‌ನಿಲ್ದಾಣ ಮಾಡುವ ಬಗ್ಗೆ ಈಗಾಗಲೇ ತೀರ್ಮಾನ ಮಾಡಲಾಗಿದೆ. ಜಾಗ ನಿಗದಿಯಾದ ಬಳಿಕ ಪಂಪ್‌ವೆಲ್ ಬಸ್‌ನಿಲ್ದಾಣಕ್ಕಾಗಿ ಮೀಸಲಿಟ್ಟ ಸ್ಥಳದ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
ನಾರಾಯಣಪ್ಪ,

ಆಯುಕ್ತರು, ಮನಪಾ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.