ಕೆರೆ ಜಮೀನಿನಲ್ಲಿ ರಸ್ತೆ ನಿರ್ಮಾಣ: ದೂರು

Team Udayavani, May 28, 2018, 5:15 AM IST

ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ. 33/3ರಲ್ಲಿ 0.62 ಎಕರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮೂಡಿ ಕೆರೆಯ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ರಸ್ತೆ ನಿರ್ಮಿಸಿರುವುದರ ವಿರುದ್ಧ ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪರಿಸರಕ್ಕೆ ನೀರುಣಿಸುತ್ತಿದ್ದ ಕೆರೆ
ಅರ್ಪಾಜೆಯ ಸರಕಾರಿ ಕೆರೆ ಉದೇರಿ, ನಾಲ್ಗುತ್ತು ಹಾಗೂ ಅರ್ಪಾಜೆ ಪರಿಸರದ ಕೃಷಿ ತೋಟಗಳಿಗೆ ಹಾಗೂ ಭತ್ತದ ಗದ್ದೆಗಳಿಗೆ ನೀರುಣಿಸುತ್ತಿತ್ತು. ಈ ಪರಿಸರದಲ್ಲಿ ಅಂತರ್ಜಲ ಮಟ್ಟ ಏರಿಕೆಗೂ ಕಾರಣವಾಗಿತ್ತು. ಆದರೆ ಇದೀಗ ಈ ಕೆರೆಯಲ್ಲಿ ಮಳೆಗಾಲದಲ್ಲಿಯೂ ನೀರು ನಿಲ್ಲಲು ಅವಕಾಶ ನೀಡುತ್ತಿಲ್ಲ. ಕೆರೆಯ ಪಶ್ಚಿಮ ಭಾಗದಲ್ಲಿ ಹೆಚ್ಚುವರಿ ನೀರು ಹರಿದು ಹೋಗಲು ಇರುವ ಕಾಲುವೆಯನ್ನು ಸುಮಾರು 7ರಿಂದ 8 ಅಡಿ ಆಳಗೊಳಿಸಿರುವುದರಿಂದ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ನೀರು ನಿಲ್ಲದೇ ಇರುವುದರಿಂದ ಕೆರೆಯು ಬಯಲು ಪ್ರದೇಶದಂತಾಗಿದೆ. ಪರಿಸರದಲ್ಲಿ ಅಂತ ರ್ಜಲ ಮಟ್ಟವೂ ಕುಸಿದಿದೆ. ಆದುದರಿಂದ ಕೆರೆಯ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಯ ನೀರು ಹರಿದು ಹೋಗುವ ಕಾಲುವೆಯನ್ನು ಮುಚ್ಚಿಸಿ ಕೆರೆಯನ್ನು ಸಂರಕ್ಷಣೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ನೀಡಿರುವ ದೂರಿನ ಪ್ರತಿಯನ್ನು ಪುತ್ತೂರು ಸಹಾಯಕ ಕಮೀಶನರ್‌, ಕಡಬ ವಿಶೇಷ ತಹಶೀಲ್ದಾರ್‌, ಕಡಬ ಕಂದಾಯ ನಿರೀಕ್ಷಕರು ಹಾಗೂ ಕಡಬ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗೂ ಕಳುಹಿಸಲಾಗಿದೆ.

ತನಿಖೆಗೆ ಸೂಚನೆ
ಅರ್ಪಾಜೆ ಕೆರೆ ಒತ್ತುವರಿಯಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸ್ಥಳ ತನಿಖೆ ನಡೆಸಿ ಕೆರೆಯನ್ನು ಸರ್ವೆ ನಡೆಸಲು ಕಡಬ ಕಂದಾಯ ನಿರೀಕ್ಷಕರಿಗೆ ಸೂಚಿಸಲಾಗಿದೆ. ಸರಕಾರಿ ಕೆರೆ ಒತ್ತುವರಿ ಮಾಡಲು ಅವಕಾಶ ಇಲ್ಲ. ಸರ್ವೆ ವೇಳೆ ಕೆರೆ ಒತ್ತುವರಿಯಾಗಿದ್ದು ಕಂಡುಬಂದಲ್ಲಿ ಒತ್ತುವರಿಯನ್ನು ತೆರವುಗೊಳಿಸಲಾಗುವುದು.
– ಅನಂತ ಶಂಕರ, ಪುತ್ತೂರು ತಹಶೀಲ್ದಾರ್‌

— ನಾಗರಾಜ್‌ ಎನ್‌. ಕೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ