Dakshina Kannada ಅಂಗನವಾಡಿಗಳಲ್ಲಿ ಮತ್ತೆ ಅನ್ನ-ಸಾಂಬಾರು?

Team Udayavani, Apr 8, 2024, 7:35 AM IST

Dakshina Kannada ಅಂಗನವಾಡಿಗಳಲ್ಲಿ ಮತ್ತೆ ಅನ್ನ-ಸಾಂಬಾರು?

ಮಂಗಳೂರು: ಸರಕಾರದ ಹೊಸ ಆಹಾರ ಪಟ್ಟಿಯಂತೆ ಅಂಗನವಾಡಿಗಳಿಗೆ ಮಕ್ಕಳಿಗೆ ಗೋಧಿ ಉಪ್ಪಿಟ್ಟು ಮತ್ತು ಸಿಹಿ ಪೊಂಗಲ್‌ ನೀಡಲಾಗುತ್ತಿದ್ದು, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ಜಿಲ್ಲೆಯಲ್ಲಿ ಮತ್ತೆ ಅನ್ನ – ಸಾಂಬಾರು ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಈ ಬಗ್ಗೆ ಅನುಮತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದು, ಸರಕಾರದಿಂದಲೂ ಪೂರಕ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಆದ್ದರಿಂದ ಜಿಲ್ಲೆಯಲ್ಲಿ ಈ ಹಿಂದೆ ಮಕ್ಕಳಿಗೆ ನೀಡುತ್ತಿದ್ದಂತೆ ಮುಂದಿನ ತಿಂಗಳಿಂದಲೇ ಉಪ್ಪಿಟ್ಟು – ಸಿಹಿ ಪೊಂಗಲ್‌ ಬದಲಿಗೆ ಅನ್ನ ಸಾಂಬಾರು ನೀಡಲಾಗುವುದು ಎಂದು ಇಲಾಖೆಯ ಅಧಿಕಾರಿ ಗಳು ತಿಳಿಸಿದ್ದಾರೆ. ಅಕ್ಕಿ, ಬೇಳೆ ಮತ್ತು ದಿನಸಿ ಸಾಮಗ್ರಿ
ಗಳನ್ನು ಪೂರೈಸುವಂತೆಯೂ ಸರಕಾರಕ್ಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹೊಸ ಮೆನುವಿನ ಪ್ರಕಾರ ಮಕ್ಕಳಿಗೆ ಗೋಧಿ ಉಪ್ಪಿಟ್ಟು ಮತ್ತು ಸಿಹಿ ಪೊಂಗಲ್‌ ನೀಡಲು ಆರಂಭಿಸಿ ಸುಮಾರು ಎರಡು ತಿಂಗಳಾಗಿದೆ. ಆದರೆ ಇದಕ್ಕೆ ಮಕ್ಕಳು ಅದಕ್ಕೆ ಒಗ್ಗಿಕೊಳ್ಳುತ್ತಿಲ್ಲ. ಊಟಕ್ಕೆ ಅನ್ನ-ಸಾಂಬಾರು ನೀಡುತ್ತಿದ್ದಾಗ ಎಲ್ಲರೂ ಸಂತೋಷದಿಂದ ಊಟ ಮಾಡುತ್ತಿದ್ದರು ಎನ್ನುವುದು ಅಂಗನವಾಡಿ ಕಾರ್ಯಕರ್ತೆಯರ ಮಾತು. ಹೊಸ ಮೆನುವಿನಂತೆ ತಿಂಗಳಲ್ಲಿ 15 ದಿನ ಉಪ್ಪಿಟ್ಟು ಮತ್ತು 10 ದಿನ ಸಿಹಿ ಪೊಂಗಲ್‌ ನೀಡಲಾಗುತ್ತಿದೆ.

ಉಡುಪಿಯಲ್ಲಿ ಸಮಸ್ಯೆ ಆಗಿರಲಿಲ್ಲ
ಹೊಸ ಮೆನು ಬಂದಿತ್ತಾದರೂ ಉಡುಪಿ ಜಿಲ್ಲೆಯಲ್ಲಿ ಅಕ್ಕಿ ದಾಸ್ತಾನು ಇದ್ದ ಕಾರಣ ಮಕ್ಕಳಿಗೆ ಈವರೆಗೂ ನ್ನ – ಸಾಂಬಾರನ್ನೇ ನೀಡಲಾಗುತ್ತಿತ್ತು. ಅಕ್ಕಿ ಪೂರೈಕೆಯಲ್ಲಿ ಯಾವುದೇ ಕೊರತೆ ಆಗಿರಲಿಲ್ಲ. ಈಗ ಮತ್ತೆ ಅಕ್ಕಿ ಪೂರೈಕೆಯಾಗಿದೆ. ಆದ ಕಾರಣ ಜಿಲ್ಲೆಯ ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರದಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ ಎಂದು ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ತಿಳಿಸಿದ್ದಾರೆ.

ಉದಯವಾಣಿ ವರದಿ
ಹೊಸ ಮೆನುವಿನಂತೆ ತಯಾರಿಸಿ ನೀಡುವ ಆಹಾರವನ್ನು ಕರಾವಳಿಯ ಮಕ್ಕಳಿಗೆ ಒಗ್ಗದಿರುವ ಬಗ್ಗೆ ಉದಯವಾಣಿಯು ಮಾ. 22ರಂದು “ಅಂಗನವಾಡಿ ಆಹಾರದ ಹೊಸ ಮೆನುವಿನಲ್ಲಿ ಅನ್ನ ನಾಪತ್ತೆ; ಒಗ್ಗದ ಹೊಸ ಆಹಾರ: ಕಿಚಡಿಗೆ ಮುಖ ಕಿವುಚುವ ಪುಟಾಣಿಗಳು’ ತಲೆಬರಹದಲ್ಲಿ ಮಾ. 22ರಂದು ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.