ಮಚ್ಚಿನ ಶಾಲೆ: ರಸ್ತೆ ದಾಟಲು ಸುರಕ್ಷತಾ ಕ್ರಮ ನಿರ್ಲಕ್ಷ್ಯ 

Team Udayavani, Jul 30, 2017, 5:50 AM IST

Maccbina-29-7.jpg

– ಮುಖ್ಯ ರಸ್ತೆಯಾದರೂ ಸೂಚನಾ ಫಲಕ, ಬ್ಯಾರಿಕೇಡ್‌ ಇಲ್ಲ; ಅಪಾಯಕಾರಿ ಸ್ಥಳ

ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಶತಮಾನ ಕಳೆದು ಅಭಿವೃದ್ಧಿ ಹೊಂದುತ್ತಾ ಬಂದಿದೆ. ಆದರೆ ಇಲ್ಲಿಗೆ ಬರುವ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ಸುರಕ್ಷತೆ ಒದಗಿಸುವ ಆವಶ್ಯಕತೆ ಇದೆ. ಮಚ್ಚಿನ ಪ್ರಾಥಮಿಕ ಶಾಲೆ ಮಡಂತ್ಯಾರು-ಕಲ್ಲೇರಿ ಮುಖ್ಯರಸ್ತೆಯ ಪಕ್ಕದಲ್ಲೇ ಇದ್ದರೂ ಇಲ್ಲಿ ‘ಶಾಲಾ ವಠಾರ’ ಎನ್ನುವ ಸೂಚನಾ ಫಲಕ ಎಲ್ಲೂ ಕಾಣಲು ಸಿಗುವುದಿಲ್ಲ. ಹಲವು ವರ್ಷಗಳ ಹಿಂದೆ ಯುವಕಮಂಡಲದ ವತಿಯಿಂದ ಹಾಕಲಾಗಿದ್ದ ಸೂಚನಾ ಫಲಕ ಕೂಡ ತುಕ್ಕುಹಿಡಿದು ಬರವಣಿಗೆ ಅಳಿಸಿಹೋಗಿದೆ.

ಹಲವು ಬಾರಿ ಅವಘಡ
ಶಾಲೆ ಬಿಟ್ಟ ತತ್‌ಕ್ಷಣ ಮಕ್ಕಳು ಮುಖ್ಯ ರಸ್ತೆಯತ್ತ ಓಡಿಬರುತ್ತಾರೆ. ಇದು ಹೆತ್ತವರ ಆತಂಕಕ್ಕೆ ಕಾರಣವಾಗಿದೆ. ಮುಖ್ಯರಸ್ತೆಯಲ್ಲಿ ಬರುವ ವಾಹನಗಳು ಈ ಸ್ಥಳದಲ್ಲಿ ವೇಗ ಕಡಿಮೆಗೊಳಿಸಬೇಕೆಂಬ ಸೂಚನಾ ಫ‌ಲಕವೂ ಇಲ್ಲದೇ ಇರುವುದರಿಂದ ವಾಹನಗಳು ವೇಗವಾಗಿ ಬರುತ್ತಿರುತ್ತವೆ. ಇದರಿಂದಾಗಿ ಹಲವು ಬಾರಿ ಇಲ್ಲಿ ಅಪಘಾತ ಸಂಭವಿಸಿವೆ.

ಶಿಕ್ಷಕರಿಂದ ಸಂಪೂರ್ಣ ನಿಯಂತ್ರಣ ಅಸಾಧ್ಯ
ಶಿಕ್ಷಕರು ಮಕ್ಕಳ ಬಗ್ಗೆ  ಹೆಚ್ಚಿನ ಕಾಳಜಿ ವಹಿಸುತ್ತಾರೆ. ರಸ್ತೆದಾಟುವಾಗ ಸಾಧ್ಯವಾದಷ್ಟು ಎಚ್ಚರಿಕೆ ವಹಿಸುವಂತೆ ಮಾಡುತ್ತಾರೆ. ಆದರೆ ಮಕ್ಕಳು ಅಡ್ಡಾದಿಡ್ಡಿ ಓಡುವುದು ಇದ್ದೇ ಇದೆ. ಹಾಗಾಗಿ ಇಲ್ಲಿ ವಾಹನ ಚಾಲಕರು ಕೂಡ ಒಂದಷ್ಟು ಹೆಚ್ಚಿನ ಎಚ್ಚರದಿಂದ ವಾಹನ ಚಲಾಯಿಸುವಂತೆ ಮಾಡಬೇಕಾಗಿದೆ. ಸ್ಥಳೀಯ ವಾಹನ ಚಾಲಕರಿಗೆ ಶಾಲಾ ಮಕ್ಕಳ ಬಗ್ಗೆ ತಿಳಿದಿರುತ್ತದೆ. ಅವರು ಜಾಗರೂಕತೆ ವಹಿಸುತ್ತಾರೆ. ಆದರೆ ಇತರರು ವೇಗವಾಗಿ ವಾಹನ ಚಲಾಯಿಸುತ್ತಾರೆ.

ಭದ್ರತಾ ಸಿಬಂದಿ ನೇಮಕ ಸಾಧ್ಯವೆ?
ಖಾಸಗಿ ಶಾಲೆಗಳಲ್ಲಿ ಮಕ್ಕಳ ಭದ್ರತೆಗಾಗಿ ಭದ್ರತಾ ಸಿಬಂದಿ ನೇಮಿಸುತ್ತಾರೆ. ಇವರು ರಸ್ತೆ ದಾಟುವಾಗಲೂ ಸಹಾಯ ಮಾಡುತ್ತಾರೆ. ಆದರೆ ಇದು ಸರಕಾರಿ ಶಾಲೆ. ಇಲ್ಲಿ ವಾಚ್‌ಮನ್‌ ನಿಯೋಜನೆ ಕಷ್ಟಕರ. ಸಂಘ ಸಂಸ್ಥೆಗಳು ಈ ಬಗ್ಗೆ ಆಸಕ್ತಿ ವಹಿಸಿದರೆ ವಿದ್ಯಾರ್ಥಿಗಳಿಗೆ ಸುರಕ್ಷತೆ, ಹೆತ್ತವರು ನೆಮ್ಮದಿಯ ನಿಟ್ಟುಸಿರುವ ಬಿಡಬಹುದು. ಇಲ್ಲವಾದರೆ ಪೊಲೀಸರು ತುರ್ತು ಗಮನ ನೀಡುವುದು ಅವಶ್ಯ. ನೆತ್ತರ, ತಣ್ಣೀರುಪಂಥ, ಬಂಗೇರಕಟ್ಟೆ ಕಡೆಯಿಂದ ಬರುವ ಮಕ್ಕಳು ಮುಖ್ಯರಸ್ತೆಯಿಂದಲೇ ನಡೆದುಕೊಂಡು ಬರುವುದು ಅನಿವಾರ್ಯವಾಗಿದೆ.

ಬ್ಯಾರಿಕೇಡ್‌ಗೆ ಮನವಿ 
ಶಾಲಾ ಮಕ್ಕಳು ದಿನ ನಿತ್ಯ ಶಾಲೆ ಬಿಡುವಾಗ ಮುಖ್ಯ ರಸ್ತೆ ಕಡೆ ಓಡಿ ಬರುವುದು ಅಪಾಯಕಾರಿಯಾಗಿದೆ. ಹಲವು ಬಾರಿ ಅನಾಹುತಗಳು ಸಂಭವಿಸಿವೆ. ಪೊಲೀಸ್‌ ಜನಸಂಪರ್ಕ ಸಭೆಯಲ್ಲಿ ಬ್ಯಾರಿಕೇಡ್‌ ನೀಡುವ ಬಗ್ಗೆ ಮನವಿ ಮಾಡಲಾಗಿದೆ. ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. 
– ಹರೀಶ್‌ ಕುಮಾರ್‌, ಬಳ್ಳಮಂಜ

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.