ಸಚಿವ ಈಶರಪ್ಪ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ
ಬೆಳ್ತಂಗಡಿ ಯುವ ಕಾಂಗ್ರೆಸ್‌ನಿಂದ ಮೂರು ಮಾರ್ಗದ ಬಳಿ
Team Udayavani, Apr 14, 2022, 9:50 AM IST
ಬೆಳ್ತಂಗಡಿ: ನಿಗೂಢ ಸಾವನ್ನಪ್ಪಿದ ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಬೆಳ್ತಂಗಡಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಪ್ರತಿಭಟನಕಾರರು ರಾಜ್ಯ ಸರಕಾರದ ವಿರುದ್ಧ ಹಾಗೂ ಈಶ್ವರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ವ್ಯಕ್ತಡಿಸಿದರು. ಅವರು ಈಶ್ವರಪ್ಪನವರ ಪ್ರತಿಕೃತಿ ಧಹಿಸಿ ರಸ್ತೆ ತಡೆ ಮಾಡಿದರು. ರಸ್ತೆ ತಡೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದರು.
ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಎಸ್. ಕೆ. ಹಕೀಂ ಕೊಕ್ಕಡ, ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ, ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಾಘವೇಂದ್ರ ಪೂಜಾರಿ, ಇಂಟಕ್ ನಗರ ಅಧ್ಯಕ್ಷ ನವೀನ್ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ, ಸಾಮಾಜಿಕ ಜಾಲತಾಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್. ನಿರಾಲ್ಕೆ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಭಿದೇವ್ ಆರಿಗಾ, ಅಲ್ಪಸಂಖ್ಯಾಕ ಘಟಕದ ಜಿಲ್ಲಾ ಉಪಾಧ್ಯಕ್ಷ ಖಾಲಿದ್ ಕೆ.ಎಚ್., ಗಣೇಶ್ ಕಣಿಯೂರು, ಆರೀಫ್, ನೌಷದ್ ನಾವೂರ, ಗುರುರಾಜ್ ಗುರಿಪಳ್ಳ, ಮನೋಹರ್ ಇಳಂತಿಲ, ಸುಧೀರ್ ದೇವಾಡಿಗ, ಪ್ರಜ್ವಲ್ ಜೈನ್ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್ ತ್ಯಾಜ್ಯವಾಗಿ ಪತ್ತೆ
ರೈತರಿಗೆ ಕುಮ್ಕಿ, ಬಾಣೆ ಜಮೀನು ಹಕ್ಕು ವಿತರಣೆ: ಸಂಪುಟ ಉಪಸಮಿತಿ ರಚನೆ : ಸಚಿವ ಸುನಿಲ್
ಸೆಪ್ಟಂಬರ್ ಅಂತ್ಯದೊಳಗೆ 1 ಸಾವಿರ ಚಾರ್ಜಿಂಗ್ ಸೆಂಟರ್: ಸಚಿವ ಸುನಿಲ್
ನಕಲಿ ದಾಖಲೆ ಮೂಲಕ ಹಕ್ಕುಪತ್ರ ಪಡೆದ ಪ್ರಕರಣ : ಹಕ್ಕುಪತ್ರ ರದ್ದುಪಡಿಸಿ ತಹಶೀಲ್ದಾರ್ ಆದೇಶ
ಕಬಕ: ರೈಲು ಢಿಕ್ಕಿ ಹೊಡೆದು ಯುವಕ ಸಾವು