
Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ
ಸುರ್ಯ ದೇವಸ್ಥಾನದ ಮೊಕ್ತೇಸರ
Team Udayavani, May 31, 2023, 2:35 PM IST

ಮಂಗಳೂರು: ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ (ACP) ಶ ಸುಭಾಷ್ ಚಂದ್ರ ಸುರ್ಯಗುತ್ತು(70) ಮೇ 31(ಬುಧವಾರ) ಮುಂಜಾನೆ 2:45 ಕ್ಕೆ ನಿಧನ ಹೊಂದಿದ್ದಾರೆ.
ಮಂಗಳೂರು ಅಶೋಕನಗರದ ಪಾಲ್ಗುಣಿ ನಗರದನಿವಾಸದಲ್ಲಿ ಅಂತಿಮ ದರ್ಶನದ ನಂತರ ಅವರ ಹುಟ್ಟೂರಾದ ಸುರ್ಯಗುತ್ತಿನಲ್ಲಿ ಅಂತಿಮ ವಿಧಿ ವಿಧಾನವನ್ನು ಮಧ್ಯಾಹ್ನ ನೆರವೇರಿಸಲಾಗಿದೆ.
ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಸುಭಾಷ್ ಚಂದ್ರ ಅವರ ನಿಧಾನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕೆಂಜಾರಿನಲ್ಲಿ ಕೋಸ್ಟ್‌ಗಾರ್ಡ್ ಅಕಾಡೆಮಿ ನಿರ್ಮಾಣ

Train ಮಂಗಳೂರು-ಗೋವಾ ಹೊಸ ವಂದೇ ಭಾರತ್ ರೈಲು: ನಳಿನ್ ಕುಮಾರ್

AEPS Fraud: ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ನಿಂದ ಮಾಹಿತಿ ಕಳವು?

Mangaluru ಯುನಿಸೆಕ್ಸ್ ಸೆಲೂನ್‌ಗಳಿಗೆ ಪೊಲೀಸ್ ಆಯುಕ್ತರ ಎಚ್ಚರಿಕೆ

ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ಕ್ರಮ: ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ
MUST WATCH
ಹೊಸ ಸೇರ್ಪಡೆ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ