ಬೆಳ್ಳಾರೆ: ವ್ಯಾನ್ – ಸ್ಕೂಟಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು

Team Udayavani, Jan 14, 2020, 3:06 PM IST

ಸುಳ್ಯ: ವ್ಯಾನ್ ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ನಡೆದಿದೆ.

ಮೃತಪಟ್ಟ ಸ್ಕೂಟಿ ಸವಾರರನ್ನು ಕೊಲ್ಲಮೊಗ್ರ ಚಾಂತಳದ ಚಿದಾನಂದ (40) ಎಂದು ಗುರುತಿಸಲಾಗಿದೆ

ಕನಕಮಜಲಿನಲ್ಲಿ ತನ್ನ ಸಂಬಂಧಿಕರ ಮನೆಯ ಗೃಹಪ್ರವೇಶ ಪೂರ್ವ ಕಾರ್ಯಕ್ರಮಕ್ಕೆ ಸೋಮವಾರ ಹೋದವರು ಇಂದು ವಾಪಾಸು ಮನೆಗೆ ತೆರಳುತ್ತಿದ್ದಾಗ ಕಾವಿನಮೂಲೆಯಲ್ಲಿ ಈ ಘಟನೆ ನಡೆದಿದೆ.

ವ್ಯಾನ್ ಬೆಳ್ಳಾರೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿತ್ತು. ಹಾಗೂ ಚಿದಾನಂದ ಅವರು ಸೋಣಂಗೇರಿ ಕಡೆಯಿಂದ ಬೆಳ್ಳಾರೆಗೆ ಹೋಗುತ್ತಿದ್ದರು. ಢಿಕ್ಕಿಯ ಪರಿಣಾಮ ಸ್ಕೂಟಿ ಸವಾರ ಚಿದಾನಂದ ಅವರ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ವಿನೀತ್ ಎಂಬವರು ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ